20,000 ರೂ. ಒಳಗೆ ಸಿಗುತ್ತಿರುವ 108MP ಕ್ಯಾಮೆರಾದ ಬೆಸ್ಟ್ ಸ್ಮಾರ್ಟ್ಫೋನ್ಸ್
ಭಾರತೀಯ ಸ್ಮಾರ್ಟ್ಫೋನ್ (Smartphone) ಮಾರುಕಟ್ಟೆಯಲ್ಲಿ ಈಗೀಗ ಮೊಬೈಲ್ಗಳ ಬಿಡುಗಡೆ ಸಂಖ್ಯೆ ಏರಿಕೆಯಾಗುತ್ತಿದೆ. ಅದರಲ್ಲೂ ಬಜೆಟ್ ಬೆಲೆಯ ಫೋನ್ಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಮುಖ್ಯವಾಗಿ ಆಕರ್ಷಕ ಕ್ಯಾಮೆರಾ (Camera), ಉತ್ತಮ ಬ್ಯಾಟರಿ ಇರುವ ಫೋನ್ ಕಡಿಮೆ ಬೆಲೆಗೆ ಬಿಡುಗಡೆ ಆಯಿತೆಂದರೆ ಜನರು ಖರೀದಿಸಲು ಮುಗಿಬೀಳುತ್ತಾರೆ. ಈ ಹಿಂದೆ ಒಂದೊಳ್ಳೆ ಕ್ಯಾಮೆರಾ ಫೋನ್ ಬೇಕೆಂದರೆ ಅದರ ಬೆಲೆ 40,000ಕ್ಕಿಂತ ಅಧಿಕವಿತ್ತು. ಆದರೀಗ ಕಾಲ ಬದಲಾಗಿದೆ. ಅತ್ಯಂತ ಕಡಿಮೆ ಬೆಲೆಗೆ ಪವರ್ಫುಲ್ ಕ್ಯಾಮೆರಾದ ಫೋನ್ಗಳು ಅನಾವರಣಗೊಳ್ಳುತ್ತಿದೆ. ಮುಖ್ಯವಾಗಿ ಭಾರತದ ಮಾರ್ಕೆಟ್ನಲ್ಲಿ 108 ಮೆಗಾಫಿಕ್ಸೆಲ್ ಸ್ಮಾರ್ಟ್ಫೋನ್ಗೆ (108MP Camera Phone) ಭರ್ಜರಿ ಬೇಡಿಕೆ ಇದೆ. ಇದೇ ಕಾರಣಕ್ಕೆ ಕೆಲ ಕಂಪನಿಗಳು ದೇಶದಲ್ಲಿ ಬಜೆಟ್ ಬೆಲೆಗೆ 108MP ಸಾಮರ್ಥ್ಯದ ಸೆನ್ಸಾರ್ನಲ್ಲಿ ಫೋನ್ ರಿಲೀಸ್ ಮಾಡುತ್ತಿದೆ. ಹಾಗಾದ್ರೆ ನೀವು 20,000 ರೂ. ಒಳಗಡೆ ಖರೀದಿಸಬಹುದಾದ 108 ಮೆಗಾಫಿಕ್ಸೆಲ್ನ ಅತ್ಯುತ್ತಮ ಸ್ಮಾರ್ಟ್ಫೋನ್ಗಳು ಯಾವುವು ಎಂಬುದನ್ನು ನೋಡೋಣ.
ಈ ಸ್ಮಾರ್ಟ್ಫೋನ್ ಕೂಡ 6.67 ಇಂಚಿನ FHD+ ಅಮೊಲೊಡ್ ಡಿಸ್ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್ಡ್ರಾಗನ್ 732G 8nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5020mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2+5 ಮೆಗಾಫಿಕ್ಸೆಲ್ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 19,999 ರೂ.
ಮೋಟೋ ಎಡ್ಜ್ 20 ಫ್ಯೂಶನ್:
ಈ ಸ್ಮಾರ್ಟ್ಫೋನ್ 6.67 ಇಂಚಿನ FHD+ ಅಮೊಲೊಡ್ ಡಿಸ್ಪ್ಲೇ ಹೊಂದಿದೆ. ಆಕ್ಟಾಕೋರ್ ಮೀಡಿಯಾ ಟೆಕ್ ಡೈಮನ್ಸಿಟಿ 800U ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. ಮುಖ್ಯವಾಗಿ 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2 ಮೆಗಾಫಿಕ್ಸೆಲ್ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 32 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 18,999 ರೂ.
ರೆಡ್ಮಿ ನೋಟ್ 11 ಪ್ರೊ ಪ್ಲಸ್:
ಈ ಸ್ಮಾರ್ಟ್ಫೋನ್ ಕೂಡ 6.67 ಇಂಚಿನ FHD+ ಅಮೊಲೊಡ್ ಡಿಸ್ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್ಡ್ರಾಗನ್ 695 8nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2 ಮೆಗಾಫಿಕ್ಸೆಲ್ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 19,999 ರೂ.
ರಿಯಲ್ ಮಿ 9:
ಈ ಸ್ಮಾರ್ಟ್ಫೋನ್ 6.4 ಇಂಚಿನ FHD+ ಅಮೊಲೊಡ್ ಡಿಸ್ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್ಡ್ರಾಗನ್ 680 6nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 12 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2+2 ಮೆಗಾಫಿಕ್ಸೆಲ್ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 18,999 ರೂ.
ರೆಡ್ಮಿ ನೋಟ್ 11 ಪ್ರೊ:
ಈ ಸ್ಮಾರ್ಟ್ಫೋನ್ ಕೂಡ 6.67 ಇಂಚಿನ FHD+ ಅಮೊಲೊಡ್ ಡಿಸ್ಪ್ಲೇ ಹೊಂದಿದೆ. ಆಕ್ಟಾಕೋರ್ ಮೀಡಿಯಾ ಟೆಕ್ ಹೀಲಿಯೊ G96 ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. ಮುಖ್ಯವಾಗಿ 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್, 2 ಮೆಗಾಫಿಕ್ಸೆಲ್ನ 2 ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 17,999 ರೂ.
ಮೋಟೋ G60:
ಈ ಸ್ಮಾರ್ಟ್ಫೋನ್ 6.8 ಇಂಚಿನ FHD+ ಅಮೊಲೊಡ್ ಡಿಸ್ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್ಡ್ರಾಗನ್ 732G ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 6000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2 ಮೆಗಾಫಿಕ್ಸೆಲ್ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 32 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 15,689 ರೂ.
ರೆಡ್ಮಿ ನೋಟ್ 10S:
ಈ ಸ್ಮಾರ್ಟ್ಫೋನ್ 6.43 ಇಂಚಿನ FHD+ ಅಮೊಲೊಡ್ ಡಿಸ್ಪ್ಲೇ ಹೊಂದಿದೆ. ಆಕ್ಟಾಕೋರ್ ಮೀಡಿಯಾ ಟೆಕ್ ಹೀಲಿಯೊ G96 12nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2+2 ಮೆಗಾಫಿಕ್ಸೆಲ್ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 17,499 ರೂ.