ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2 ವರ್ಷದ ಮಗುವಿನ ತಲೆಯಲ್ಲಿ ಸಿಲುಕಿಕೊಂಡಿದ್ದ ಫ್ಯಾನ್ ಬ್ಲೇಡ್ - 3 ಗಂಟೆಗಳ ಶಸ್ತ್ರಚಿಕಿತ್ಸೆ ಯಶಸ್ವಿ

Twitter
Facebook
LinkedIn
WhatsApp
hr 171122 death 4

ಫರಿದಾಬಾದ್‌, ಮಾ 16 : ಆಟವಾಡುತ್ತಿದ್ದಾಗ 2 ವರ್ಷದ ಮಗುವಿನ ತಲೆಯಲ್ಲಿ ಫ್ಯಾನ್ ಬ್ಲೇಡ್ ಸಿಲುಕಿಕೊಂಡಿದ್ದು, ಬಳಿಕ ಫರಿದಾಬಾದ್‌ನ ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆಯ ನರಶಸ್ತ್ರ ಚಿಕಿತ್ಸಾ ವಿಭಾಗದ ಡಾ ನಿತೀಶ್ ಅಗರ್ವಾಲ್ ನೇತೃತ್ವದ ವೈದ್ಯರ ತಂಡವು ಯಶಸ್ವಿಯಾಗಿ 3 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆಯ ಮೂಲಕ ಫ್ಯಾನ್ ಬ್ಲೇಡ್ ಅನ್ನು ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲಾದ ನಂತರ ಮಗುವು ಪ್ರಜ್ಞಾಪೂರ್ವಕ ಸ್ಥಿತಿಯಲ್ಲಿದ್ದು, ತಕ್ಷಣ ವೈದ್ಯರ ತಂಡ ವೈದ್ಯರು 3 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆಯ ಮೂಲಕ ಫ್ಯಾನ್ ಬ್ಲೇಡ್ ಅನ್ನು ಹೊರತೆಗೆದಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಮಗುವನ್ನು ಪೀಡಿಯಾಟ್ರಿಕ್ ತೀವ್ರ ನಿಗಾ ಘಟಕಕ್ಕೆ (ಪಿಐಸಿಯು) ಸ್ಥಳಾಂತರಿಸಲಾಯಿತು ಮತ್ತು ನಂತರ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ಇನ್ನು ಫರಿದಾಬಾದ್‌ನ ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸೆಯ ಕನ್ಸಲ್ಟೆಂಟ್ ಡಾ ನಿತೀಶ್ ಅಗರ್ವಾಲ್ ಅವರ ಪ್ರಕಾರ, ಫ್ಯಾನ್ ಬ್ಲೇಡ್ ಮಗುವಿನ ಮೆದುಳಿನ ಎಡಭಾಗವನ್ನು ಚುಚ್ಚಿದ್ದು, ಮಗುವಿನ ಮಾತಿನ ಮೇಲೆ ಪರಿಣಾಮ ಬೀರಬಹುದು ಎಂಬ ಗಂಭೀರ ಆತಂಕವಿತ್ತು. ಅಲ್ಲದೆ ಮೆದುಳಿನಲ್ಲಿ ರಕ್ತಸ್ರಾವ ಮತ್ತು ಹೆಮಟೋಮಾ (ಹೆಪ್ಪುಗಟ್ಟುವಿಕೆ) ಸಾಧ್ಯತೆ ಇತ್ತು, ಆದರೆ ನಾವು ಈ ಎಲ್ಲಾ ಸವಾಲುಗಳನ್ನು ನಿರ್ಣಯಿಸಿ ಬ್ಲೇಡ್‌ ಅನ್ನು ಹೊರತೆಗೆದಿದ್ದೇವೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ