ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2 ದಿನ ಜೆಪಿ ನಡ್ಡಾ ರಾಜ್ಯ ಪ್ರವಾಸ, ಕರಾವಳಿ, ಮಲೆನಾಡು ಭಾಗದ ಪಕ್ಷ ಸಂಘಟನೆಗೆ ಕಸರತ್ತು

Twitter
Facebook
LinkedIn
WhatsApp
2 ದಿನ ಜೆಪಿ ನಡ್ಡಾ ರಾಜ್ಯ ಪ್ರವಾಸ, ಕರಾವಳಿ, ಮಲೆನಾಡು ಭಾಗದ ಪಕ್ಷ ಸಂಘಟನೆಗೆ ಕಸರತ್ತು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಪ್ರಮುಖ ಪ್ರಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಕಾಂಗ್ರೆಸ್ ​ಮತ್ತು ಜೆಡಿಎಸ್​ ಪಕ್ಷಗಳ ಸ್ಥಳೀಯ ನಾಯಕರು ಅಖಾಡಕ್ಕೆ ಇಳಿದು ಪ್ರಚಾರದ ಭರಾಟೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಬಿಜೆಪಿಗರದು ಮಾತ್ರ ಭಿನ್ನವಾಗಿದ್ದು, ನಿರೀಕ್ಷೆಯಂತೆ ಕೇಂದ್ರ ನಾಯಕರನ್ನು ಮತಬೇಟೆಗೆ ಕರೆಸುತ್ತಿದ್ದಾರೆ. ಅದರಂತೆ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) , ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi), ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಒಬ್ಬರ ಹಿಂದೆ ಒಬ್ಬರಂತೆ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಈಗ ಮತ್ತೆ ಜೆ.ಪಿ.ನಡ್ಡಾ (JP Nadda) ಇಂದಿನಿಂದ 2 ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ. ಈಗಾಗಲೆ ನಿನ್ನೆ (ಫೆ.19) ರಾತ್ರಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು (ಫೆ.20) ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಳ್ಳಿಕಟ್ಟೆಯಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ.

ನಡ್ಡಾ 20 ವರ್ಷಗಳ ಬಳಿಕ ಕಾಫಿನಾಡು ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ ಜರಗುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಜಿಲ್ಲೆಯಲ್ಲಿ, ಎರಡು ದಿನಗಳ ಕಾಲ ಇದ್ದು, ಚುನಾವಣಾ ರಣತಂತ್ರ ರೂಪಿಸಲಿದ್ದಾರೆ. ಸಂಜೆ 4.15ಕ್ಕೆ ಹರಿಹರಪುರ ಹೆಲಿಪ್ಯಾಡ್​ಗೆ ನಡ್ಡಾ ಆಗಮಿಸಲಿದ್ದು, 4.30 ರಿಂದ 6 ಗಂಟೆವರೆಗು ಕೊಪ್ಪ ಪಟ್ಟಣದಲ್ಲಿ ನಡೆಯಲಿರುವ ಅಡಿಕೆ ಸಮಾವೇಶದ ಭಾಗವಾಗುತ್ತಾರೆ. 6.30ಕ್ಕೆ ಕೊಪ್ಪದಿಂದ ಕಾರಿನಲ್ಲಿ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ, 6.30ರಿಂದ 7.15ರವರೆಗೆ ಶೃಂಗೇರಿ ಶ್ರೀಗಳ ಜೊತೆ ಸಮಯ ಮೀಸಲಿರಿಸಲಾಗಿದೆ.

7.45ಕ್ಕೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಮುಖರ ಜೊತೆ ಸಭೆ ನಡೆಸಿ ಪಕ್ಷ ಸಂಘಟನೆಗೆ ಕೆಲವು ಸಲಹ-ಸೂಚನೆಗಳನ್ನು ನೀಡಲಿದ್ದಾರೆ. ಈ ಮಧ್ಯೆ ಚಿಕ್ಕಮಗಳೂರಿನ ಲಿಂಗಾಯತ, ಬಿಜೆಪಿ ಮುಖಂಡ ಹೆಚ್​. ಡಿ ತಮ್ಮಯ್ಯ ಕಾಂಗ್ರೆಸ್​ ಸೇರಿದ್ದು, ಬಿಜೆಪಿಗೆ ತಲೆ ನೋವಾಗಿದೆ. ಈ ವಿಚಾರವಾಗಿ ಚಿಕ್ಕಮಗಳೂರು ಪಕ್ಷದ ನಾಯಕರು ನಡ್ಡಾ ಜೊತೆ ಚರ್ಚಿಸುವ ಸಾಧ್ಯತೆ ಇದೆ. ರಾತ್ರಿ ಶೃಂಗೇರಿ ದೇವಾಲಯದ ವಿವಿಐಪಿ ಗೆಸ್ಟ್ ಹೌಸ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ನಾಳೆ (ಫೆ.21) ಬೆಳಗ್ಗೆ 9ಕ್ಕೆ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ಆಗಮಸಿ, 9.45 ಕ್ಕೆ ಸಿ.ಟಿ. ರವಿ ಮನೆಯಲ್ಲಿ ಉಪಹಾರದ ಜೊತೆಗೆ ಬಿಜೆಪಿ ಪ್ರಮುಖರ ಸಭೆ ನಡೆಸಲಿದ್ದಾರೆ. 10.30 ಬೈಕ್ ರ್ಯಾಲಿಯಲ್ಲಿ ತೊಡಗಿಸಿಕೊಳ್ಳುತ್ತಾರೆ. 10.45 ರಿಂದ 11.45ರವರೆಗೆ ಕುವೆಂಪು ಕಲಾ ಮಂದಿರದಲ್ಲಿ ಬಿಜೆಪಿ ಪ್ರಬುದ್ಧರ ಸಭೆ ನಡೆಸಿ, 12ಕ್ಕೆ ಹೆಲಿಕಾಪ್ಟರ್ ಮೂಲಕ ಬೇಲೂರಿಗೆ ತೆರಳಲಿದ್ದಾರೆ. ಅಲ್ಲಿ ಮಧ್ಯಾಹ್ನ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿ, ಸಂಜೆ ಹಾಸನದ ಬೂತ್ ಮಟ್ಟದ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದು, ರಾತ್ರಿ ಬೆಂಗಳೂರಿಗೆ ಆಗಮಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸ್​​ ಆಗಲಿದ್ದಾರೆ.

2 ತಿಂಗಳಿನಲ್ಲಿ 4 ಬಾರಿ ಪ್ರಧಾನಿ ಮೋದಿ ಹಾಗೂ 5 ಬಾರಿ ಅಮಿತ್ ಶಾ ರಾಜ್ಯ ಪ್ರವಾಸ ಮಾಡಿ, ಹಳೆ ಮೈಸೂರು ಭಾಗ, ಕಲ್ಯಾಣ ಕರ್ನಾಟಕದಲ್ಲಿ ಸಂಚಲನ ಮೂಡಿಸಿದ್ದಾರೆ. ಇದೀಗ ಜೆಪಿ ನಡ್ಡಾ ಕರಾವಳಿ ಮತ್ತು ಮಲೆನಾಡು ಭಾಗವನ್ನು ಕೇಂದ್ರವಾಗಿರಿಸಿಕೊಂಡು 2 ದಿನ ಪಕ್ಷದ ಪರ ಬಿರುಸಿನ ಪ್ರಚಾರ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ