ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

2 ವರ್ಷಗಳ ನಂತರ ಮತ್ತೆ ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ ಮಕ್ಕಳು .

Twitter
Facebook
LinkedIn
WhatsApp
2 ವರ್ಷಗಳ ನಂತರ ಮತ್ತೆ ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ ಮಕ್ಕಳು .

ಮಂಗಳೂರು: ಕೋವಿಡ್‌ನಿಂದಾಗಿ ಒಂದೂವರೆ ವರ್ಷಕ್ಕೂ ಹೆಚ್ಚುಕಾಲ ಶಾಲೆಗಳಿಂದ ದೂರ ಉಳಿದಿದ್ದ ಚಿಣ್ಣರು ಅ.25ರಿಂದ ಮತ್ತೆ ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕಳೆಗುಂದಿದ್ದ ಶಾಲಾ ಪರಿಸರದಲ್ಲಿ ಮಕ್ಕಳ ಕಲರವ ಕಾಣುತ್ತಿದೆ. ಸುಧೀರ್ಘ ಅವಧಿವರೆಗೆ ತರಗತಿ ಪಾಠದಿಂದ ವಂಚಿತರಾಗಿದ್ದ ಮಕ್ಕಳು ಉತ್ಸಾಹದಿಂದ ಕಲಿಯಲು ಸಜ್ಜಾಗಿದ್ದಾರೆ.

ಕಳೆದ ಶುಕ್ರವಾರ ಬಹುತೇಕ ಶಾಲೆಗಳು ಆನ್​ಲೈನ್ ಮತ್ತು ಆಫ್​ಲೈನ್ ಮೀಟಿಂಗ್​​ಗಳನ್ನು ಕರೆದು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಕೊವಿಡ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿವೆ.
‘ಮಕ್ಕಳಿಗೂ ಲಸಿಕೆ ಹಾಕಿಸಿದ ನಂತರವೇ ಶಾಲೆ ಆರಂಭಿಸಿದ್ದರೆ ಒಳ್ಳೆಯದಿತ್ತು’ ಎಂದು ಕೆಲ ಪೋಷಕರು ಬಲವಾಗಿ ಪ್ರತಿಪಾದಿಸಿದರು. ‘ಮನೆಯಲ್ಲಿ ನಾವು ಎಷ್ಟು ಹೇಳಿದರೂ ಮಕ್ಕಳು ಕೇಳುವುದಿಲ್ಲ. ಮಗ್ಗಿ ಕೂಡ ಮರೆತಿದ್ದಾರೆ ಶಾಲೆ ಆರಂಭವಾಗಿದ್ದು ಒಳ್ಳೆಯದಾಯ್ತು’ ಎಂದು ಹಲವು ಪೋಷಕರು ಶಾಲೆ ಆರಂಭಿಸುವ ತೀರ್ಮಾನವನ್ನು ಬೆಂಬಲಿಸಿದ್ದರು.

ಮಾರ್ಗಸೂಚಿ ವಿವರ:
ರಾಜ್ಯದಲ್ಲಿ 1ರಿಂದ 5ನೇ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಿರುವ ಸರ್ಕಾರ ಮಾರ್ಗಸೂಚಿಯನ್ನೂ ಪ್ರಕಟಿಸಿದೆ. 20 ತಿಂಗಳ ನಂತರ ರಾಜ್ಯದಲ್ಲಿ ಕಿರಿಯ ಪ್ರಾಥಮಿಕ ಶಾಲೆಗಳು ಆರಂಭವಾಗುತ್ತಿದ್ದು, 3ನೇ ಹಂತದಲ್ಲಿ 1ರಿಂದ 5ನೇ ತರಗತಿ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಅಕ್ಟೋಬರ್ 30ರವರೆಗೆ ಅರ್ಧದಿನ ಮಾತ್ರ ತರಗತಿ ನಡೆಯಲಿದೆ. ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ, ಶನಿವಾರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿ ನಡೆಸಬೇಕು ಎಂದು ಸರ್ಕಾರ ಸೂಚಿಸಿದ್ದು, ನವೆಂಬರ್​ 2ರಿಂದ ಪೂರ್ಣಾವಧಿ ತರಗತಿಗಳು ಅಂದರೆ, ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯಲಿವೆ.

ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯ. ಅ.30ರವರೆಗೆ ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ. ನ.2ರಿಂದ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಮಾಡಲಾಗುವುದು. ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳೇ ಊಟ ತರಬೇಕು. ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಒಂದು ಕೊಠಡಿಯಲ್ಲಿ 15-20 ಮಕ್ಕಳ ತಂಡ ರಚಿಸಿ ಪಾಠ. ಶಾಲೆ ಗೇಟ್​​ ಬಳಿ ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್​ ವ್ಯವಸ್ಥೆ ಕಡ್ಡಾಯ. ಯಾವುದೇ ಮಕ್ಕಳಲ್ಲಿ ಕೊರೊನಾ ಕಂಡುಬಂದರೆ ಶಾಲೆಯನ್ನು ಸ್ಯಾನಿಟೈಸ್​ ಮಾಡಬೇಕು. ಮುಂದಿನ ಆದೇಶದವರೆಗೆ ಎಲ್​ಕೆಜಿ, ಯುಕೆಜಿ ಆರಂಭಿಸುವಂತಿಲ್ಲ. ಶಿಕ್ಷಕರು, ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ​. ಶಿಕ್ಷಕರು 2 ಡೋಸ್​ ಲಸಿಕೆ ಪಡೆದಿರುವುದು ಕಡ್ಡಾಯ. 50 ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್​​ಶೀಲ್ಡ್​​​ ಧರಿಸಬೇಕು ಎಂದು ಸರ್ಕಾರ ಆದೇಶಿಸಿದೆ.

ಶಾಲೆ ಆರಂಭಿಸಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯ ಮುಖ್ಯಾಂಶಗಳಿವು…
– ಶೇ 50ರಷ್ಟು (ಅರ್ಧದಷ್ಟು) ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ
– ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ಒಪನ್
– ಇನ್ನುಳಿದ ಎರಡು ದಿನ ಶಾಲೆ ಕೊಠಡಿ ಗಳ ಸ್ವಚ್ಚತಾ ಕಾರ್ಯ ಸ್ಯಾನಿಟೈಸ್​ಗೆ ಅವಕಾಶ
– ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ
– ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ
– ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ಧೃಢಿಕರಿಸಬೇಕು
– ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು
– ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ
– ಆನ್​ಲೈನ್ ಮತ್ತು ಆಫ್​ಲೈನ್ ಎರಡೂ ತರಗತಿಗೂ ಅವಕಾಶ
– 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು
– ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ
– ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಕ್ಲಾಸ್
– ನವೆಂಬರ್ ಎರಡರಿಂದ ಶನಿವಾರ ಬೆಳಗ್ಗೆ 8 ರಿಂದ 11.40 ರ ವರೆಗೆ ತರಗತಿ
– ಯಾವುದೇ ಶಾಲೆಯಲ್ಲಿ ಎಲ್​ಕೆಜಿ, ಯುಕೆಜಿ ತೆರೆಯಲು ಅವಕಾಶ ಇಲ್ಲ
– 25ರಿಂದ ನವೆಂಬರ್ 2ರವರೆಗೂ ಅರ್ಧದಿನ ಮಾತ್ರ ತರಗತಿ .

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು