ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಗೆ ಬರೋಬ್ಬರಿ 2 ಕೋಟಿ ವಂಚನೆ

Twitter
Facebook
LinkedIn
WhatsApp
ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಗೆ ಬರೋಬ್ಬರಿ 2 ಕೋಟಿ ವಂಚನೆ
– ಫಾರೀನ್‌ಗೆ ಹೋಗಬೇಕು ಎಂದು ಕರೆದು ಅತ್ಯಾಚಾರ ಆರೋಪ

ಚಿತ್ರದುರ್ಗ: ಅಮೆರಿಕದ ಮಲ್ಟಿನ್ಯಾಷನಲ್ ಕಂಪನಿಯೊಂದರಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ಯುವತಿಯನ್ನು ನಂಬಿಸಿ, ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ್ದಲ್ಲದೇ (Fraud), ಸತತ 4 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಅತ್ಯಾಚಾರವೆಸಗಿದ್ದಾನೆಂದು (Rape) ಆರೋಪಿಸಿರುವ ಘಟನೆ ಚಿತ್ರದುರ್ಗದಲ್ಲಿ (Chitradurga) ಬೆಳಕಿಗೆ ಬಂದಿದೆ.

ಉದ್ಯೋಗದ ಆಸೆಗೆ ಯುವಕನಿಂದ ಮೋಸ ಹೋಗಿ ನ್ಯಾಯಕ್ಕಾಗಿ ಚಿತ್ರದುರ್ಗದ ಯುವತಿ ಅಲೆದಾಡುತ್ತಿದ್ದಾರೆ. 2019 ರಲ್ಲಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಚಿತ್ರದುರ್ಗ ಮೂಲದ ಸೌರಭ್ ಎಂಬ ಯುವಕನ ಪರಿಚಯವಾಗಿದ್ದು, ಇಬ್ಬರ ಮಧ್ಯೆ ಪರಸ್ಪರ ಸ್ನೇಹ, ಆತ್ಮೀಯತೆ ಬೆಳೆದಿತ್ತು.

ಆಗ ಅಮೆರಿಕ ಸೇರಿದಂತೆ ಮತ್ತಿತರ ವಿದೇಶದ ಮಲ್ಟಿನ್ಯಾಷನಲ್ ಕಂಪನಿಗಳಲ್ಲಿ ನಿನಗೆ ಕೆಲಸ ಕೊಡಿಸ್ತೀನಿ ಅಂತ ಯುವತಿಯನ್ನು ನಂಬಿಸಿದ್ದ ಸೌರಭ್. ಫೇಕ್ ಆಫರ್ ಲೆಟರ್ ಕೊಟ್ಟು, ಈಕೆಯಿಂದ ಉದ್ಯೋಗದ ನೆಪದಲ್ಲಿ ಕೋಟಿಗಟ್ಟಲೆ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ. 

ಪ್ರತಿದಿನ ಮೊಬೈಲ್ ಸಂಭಾಷಣೆಯಲ್ಲಿ ತೊಡಗಿದ್ದ ಅಸಾಮಿ ಸಾಕಷ್ಟು ಬಾರಿ ಆಕೆಯನ್ನು ಹೊರ ದೇಶಕ್ಕೆ ಹೋಗಬೇಕು, ರೆಡಿಯಾಗಿರು ಎಂದು ಹೇಳಿ, ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಉದ್ಯೋಗವಂತು ಕೊಡಿಸಲಿಲ್ಲ, ಮದುವೆಯಾಗಿ ಬದುಕಾದರೂ ಕೊಟ್ಟು ಕರುಣೆ ತೋರು ಎಂದು ಕೇಳಿದರೂ ಸೊಪ್ಪು ಹಾಕಿಲ್ಲ. ನಮ್ಮಿಂದ ಪಡೆದ ಎರಡೂವರೆ ಕೋಟಿ ರೂ. ಹಣವಾದರೂ ವಾಪಸ್ ಕೊಟ್ಟುಬಿಡು ಎಂದು ಯುವತಿ ಹಾಗೂ ಆಕೆಯ ಕುಟುಂಬ ಅಂಗಲಾಚಿದರೂ ಸಹ ಕಿಂಚಿತ್ ಅನುಕಂಪವಿಲ್ಲದೇ ಕೊಲೆ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ.

ಈ ಸಂಬಂಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಲ್ಲದೇ 2 ತಿಂಗಳ ಹಿಂದೆ ನೊಂದ ಯುವತಿಯ ತಂದೆ ಕೂಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಎಸ್‌ಪಿ ಧರ್ಮೇಂದರ್ ಕುಮಾರ್, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕವಾದ ತನಿಖೆ ನಡೆಸಿ, ನೊಂದವರಿಗೆ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ್ದಾರೆ. 

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ – ಐವರು ಸ್ಥಳದಲ್ಲೇ ಸಾವು

ಕಲಬುರಗಿ: ಬೈಕಿಗೆ (Bike) ಲಾರಿ (Lorry) ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ (Kalaburagi) ಅಫಜಲಪುರ (Afzalpur) ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ನಡೆದಿದೆ.

ಘಟನೆಯಲ್ಲಿ ನೇಪಾಳ (Nepal) ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂದೇ ಬೈಕ್‌ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು. ಈ ವೇಳೆ ದುದುನಿಯಿಂದ ಅಫಜಲಪುರ ಕಡೆಗೆ ಬರುತ್ತಿದ್ದ ಲಾರಿ ಬೈಕಿಗೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮೃತರು ಅಫಜಲಪುರದಲ್ಲಿ ಫಾಸ್ಟ್‌ಫುಡ್ ಹೋಟೆಲ್ ನಡೆಸುತ್ತಿದ್ದರು. ನೇಪಾಳ ಮೂಲದ ಈ ಕುಟುಂಬ ಕಳೆದ ಹಲವು ವರ್ಷಗಳಿಂದ ಅಫಜಲಪುರದಲ್ಲಿ ವಾಸವಿತ್ತು. ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ