ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2ನೇ ಸ್ವದೇಶಿ ವಿಮಾನವಾಹಕ ನೌಕೆ ನಿರ್ಮಾಣಕ್ಕೆ ತಯಾರಿ ಶುರು – ಮೈಲಿಗಲ್ಲಿನತ್ತ ಭಾರತ

Twitter
Facebook
LinkedIn
WhatsApp
2ನೇ ಸ್ವದೇಶಿ ವಿಮಾನವಾಹಕ ನೌಕೆ ನಿರ್ಮಾಣಕ್ಕೆ ತಯಾರಿ ಶುರು – ಮೈಲಿಗಲ್ಲಿನತ್ತ ಭಾರತ

ನವದೆಹಲಿ: ಮೊದಲ ಸ್ವದೇಶಿ ನಿರ್ಮಿತ ಐಎನ್‌ಎಸ್ ವಿಕ್ರಾಂತ್ (INS Vikrant) ವಿಮಾನವಾಹಕ ಯಶಸ್ವಿಯಾದ ಬೆನ್ನಲ್ಲೇ ಭಾರತ ಮತ್ತೊಂದು ಸ್ವದೇಶಿ ವಿಮಾನವಾಹಕ ನೌಕೆ (Indigenous Aircraft) ಸಿದ್ಧಪಡಿಸುವ ಕೆಲಸ ಪ್ರಾರಂಭಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದ್ದಾರೆ.

ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಐಎನ್‌ಎಸ್ ವಿಕ್ರಾಂತ್ ಕುರಿತು ಮಾತನಾಡಿದ ಅವರು, ವಿಮಾನವಾಹಕ ನೌಕೆ ನಿರ್ಮಾಣದಲ್ಲಿ ದೇಶವು ವಿಶ್ವದಲ್ಲಿ 7ನೇ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಭಾರತ ಸ್ವತಂತ್ರಗೊಂಡಾಗ ದೇಶದಲ್ಲಿ ಒಂದು ಸೂಜಿಯನ್ನೂ ತಯಾರಿಸಲಿಲ್ಲ. ಆದರೆ 2022ರಲ್ಲಿ ನಾವು ಐಎನ್‌ಎಸ್ ವಿಕ್ರಾಂತ್‌ನಂತಹ ಬೃಹತ್ ವಿಮಾನವಾಹಕ ನೌಕೆಯನ್ನೇ ನಿರ್ಮಿಸಿದ್ದೇವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆಯೊಡ್ಡುತ್ತಿರುವ ಯುಎಸ್ (US), ಯುಕೆ (UK), ಫ್ರಾನ್ಸ್, ಜರ್ಮನಿ, ಚೀನಾ ಮತ್ತು ಜಪಾನ್ ನಂತರ ಭಾರತ ಇಂದು ಸ್ವದೇಶಿ ವಿಮಾನವಾಹಕ ಹೊಂದಿದ 7ನೇ ರಾಷ್ಟ್ರವಾಗಿದೆ. ವಿಕ್ರಾಂತ್ ಯಶಸ್ವಿಯಾದ ಬೆನ್ನಲ್ಲೇ ಭಾರತದ 2ನೇ ವಿಮಾನವಾಹಕ ನೌಕೆಯ ಕೆಲಸ ಪ್ರಾರಂಭವಾಗಿದೆ ಎಂದು ಅವರು ಹೇಳಿದ್ದಾರೆ.

ಐಎನ್‌ಐಸ್ ವಿಕ್ರಾಂತ್ ಶೇ.73-74 ರಷ್ಟು ಸ್ವದೇಶೀಕರಣವನ್ನು ಸಾಧಿಸಿದೆ. ಸದ್ಯ ಭಾರತ ರಷ್ಯಾ ನಿರ್ಮಿತ ಐಎನ್‌ಎಸ್ ವಿಕ್ರಮಾದಿತ್ಯ (INS Vikramaditya) ಹಾಗೂ ಸ್ವದೇಸಿ ನಿರ್ಮಿತ ಐಎನ್‌ಎಸ್ ವಿಕ್ರಾಂತ್ ವಿಮಾನವಾಹಕ ನೌಕೆಗಳನ್ನು ನಿರ್ವಹಿಸುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ