ಭಾನುವಾರ, ಮೇ 5, 2024
ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2ನೇ ಸ್ಥಾನಕ್ಕೇರಿದ್ದ ಅಶ್ವಿನ್;  ಸಚಿನ್ ತೆಂಡೂಲ್ಕರ್​ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

Twitter
Facebook
LinkedIn
WhatsApp
2ನೇ ಸ್ಥಾನಕ್ಕೇರಿದ್ದ ಅಶ್ವಿನ್;  ಸಚಿನ್ ತೆಂಡೂಲ್ಕರ್​ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

ಬಾರ್ಡರ್-ಗವಾಸ್ಕರ್ ಟೆಸ್ಟ್ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಅಶ್ವಿನ್ 2ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ಆಸೀಸ್ ಸ್ಪಿನ್ನರ್ ನಾಥನ್ ಲಿಯಾನ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದೇ ಇಲ್ಲಿ ವಿಶೇಷ. ನಾಗ್ಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಪ್ರಮುಖರು. 

ಮೊದಲ ಇನಿಂಗ್ಸ್​ನಲ್ಲಿ ಹಿಟ್​ಮ್ಯಾನ್ ಶತಕ ಸಿಡಿಸಿ ಮಿಂಚಿದರೆ, ರವೀಂದ್ರ ಜಡೇಜಾ 5 ವಿಕೆಟ್ ಕಬಳಿಸಿದ್ದರು. ಇನ್ನು ಆಸೀಸ್ ತಂಡದ 2ನೇ ಇನಿಂಗ್ಸ್​ನಲ್ಲಿ ರವಿಚಂದ್ರನ್ ಅಶ್ವಿನ್ ಸ್ಪಿನ್ ಮೋಡಿ ಮಾಡಿದ್ದರು.

ಆಸ್ಟ್ರೇಲಿಯಾ ತಂಡದ ದ್ವಿತೀಯ ಇನಿಂಗ್ಸ್​ನಲ್ಲಿ 12 ಓವರ್ ಬೌಲ್ ಮಾಡಿದ್ದ ಅಶ್ವಿನ್ ಕೇವಲ 37 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಪರಿಣಾಮ ಆಸೀಸ್ ಪಡೆಯು 91 ರನ್​ಗಳಿಗೆ ಸರ್ವಪತನ ಕಂಡಿತು. ವಿಶೇಷ ಎಂದರೆ ಈ ಐದು ವಿಕೆಟ್​ಗಳೊಂದಿಗೆ ಅಶ್ವಿನ್ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡರು. ಹೌದು, ಭಾರತದಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ರವಿಚಂದ್ರನ್ ಅಶ್ವಿನ್ 2ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ಹರ್ಭಜನ್ ಸಿಂಗ್ ಅವರ ದಾಖಲೆಯನ್ನು ಮುರಿಯುವ ಮೂಲಕ ಹಾಗೂ ಅನಿಲ್ ಕುಂಬ್ಳೆಯ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದೇ ವಿಶೇಷ.

ಅಂದರೆ ಅಶ್ವಿನ್ ಇದುವರೆಗೆ 31 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಅದರಲ್ಲಿ 25 ಬಾರಿ ತವರಿನಲ್ಲೇ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತದಲ್ಲಿ 25 ಬಾರಿ 5 ವಿಕೆಟ್​ ಕಬಳಿಸಿದ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದರು. ಹಾಗೆಯೇ 24 ಬಾರಿ ಈ ಸಾಧನೆ ಮಾಡಿದ್ದ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದರು.

ಇನ್ನು ಈ ಐದು ವಿಕೆಟ್​ಗಳೊಂದಿಗೆ ಶೇನ್ ವಾರ್ನ್​ ಅವರ ವಿಶೇಷ ದಾಖಲೆಯನ್ನೂ ಕೂಡ ರವಿಚಂದ್ರನ್ ಅಶ್ವಿನ್ ಮುರಿದಿದ್ದಾರೆ. ಶೇನ್ ವಾರ್ನ್ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಪಂದ್ಯಗಳಿಂದ ಒಟ್ಟು 319 ವಿಕೆಟ್ ಕಬಳಿಸಿದ್ದರು. ಇದೀಗ ತವರಿನಲ್ಲಿ 320 ವಿಕೆಟ್ ಪಡೆದು ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಅವರ ದಾಖಲೆಯನ್ನು ಅಶ್ವಿನ್ ಮುರಿದಿದ್ದಾರೆ.

ಇದಲ್ಲದೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಅಶ್ವಿನ್ 2ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ಆಸೀಸ್ ಸ್ಪಿನ್ನರ್ ನಾಥನ್ ಲಿಯಾನ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದೇ ಇಲ್ಲಿ ವಿಶೇಷ. ಅಂದರೆ ಉಭಯ ಸ್ಪಿನ್ನರ್​ಗಳ ನಡುವೆ ಈ ಟೂರ್ನಿಯಲ್ಲಿ ಪೈಪೋಟಿ ಕಂಡು ಬರುತ್ತಿದೆ. ಇದಾಗ್ಯೂ ಅಶ್ವಿನ್ ಮೊದಲ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಕಬಳಿಸುವ ಮೂಲಕ ಬಾರ್ಡರ್-ಗವಾಸ್ಕರ್ ಟೂರ್ನಿಯಲ್ಲಿ 97 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಸದ್ಯ ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ (111) ಅಗ್ರಸ್ಥಾನದಲ್ಲಿದ್ದು, ಮೂರನೇ ಸ್ಥಾನದಲ್ಲಿ ನಾಥನ್ ಲಿಯಾನ್ ಇದ್ದಾರೆ. ಹೀಗಾಗಿ ಮುಂದಿನ 3 ಟೆಸ್ಟ್ ಪಂದ್ಯಗಳಲ್ಲಿ ಅಶ್ವಿನ್ ಹಾಗೂ ನಾಥನ್ ಲಿಯಾನ್ ನಡುವೆ ವಿಕೆಟ್ ಟೇಕಿಂಗ್ ಪೈಪೋಟಿಯನ್ನು ನಿರೀಕ್ಷಿಸಬಹುದು.

ಸಚಿನ್ ತೆಂಡೂಲ್ಕರ್​ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ಕೂಡ ಮಿಂಚಿದ್ದರು. ಮೊದಲ ಇನಿಂಗ್ಸ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಹಿಟ್​​ಮ್ಯಾನ್ 212 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್​ನೊಂದಿಗೆ 120 ರನ್​ ಬಾರಿಸಿದ್ದರು. ಈ ಶತಕದೊಂದಿಗೆ ಹಿಟ್​ಮ್ಯಾನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸೆಂಚುರಿ ದಾಖಲೆಯನ್ನು ಕೂಡ ಸರಿಗಟ್ಟಿರುವುದು ವಿಶೇಷ.

ಅಂದರೆ ಆಸ್ಟ್ರೇಲಿಯಾ ವಿರುದ್ಧ ಆರಂಭಿಕರಾಗಿ ಅತ್ಯಧಿಕ ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಇದೀಗ ರೋಹಿತ್ ಶರ್ಮಾ ಸರಿದೂಗಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಆಸ್ಟ್ರೇಲಿಯಾ ವಿರುದ್ಧ ಆರಂಭಿಕರಾಗಿ ಒಟ್ಟು 9 ಶತಕಗಳನ್ನು ಸಿಡಿಸಿ ದಾಖಲೆ ನಿರ್ಮಿಸಿದ್ದರು. ರೋಹಿತ್ ಶರ್ಮಾ ಆಸೀಸ್ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ 8 ಶತಕ ಬಾರಿಸಿದರೆ, ಇದೀಗ ಟೆಸ್ಟ್​ನಲ್ಲಿ 1 ಶತಕ ಪೂರೈಸಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದಲ್ಲದೆ ಟೀಮ್ ಇಂಡಿಯಾ ಪರ ಮೂರು ಮಾದರಿಯ ಕ್ರಿಕೆಟ್​ನಲ್ಲೂ ಶತಕ ಬಾರಿಸಿದ ನಾಯಕ ಎಂಬ ಹೆಗ್ಗಳಿಕೆಗೂ ಹಿಟ್​ಮ್ಯಾನ್ ಪಾತ್ರರಾಗಿದ್ದಾರೆ. ಈ ಹಿಂದೆ ಧೋನಿ ಹಾಗೂ ವಿರಾಟ್ ಕೊಹ್ಲಿ ನಾಯಕರಾಗಿ ಏಕದಿನ ಹಾಗೂ ಟೆಸ್ಟ್​ ಕ್ರಿಕೆಟ್​ನಲ್ಲಿ ಶತಕ ಬಾರಿಸಿದರೂ ಟಿ20 ಕ್ರಿಕೆಟ್​ನಲ್ಲಿ ಸೆಂಚುರಿ ಸಿಡಿಸಲು ಸಾಧ್ಯವಾಗಿರಲಿಲ್ಲ.

ಆದರೆ ಹಿಟ್​ಮ್ಯಾನ್ ನಾಯಕರಾಗಿ ಏಕದಿನ ಕ್ರಿಕೆಟ್​ನಲ್ಲಿ 3 ಶತಕ ಬಾರಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 2 ಸೆಂಚುರಿ ಸಿಡಿಸಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್​ನಲ್ಲಿ ಶತಕ ಬಾರಿಸುವ ಮೂಲಕ ಮೂರು ಸ್ವರೂಪಗಳಲ್ಲಿ ಸೆಂಚುರಿ ಸಿಡಿಸಿದ ಮೊದಲ ಕ್ಯಾಪ್ಟನ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ