2000 ಮುಖ ಬೆಲೆಯ ನೋಟ್ ಬ್ಯಾನ್..! ಏಕಕಾಲಕ್ಕೆ 20 ಸಾವಿರ ಮಾತ್ರ ವಿನಿಮಯ?
Twitter
Facebook
LinkedIn
WhatsApp
ನವದೆಹಲಿ: ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ, ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿವೆ. ಆರ್ಬಿಐ ಶುಕ್ರವಾರ ಈ ಹೇಳಿಕೆ ನೀಡಿದೆ. 2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದು.
RBI decides to withdraw ₹2000 denomination banknotes from circulation, will continue as legal tender pic.twitter.com/Lc9ejtcSIX
— Aanchal Magazine (@AanchalMagazine) May 19, 2023
2,000 ರೂ ಮುಖಬೆಲೆಯ ನೋಟು ಹಿಂಪಡೆಯಲು ಏನು ಕಾರಣ?
- ಈಗ ಚಲಾವಣೆಯಲ್ಲಿರುವ 2,000ರೂ ಮುಖಬೆಲೆಯ ನೋಟುಗಳಲ್ಲಿ ಶೇ. 89ರಷ್ಟು ನೋಟುಗಳನ್ನು 2017ರ ಮಾರ್ಚ್ಗೆ ಮುಂಚೆ ಮುದ್ರಿಸಿ ಬಿಡುಗಡೆ ಮಾಡಿದಂಥವು. ಇವುಗಳ ಕಾಲಾವಧಿ 4-5 ವರ್ಷ ಮಾತ್ರ. ಹೀಗಾಗಿ, ಈ ನೋಟುಗಳನ್ನು ಹಿಂಪಡೆಯಲಾಗುತ್ತಿದೆ.
- 2,000 ರೂ ಮುಖಬೆಲೆಯ ನೋಟುಗಳು ಹೆಚ್ಚು ಚಲಾವಣೆಯಲ್ಲಿ ಇಲ್ಲದಿರುವುದು
- ಜನರ ಹಣ ವಹಿವಾಟಿನ ಅಗತ್ಯಕ್ಕೆ ಬೇರೆ ಕರೆನ್ಸಿಗಳು ಸಾಕಷ್ಟು ಇರುವು