ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2023 ರಲ್ಲಿ ಸಿರಿಧಾನ್ಯ ರಫ್ತಿನಲ್ಲಿ ಕರ್ನಾಟಕ ನಂ. 1: ಶೋಭಾ ಕರಂದ್ಲಾಜೆ

Twitter
Facebook
LinkedIn
WhatsApp
WhatsApp Image 2021 08 28 at 10.40.39 AM

ಬೆಂಗಳೂರು: 2023 ರ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಲಾಗುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯಲು ಸಾಕಷ್ಟು ವಾತಾವರಣ ಹೆಚ್ಚಾಗಿದೆ. 2023 ರ ವೇಳೆಗೆ ಕರ್ನಾಟಕ ಸಿರಿಧಾನ್ಯ ರಫ್ತು ಮಾಡುವಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ರಾಜ್ಯವಾಗಬೇಕು. ಎಲ್ಲಾ ದೇಶಗಳು ಈ ಪ್ರಸ್ತಾವನೆಯನ್ನು ಎಲ್ಲಾ ದೇಶಗಳು ಒಪ್ಪಿಕೊಂಡಿವೆ ಎಂದು ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಿರಿಧಾನ್ಯಕ್ಕೆ ಹೆಚ್ಚು ಒತ್ತು ನೀಡಲು ಹೆಚ್ಚು ಬೆಳೆಯಲು ಉತ್ತಮ ವಾತಾವರಣವಿದೆ. ಭಾರತದ ಸ್ವಾತಂತ್ರ್ಯೋತ್ಸವದ 75 ನೇ ವರ್ಷದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಎಲ್ಲಾ ತೋಟಗಾರಿಕಾ ಮತ್ತು ಆಹಾರ ಧಾನ್ಯಗಳ ರಫ್ತುದಾರರನ್ನು ಸೇರಿಸಿ ಸೆಪ್ಟೆಂಬರ್ 22 ರಂದು ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದಂತೆ ರಫ್ತುದಾರರು ಇದರಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯದ ಕೃಷಿ ಇಲಾಖೆ ಮಾಡಿದ ಮೊಬೈಲ್ ಬೆಳೆ ಆಪ್ ಸಮೀಕ್ಷೆ ಇಡೀ ದೇಶಕ್ಕೆ ಮಾದರಿಯಾಗಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಗೆ ಒತ್ತು ನೀಡಿ ಗುಣಮಟ್ಟದ ಉತ್ಪಾದನೆ, ಸಂಗ್ರಹಣೆ, ಮಾರ್ಕೆಟಿಂಗ್, ಮಾರಾಟ ಮಾಡಲು ಪ್ರತಿಯೊಂದು ಜಿಲ್ಲೆಯಲ್ಲಿಯೂ ಕ್ಲಸ್ಟರ್ ಮಾಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ರೈತ ಕೃಷಿಯಲ್ಲಿ ಮುಂದುವರಿದು ಲಾಭದಾಯಕವಾಕಬೇಕು. ಕೃಷಿ ಜೀವನಾಧಾರ ಕಸುಬಾಗಿದ್ದು, ಒಟ್ಟು ಕೃಷಿಕರಲ್ಲಿ 80% ರಷ್ಟು ಸಣ್ಣ ಮತ್ತು ಮಧ್ಯಮ ಕೃಷಿಕರಿದ್ದಾರೆ. ಈ ಸಣ್ಣ ಮತ್ತು ಮಧ್ಯಮ ರೈತರು ನಗರಕ್ಕೆ ವಲಸೆ ಬರುವುದು ಹೆಚ್ಚಾಗುತ್ತಿದ್ದು, ಕಳೆದ 5-6 ವರ್ಷಗಳಲ್ಲಿ ಕೃಷಿಕನ ಬದುಕಿಗೆ ಒತ್ತು ಕೊಡಲು ಹಾಗೂ ರೈತನನ್ನು ರೈತರ ಆದಾಯ ಇಮ್ಮಡಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಸರ್ಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಿಳಿಸಿದ್ದಾರೆ.

ಮೋದಿ ನೇತೃತ್ವದಲ್ಲಿ 1.31 ಸಾವಿರ ಕೋಟಿ ಈ ವರ್ಷ ಕೃಷಿ ಬಜೆಟ್ ಆಗಿದೆ. ಇದನ್ನು ಹೊರತುಪಡಿಸಿ ಕೃಷಿ ಮೂಲಭೂತ ನಿಧಿ ಅಡಿಯಲ್ಲಿ 1 ಲಕ್ಷ ಕೋಟಿ ರೂ. ಹೆಚ್ಚುವರಿ ಹಣವನ್ನು ಕೊಯ್ಲೋತ್ತರ ಉತ್ಪಾದನೆಗೆ ಮಾರ್ಕೆಟಿಂಗ್ ಗೆ ಕೇಂದ್ರ ಹಣ ತೊಡಗಿಸುತ್ತಿದೆ. ಸಣ್ಣ ರೈತ ಕೃಷಿ ಜೊತೆ ಮಿಶ್ರ ಬೆಳೆ ಬೆಳೆದ ರೈತ ಲಾಭದಾಯಕವಾಗಿದೆ. ಡೈರಿ, ಹಸು ಸಾಕಾಣೆ, ಪಶುಸಂಗೋಪನೆ, ಅಗ್ರೋ ಫಾರೆಸ್ಟ್ರಿ, ಮೀನುಗಾರಿಕೆ ಸೇರಿದಂತೆ ಹಲವಾರು ಉಪಕಸುಬುಗಳಿಗೆ ಸರ್ಕಾರ ನೆರವು ನೀಡುತ್ತಿದೆ. ಎಲ್ಲಾ ರಾಜ್ಯ ಒಗ್ಗೂಡಿ ರೈತನನ್ನು ಲಾಭದಾಯಕನನ್ನಾಗಿಸಲು ಕೇಂದ್ರ ಕಾರ್ಯಕ್ರಮ ಹಮ್ಮಿಕೊಂಡಿದೆ.

ಪಶುಸಂಗೋಪನೆ ಸೇರಿದಂತೆ ಬೇರೆಬೇರೆ ಕಸುಬುಗಳಿಗೆ ಒತ್ತು ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಾಯ ಮಾಡುತ್ತಿವೆ. ಎಲ್ಲಾ ಸಣ್ಣ ರೈತರನ್ನು ಒಗ್ಗೂಡಿಸಲು ಎಫ್.ಪಿ.ಒ.(ಕೃಷಿ ಉತ್ಪಾದಕರ ಸಂಘ)
10 ಸಾವಿರ ಕೃಷಿ ಉತ್ಪಾದಕರ ಸಂಘ ಮಾಡಲು ಕೇಂದ್ರ ಒತ್ತು ನೀಡಲು ನಿರ್ಧರಿಸಿದೆ. 750 ಎಫ್.ಪಿ.ಓ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಾಗಲು ಸಿಎಂ ಬೊಮ್ಮಾಯಿ ಕರೆ ನೀಡಿದ್ದಾರೆ. ಅದರಂತೆ ಒಂದು ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಎಫ್.ಪಿ.ಓ. ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಪೆಟ್ರೋಲ್ ಗೆ ಪರ್ಯಾಯವಾಗಿ ಎಥಿನಾಲ್ ಬಳಸಬಹುದಾಗಿದ್ದು, ಕರ್ನಾಟಕದಲ್ಲಿ ಮಂಡ್ಯ ಸೇರಿದಂತೆ ಬಹುತೇಕ ನೀರಾವರಿ ಪ್ರದೇಶದಲ್ಲಿ ಕಬ್ಬು ಬೆಳೆಯುತ್ತಿದ್ದು, ಸಕ್ಕರೆಯಿಂದ ಎಥಿನಾಲ್ ತಯಾರಿಸಲು ಒತ್ತು ನೀಡಲಾಗುತ್ತಿದ್ದೆ. 9. 5 ಬಿಲಿಯನ್ ಮೆಟ್ರಿಕ್ ಟನ್ ಸಕ್ಕರೆಯಿಂದ ಎಥಿನಾಲ್ ಮಾಡಲಾಗಿದೆ. ಅದರಂತೆ ಗೋಧಿ ಸೇರಿದಂತೆ ಬಹುತೇಕ ಧಾನ್ಯಗಳಿಂದಲೂ ಎಥಿನಾಲ್ ತಯಾರಿಸಬಹುದಾಗಿದೆ ಎಂದು ವಿವರಿಸಿದ್ದಾರೆ.

ರಾಜ್ಯ ಸರ್ಕಾರ ಅಭಿವೃದ್ಧಿ ಪಡಿಸಿರುವ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲಾಗುವುದು.ಆಂಧ್ರ ಪ್ರದೇಶದಲ್ಲಿ ಕೃಷಿ ಭರವಸಾ ಯೋಜನೆ ಜಾರಿ ಮಾಡಿದ್ದಾರೆ. ತಮಿಳುನಾಡಿನಲ್ಲಿ ತರಕಾರಿ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಈ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು. ರಫ್ತು ಉದ್ಯಮಕ್ಕೆ ಉತ್ತೇಜನ ನೀಡಲು ಕ್ರಮ ವಹಿಸಲಾಗುವುದು. ಒಳನಾಡಿನ ಮೀನುಗಾರಿಕೆಗೆ ಉತ್ತೇಜನ. ರೇಷ್ಮೆ ಬೆಳೆ ಉತ್ತೇಜನ, ರೇಷ್ಮೆಗೆ ಈ ಮಾರುಕಟ್ಟೆ ಜಾರಿಗೆ ತರಲು ತೀರ್ಮಾನ. ಶೇ 50 ರಷ್ಟು ರೈತರು ಇ ಪೇಮೆಂಟ್ ವ್ಯವಸ್ಥೆಗೆ ಅಳವಡಿಸಿಕೊಂಡಿದ್ದಾರೆ.57.ಕೋಟಿ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ವಿಮೆ ಹಣ ತಲುಪಿಸಲಾಗಿದೆ. ದೇಶ ಇತಿಹಾಸದಲ್ಲಿ 320 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮಾಡಲಾಗಿದೆ. ಫುಡ್ ಪ್ರೊಸೆಸ್ಸಿಂಗ್ ಆಹಾರ ರಫ್ತು ಮಾಡಲು ಕೈಗಾರಿಕಾ ಇಲಾಖೆಯಲ್ಲಿ ಪ್ರತ್ಯೇಕ ವಿಂಗ್ ಮಾಡಲು ಮನವಿ ಮಾಡಿದ್ದೇನೆ. ಅವರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.
ಕೃಷಿಗೆ ಸಂಬಂಧಿಸಿದ ಕೆಲಸಗಳನ್ನು ಎನ್ ಆರ್.ಇ.ಜಿ. ಮೂಲಕ ಜಾರಿಗೆ ಆದ್ಯತೆ ನೀಡಲಾಗುವುದು. ಎಫ್‌ಪಿಒ ಗಳ ಮೂಲಕ ಕೃಷಿ ಉತ್ಪನ್ನಗಳ ಮಾರಾಟ ಮಾಡಲು ಕ್ರಮ ಕೈಗೊಳ್ಳಲಾಗುವುದು. ಎಫ್‌ಪಿಒ 25 ವಿವಿಧ ರೀತಿಯ ಕ್ರಮಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.ಪ್ರವಾಹ ಪರಿಹಾರವಾಗಿ ಎನ್ ಡಿ ಆರ್ ಎಫ್ ಮೂಲಕ 630 ಕೋಟಿ ಬಿಡುಗಡೆ ಮಾಡಲಾಗಿದೆ. ಕೊರೊನಾ ದಿಂದ ಎರಡು ವರ್ಷ ಹಿನ್ನಡೆಯಾಗಿದೆ. ಕೊರೊನಾ ಕಾರಣದಿಂದ ಸ್ವಲ್ಪ ಮುಂದೂಡಿಕೆಯಾಗಿದೆ. ರಸಗೊಬ್ಬರ ಬೆಲೆ ಹೆಚ್ಚಳವಾದರೂ ಕೇಂದ್ರ ಸರ್ಕಾರ ಸಬ್ಸಿಡಿ ಕೊಡುತ್ತಿದೆ. ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದ ಮೂರು ಬಿಲ್ ಗಳ ಬಗ್ಗೆ ಬಹಳ ಸ್ಪಷ್ಟವಿದೆ. ಮೂವತ್ತು ವರ್ಷಗಳಿಂದ ಅನೇಕ ಸಮಿತಿಗಳು ನೀಡಿರುವ ವರದಿಗಳ ಆಧಾರದಲ್ಲಿ ಕಾಯ್ದೆಗಳನ್ನು ಜಾರಿಗೆ ಜಾರಿಗೆ ತರಲಾಗಿದೆ. ಸ್ವಾಮಿನಾಥನ್ ವರದಿ ಪ್ರಕಾರ ಎಪಿಎಂಸಿ ಯಲ್ಲಿ ರೈತರಿಗೆ ಅನ್ಯಾಯಗುತ್ತಿದೆ ಎಂದು ಹೇಳಿದ್ದಾರೆ. ರೈತರ ಜೊತೆ ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ಧವಿದೆ ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು