ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2 ವರ್ಷ ಬ್ಯಾನ್ ಬಳಿಕ ಫೇಸ್‌ಬುಕ್, ಯೂಟ್ಯೂಬ್‌ಗೆ ಮರಳಿದ ಟ್ರಂಪ್

Twitter
Facebook
LinkedIn
WhatsApp
Donald Trump 1679098165585 1679098165837 1679098165837

ವಾಷಿಂಗ್ಟನ್: ಯೂಟ್ಯೂಬ್ (YouTube) ಹಾಗೂ ಫೇಸ್‌ಬುಕ್‌ಗಳಲ್ಲಿ (Facebook) 2 ವರ್ಷಗಳ ಕಾಲ ಬ್ಯಾನ್ (Ban) ಆಗಿದ್ದ ಅಮೆರಿಕದ (America) ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಖಾತೆಗಳು ಇದೀಗ ಮರಳಿ ಬಂದಿದೆ.

2021ರ ಜನವರಿ 6ರಂದು ಟ್ರಂಪ್ ಬೆಂಬಲಿಗರು ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ಮಾಡಿದ್ದರು. ಈ ಹಿಂಸಾಚಾರಕ್ಕೆ ಟ್ರಂಪ್ ಪ್ರಚೋದನೆ ನೀಡುವಂತಹ ಪೋಸ್ಟ್‌ಗಳನ್ನು ಹಾಕಿದ್ದಕ್ಕೆ ಅವರ ಯೂಟ್ಯೂಬ್ ಹಾಗೂ ಫೇಸ್‌ಬುಕ್ ಖಾತೆಗಳನ್ನು ಬ್ಯಾನ್ ಮಾಡಲಾಗಿತ್ತು. ಇದೀಗ 2 ವರ್ಷಗಳ ಬಳಿಕ ಅವರ ಖಾತೆಗಳನ್ನು ಮತ್ತೆ ಸ್ಥಾಪಿಸಲಾಗಿದೆ. ಫೇಸ್‌ಬುಕ್ ಹಾಗೂ ಯೂಟ್ಯೂಬ್‌ಗೆ ಮರಳುತ್ತಲೇ ಟ್ರಂಪ್ ಪೋಸ್ಟ್‌ಗಳನ್ನು ಹಾಕಿದ್ದಾರೆ. ಶುಕ್ರವಾರ ಟ್ರಂಪ್ ಪೋಸ್ಟ್ ಒಂದನ್ನು ಹಾಕಿ, ‘ಐ ಆಮ್ ಬ್ಯಾಕ್’ (ನಾನು ಮರಳಿ ಬಂದಿದ್ದೇನೆ) ಎಂದು ಬರೆದಿದ್ದಾರೆ. ಮಾತ್ರವಲ್ಲದೇ ಇಲ್ಲಿವರೆಗೆ ನಿಮ್ಮನ್ನು ಕಾಯಿಸಿರುವುದಕ್ಕೆ ಕ್ಷಮಿಸಿ ಎಂದು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ

Donald Trump 1

ಯೂಟ್ಯೂಬ್ ಶುಕ್ರವಾರ ಟ್ರಂಪ್ ಅವರ ಚಾನಲ್ ಅನ್ನು ಮರಳಿಸಿದ್ದು, ಮೆಟಾ ಪ್ಲಾಟ್‌ಫಾರ್ಮ್ ಈ ವರ್ಷದ ಆರಂಭದಲ್ಲಿ ಅವರ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಮರಳಿಸಿವೆ. ಟ್ವಿಟ್ಟರ್ ಅನ್ನು ಖರೀದಿಸಿದ ಎಲೋನ್ ಮಸ್ಕ್ ಕಳೆದ ವರ್ಷ ನವೆಂಬರ್‌ನಲ್ಲಿಯೇ ಅವರ ಖಾತೆಯನ್ನು ಮರಳಿಸಿದ್ದರು. ಆದರೆ ಟ್ರಂಪ್ ಇಲ್ಲಿಯವರೆಗೆ ಟ್ವಿಟ್ಟರ್‌ನಲ್ಲಿ ಯಾವುದೇ ಪೋಸ್ಟ್‌ಗಳನ್ನು ಹಂಚಿಕೊಂಡಿಲ್ಲ.ಹಲವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ಬ್ಯಾನ್ ಆಗಿದ್ದ ಟ್ರಂಪ್ 2021ರ ಅಂತ್ಯದ ವೇಳೆಗೆ ಟ್ರೂತ್ ಸೋಶಿಯಲ್ ಎಂಬ ತಮ್ಮದೇ ಹೊಸ ಪ್ಲಾಟ್‌ಫಾರ್ಮ್ ಅನ್ನು ಸ್ಥಾಪಿಸಿದ್ದರು. ಇದನ್ನು ಅವರು ತಮ್ಮ ಬೆಂಬಲಿಗರೊಂದಿಗೆ ಸಂವಹನ ನಡೆಸಲು ಬಳಸುತ್ತಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ