ಈಶ್ವರಪ್ಪ ಕೆಂಡಾಮಂಡಲ ಬೆನ್ನಲ್ಲೇ ನಾನು ಗೆದ್ದು ತೋರಿಸುತ್ತೇನೆ ಎಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ..!
ರ್ನಾಟಕ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪರ್ಧೆ ಖಚಿತವಾಗಿದೆ. ಆದರೆ ಹಾವೇರಿಯಲ್ಲಿ ಪುತ್ರನಿಗೆ ಟಿಕೆಟ್ ಕೊಡಿಸುವ ಲಾಬಿ ನಡೆಸಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಪ್ರಯತ್ನ ವಿಫಲವಾಗಿದೆ. ಹೀಗಾಗಿ ಬಿಜೆಪಿ ಆತಂಕರಿಕ ಒಲಯದಲ್ಲಿ ಅಸಮಾಧಾನದ ಹೊಗೆಯಾಡತೊಡಗಿದೆ.
ಹಾವೇರಿಯಿಂದ ತಮಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ‘ಹಾವೇರಿ ಕ್ಷೇತ್ರದಲ್ಲಿ ಮೋದಿ ಅವರನ್ನು ಇನ್ನೊಮ್ಮೆ ಪ್ರಧಾನಿಯಾಗಿ ಮಾಡಿ ದೇಶವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಬಯಕೆ ಇದೆ. ಹೀಗಾಗಿ ನನ್ನನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಕಳುಹಿಸುತ್ತಾರೆ. ಹಾವೇರಿಯಲ್ಲಿ ಗೆದ್ದು ತೋರಿಸುತ್ತೇನೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಕಳೆದ ದಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬಳಿಕ ಮಾತನಾಡಿದ ಬೊಮ್ಮಾಯಿ ಅವರು, ಜನರ ಆಶೀರ್ವಾದದಿಂದ ಕ್ಷೇತ್ರದ ಅಭಿವೃದ್ಧಿಯನ್ನು ಚಾಚೂ ತಪ್ಪದೇ ಮಾಡುತ್ತೇನೆ ಎಂದರು. ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಪುತ್ರ ಕಾಂತೇಶ್ ಕುರಿತ ಪ್ರಶ್ನೆಗೆ ಪ್ರಿಕ್ರಿಯಿಸಿ, ಅವರು ಸುಮಾರು ಆರು ತಿಂಗಳಿಂದ ಆ ಕ್ಷೇತ್ರದಲ್ಲಿ ಓಡಾಡಿದ್ದಾರೆ. ನಾನು ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ಕಾಂತೇಶ್ ಅವರಿಗೆ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದ್ದೆ. ಒಕ್ಷದ ರಾಷ್ಟ್ರೀಯ ನಾಯಕರು ಗೆಲುವಿನ ಲೆಕ್ಕಾಚಾರ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ.
ಈಶ್ವರಪ್ಪ ಅವರು ಹಿರಿಯರಿದ್ದಾರೆ. ಪಕ್ಷ ಅವರಿಗೆ ಸೂಕ್ತ ಗೌರವ ನೀಡುತ್ತದೆ ಎನ್ನುವ ವಿಶ್ವಾಸ ಇದೆ. ಕುರುಬ ಸಮುದಾಯದೊಂದಿಗೆ ನನಗೆ ಉತ್ತಮ ಸಂಬಂಧ ಇದೆ ಎಂದು ಹೇಳಿದರು.
ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಬೇಸರ : ಹಾವೇರಿಯಿಂದ ಸ್ಪರ್ಧಿಸಲು ಬಿಜೆಪಿ ಪುತ್ರನಿಗೆ ಟಿಕೆಟ್ ಕೊಡುವ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಭಾರೀ ಬೇಸರವಾಗಿದೆ. ಹಾವೇರಿ ಟಿಕೆಟ್ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ನೀಡಿದ್ದು ಇದರಿಂದ ಈಶ್ವರಪ್ಪ ಬೇಸರಗೊಂಡಿದ್ದಾರೆ. ಜೊತೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕೆ.ಇ.ಕಾಂತೇಶ್‌ಗೆ ಹಾವೇರಿ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹಾವೇರಿ ಭಾಗದಲ್ಲಿ ಕಾಂತೇಶ್ ಓಡಾಡಿ ಜನರ ವಿಶ್ವಾಸ ಗಳಿಸಿದ್ದ. ವಿವಿಧ ಮಠಾಧೀಶರು ನನ್ನ ಮಗ ಕಾಂತೇಶ್ ಬೆನ್ನಿಗೆ ನಿಂತಿದ್ದರು. ಆದ್ರೆ, ಇಂದು ನನ್ನ ಮಗ ಕೆ.ಇ.ಕಾಂತೇಶ್‌ಗೆ ಟಿಕೆಟ್ ಕೈತಪ್ಪಿದೆ. ಯಡಿಯೂರಪ್ಪ ನಮಗೆ ಮೋಸ ಮಾಡಿದ್ದಾರೆಂದು ಬೇಸರವಿದೆ ಎಂದು ಅಸಮಾಧಾನ ಹೊರಕಿದರು. ರಾಜ್ಯದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿದೆ. ಕುಟುಂಬದ ಕೈಯಿಂದ ಪಕ್ಷ ರಕ್ಷಿಸಬೇಕೆಂಬ ಒತ್ತಾಯವಿದೆ. ಕರ್ನಾಟಕದಲ್ಲಿ ಬೇರೆ ಯಾರೂ ಲಿಂಗಾಯ ನಾಯಕರಿಲ್ವಾ? ಬಿಎಸ್ ಯಡಿಯೂರಪ್ಪ ಪಟ್ಟು ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಶೋಬಾ ಕರಂದ್ಲಾಜೆ, ಬಸವರಾಜ್ ಬೊಮ್ಮಾಯಿಗೆ ಟಿಕೆಟ್ ಕೊಡಿಸಿದ್ದಾರೆ. ನನ್ನ ಮಗ ಕಾಂತೇಶ್‌ಗೆ ಯಾಕೆ ಟಿಕೆಟ್ ಕೊಡಿಸಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಸಿ.ಟಿ.ರವಿ, ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹಗೆ ಅನ್ಯಾಯವಾಗಿದೆ ಎಂದು ಬೇಸರ ಹೊರಹಾಕಿದರು. ಈ ಮೂಲಕ ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು