ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

Twitter
Facebook
LinkedIn
WhatsApp
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

ಚಿಕ್ಕೋಡಿ: ಬಿಜೆಪಿ ಭದ್ರಕೋಟೆಯಾಗಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪುರಸಭೆಯಲ್ಲಿ 20 ವರ್ಷಗಳ ಬಳಿಕ ಕಾಂಗ್ರೆಸ್ ಅಧಿಪತ್ಯ ಸ್ಥಾಪಿಸಿದೆ.

ಪುರಸಭೆಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ʻಕೈʼಪಡೆ ದಿಗ್ವಿಜಯ ಸಾಧಿಸಿದೆ. ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಇಮ್ರಾನ್ ಮೋಮಿನ್‌ಗೆ ಅಧ್ಯಕ್ಷ ಹುದ್ದೆ ಒಲಿದರೇ ಉಪಾಧ್ಯಕ್ಷರಾಗಿ ಜ್ಯೋತಿ ಬಡಿಗೇರ ಆಯ್ಕೆಯಾಗಿದ್ದಾರೆ.

ತಾಳ್ಮೆ ಮತ್ತು ಎಚ್ಚರಿಕೆ ಹೆಜ್ಜೆ ಇಟ್ಟ ಕಾಂಗ್ರೆಸ್ ಎರಡು ದಶಕಗಳ ಬಳಿಕ ಪುರಸಭೆಯಲ್ಲಿ ತನ್ನ ಅಧಿಪತ್ಯ ಸ್ಥಾಪಿಸಿದೆ. ಸಂಖ್ಯಾಬಲದ ಕೊರತೆಯಿಂದ ಬಿಜೆಪಿ ಸದಸ್ಯರು ಉಮೇದುವಾರಿಕೆ ದಾಖಲಿಸದೇ ಚುನಾವಣೆಯತ್ತ ಸುಳಿಯಲಿಲ್ಲ. ಇದರೊಂದಿಗೆ ಪುರಸಭೆಯ ಆಡಳಿತಕ್ಕೆ ನಡೆದ ಚುನಾವಣೆಯ ಹೈಡ್ರಾಮಾ ಏಕಪಕ್ಷೀಯವಾಗಿ ಕಂಡು ಬಂದಿತು.

ಆಟೋವನ್ನೇ ಎತ್ತಿದ ಬಾಲಕಿಯ ಶೌರ್ಯವನ್ನು ಮೆಚ್ಚಿದ ಸಿದ್ದರಾಮಯ್ಯ:

ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ತನ್ನ ತಾಯಿಗೆ ಆಟೋ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಅಲ್ಲೇ ಇದ್ದ ಮಗಳು ತಕ್ಷಣವೇ ಆಟೋ ಮೇಲೆತ್ತಿ ತಾಯಿತ ಪ್ರಾಣ ಉಳಿಸಿದ್ದಳು.

ಆಟೋವನ್ನೇ ಎತ್ತಿದ ಬಾಲಕಿಯ ಶೌರ್ಯವನ್ನು ಮೆಚ್ಚಿದ ಸಿದ್ದರಾಮಯ್ಯ:

 ಆ ಬಾಲಕಿಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆಕೆಯ ಸಮಯಪ್ರಜ್ಞೆ ಮತ್ತು ಧೈರ್ಯ ಶ್ಲಾಘಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವಿಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ ಎಂದು ಹೇಳಿದ್ದಾರೆ.

ಮೂರು ಬಿಲ್‌ಗೆ ರಾಜ್ಯಪಾಲರ ಅಂಕಿತ:

ಬೆಂಗಳೂರು: ರಾಜ್ಯ ಸರಕಾರ ಸಲ್ಲಿಸಿದ್ದ ಸ್ಪಷ್ಟನೆ, ಉತ್ತರಗಳಿಂದ ತೃಪ್ತರಾದಂತಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಮೂರು ವಿಧೇಯಕಗಳಿಗೆ ಒಪ್ಪಿಗೆ ನೀಡಿ ಅಂಕಿತ ಹಾಕಿದ್ದಾರೆ.

ನಾನಾ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆಸುವವರಿಗೆ 10 ಕೋಟಿ ರೂ.ವರೆಗೆ ದಂಡ ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಸಾರ್ವಜನಿಕ ಪರೀಕ್ಷಾ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕ-2023’ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.

ಈ ಹಿಂದೆ 545 ಪಿಎಸ್‌ಐ ಹುದ್ದೆ ನೇಮಕ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ, ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳು ಭಾರೀ ಸದ್ದು ಮಾಡಿತ್ತು. ಆ ಹಿನ್ನೆಲೆಯಲ್ಲಿ ನಾನಾ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ವಿಧಾನಮಂಡಲದಲ್ಲಿ ಈ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿತ್ತು. ಈ ಹಿಂದೆ 12 ವರ್ಷಗಳವರೆಗೆ ವಿಧಿಸಬಹುದಾಗಿದ್ದ ಜೈಲುಶಿಕ್ಷೆ ಪ್ರಮಾಣವನ್ನು 10 ವರ್ಷಕ್ಕೆ ಇಳಿಸಲಾಗಿದೆ.

ನಕಲು ಅಥವಾ ಹೊರಗಿನಿಂದ ನೆರವು ಪಡೆದು ಪರೀಕ್ಷಾ ಅಕ್ರಮ ನಡೆಸುವ ಅಭ್ಯರ್ಥಿಗೆ ಐದು ವರ್ಷಗಳವರೆಗೆ ಜೈಲುಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸುವುದು. ಅಭ್ಯರ್ಥಿ ಸೇರಿದಂತೆ ಯಾವುದೇ ವ್ಯಕ್ತಿ ಬೇರೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಪ್ರಯತ್ನಿಸುವುದು, ಪ್ರಶ್ನೆಪತ್ರಿಕೆ ಸೋರಿಕೆ ಮಾಡುವುದು, ಸೋರಿಕೆಗೆ ಪ್ರಯತ್ನಿಸುವುದು, ಅಕ್ರಮವಾಗಿ ಪ್ರಶ್ನೆಪತ್ರಿಕೆಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು, ಅಕ್ರಮವಾಗಿ ಉತ್ತರ ಬರೆಯುವುದು ಅಥವಾ ಬರೆಯಲು ನೆರವಾಗುವುದು ಸೇರಿದಂತೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರೀಕ್ಷಾ ಅಕ್ರಮಕ್ಕೆ ನೆರವು ನೀಡುವವರಿಗೆ 8ರಿಂದ 10 ವರ್ಷಗಳವರೆಗೆ ಜೈಲುಶಿಕ್ಷೆ ಹಾಗೂ 15 ಲಕ್ಷ ರೂ.ನಿಂದ 10 ಕೋಟಿ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ವಿಧೇಯಕಕ್ಕೆ ಅಂಕಿತ

ಸರಕಾರದ ಸ್ಪಷ್ಟನೆ ಹಿನ್ನೆಲೆಯಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿ ಸಂಬಂಧ ‘ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ- 2024’ ಮತ್ತು ನಗರ ಸ್ಥಳೀಯ ಪ್ರಾಧಿಕಾರಗಳ ವ್ಯಾಪ್ತಿಯ ಎಲ್ಲಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸುವ, ಅನಧಿಕೃತ ವಸತಿ ಪ್ರ ದೇಶದಲ್ಲಿರುವ ನಿವೇಶನ, ಕಟ್ಟಡಗಳು ಹಾಗೂ ಅಧಿಕೃತ ವಸತಿ ಪ್ರದೇಶಗಳ ಅನಧಿಕೃತ ಕಟ್ಟಡಗಳಿಗೆ ಆಸ್ತಿ ತೆರಿಗೆ ನಿಗದಿಪಡಿಸುವ ಸಂಬಂಧ ‘ಕರ್ನಾಟಕ ಮುನಿಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು ತಿದ್ದುಪಡಿ ವಿಧೇಯಕ- 2024’ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist