20 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಎನ್ಐಎ
Twitter
Facebook
LinkedIn
WhatsApp

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶುಕ್ರವಾರ 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಎನ್ಐಎ ಅಧಿಕಾರಿಗಳು ಇಂದು ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಸುದೀರ್ಘ 1500 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಸೇರಿ ಒಟ್ಟು 20 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಇನ್ನು ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ತಲೆಮರೆಸಿಕೊಂಡಿರುವ 6 ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿರುವ ಎನ್ಐಎ ಅಧಿಕಾರಿಗಳು, ಪತ್ತೆಯಾಗದ ಹಿನ್ನಲೆಯಲ್ಲಿ ಲುಕ್ಔಟ್ ನೋಟಿಸ್ ಜಾರಿ ಮಾಡಿದೆ. ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.