ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2024ರ ಚನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ - ಕಮಲ್‌ನಾಥ್

Twitter
Facebook
LinkedIn
WhatsApp
30rahul 1

ನವದೆಹಲಿ(ಡಿ.31): ಕೇಂದ್ರದಲ್ಲಿ ಅಧಿಕಾರಕ್ಕೇರಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಕಳೆದೆರಡು ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದ ಕಾರಣ ಈ ಬಾರಿ ಭರ್ಜರಿ ತಯಾರಿ ನಡೆಸುತ್ತಿದೆ. ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆ ಮೂಲಕ ಪಕ್ಷ ಸಂಘಟನೆ ನಡೆಸುತ್ತಿದ್ದಾರೆ. ಇತ್ತ ಹಿಮಾಚಲ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಉತ್ಸಾಹ ಹೆಚ್ಚಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ, ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮಹತ್ವದ ಘೋಷಣೆ ಮಾಡಿದ್ದಾರೆ.

 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿ ಎಂದಿದ್ದಾರೆ. ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟುತ್ತಿದ್ದಾರೆ. ಈ ಹಿಂದೆ ಯಾರು ಮಾಡಿರದ ಕೆಲಸವನ್ನು ರಾಹುಲ್ ಗಾಂಧಿ ಮಾಡುತ್ತಿದ್ದಾರೆ. ಅವರೇ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಕಮಲನಾಥ್ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಯಾವುದೇ ರಾಜಕೀಯ ಮಾಡುತ್ತಿಲ್ಲ. ಜನಸಾಮಾನ್ಯರ ನಾಡಿಮಿಡಿತವನ್ನು ರಾಹುಲ್ ಗಾಂಧಿ ಅರಿತುಕೊಂಡಿದ್ದಾರೆ. ಇತರ ಪಕ್ಷಗಳಂತೆ ಅಧಿಕಾರಕ್ಕೇರಲು ರಾಜಕೀಯ ಮಾಡುವ ಜಾಯಮಾನ ರಾಹುಲ್ ಗಾಂಧಿಗಿಲ್ಲ. ದೇಶದಲ್ಲಿ ಜನಾಂದೋಲನದ ಮೂಲಕ ಪಕ್ಷ ಸಂಘಟನೆ ಮಾಡುವು ನಾಯಕ ರಾಹುಲ್ ಗಾಂಧಿ ಎಂದು ಕಮಲ್ ನಾಥ್ ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಅನ್ನೋ ಕಮಲ್ ನಾಥ್ ಹೇಳಿಕೆ ಇದೀಗ ಕಾಂಗ್ರೆಸ್ ಪಾಳಯದಲ್ಲೇ ಹೊಸ ಸಂಚನ ಸೃಷ್ಟಿಸಿದೆ.

ರಾಹುಲ್ ಗಾಂಧಿಗೆ ಪಕ್ಷವನ್ನು ಮುನ್ನಡೆಸುವ ಶಕ್ತಿ ಇದೆ. ಹೀಗಾಗಿ ದೇಶವನ್ನು ಮುನ್ನಡೆಸಲು ರಾಹುಲ್ ಗಾಂಧಿ ಸೂಕ್ತರಾಗಿದ್ದಾರೆ. ರಾಹುಲ್ ಗಾಂಧಿಯೇ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಎಂದಿದ್ದಾರೆ.  ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಅನ್ನೋ ಹೇಳಿಕೆ ಇದೀಗ ಮತ್ತೆ ಆರಂಭಗೊಂಡಿದೆ. ಈ ಬಾರಿ ಕಮಲ್ ನಾಥ್ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಹಲವು ನಾಯಕರು ರಾಹುಲ್ ಗಾಂಧಿಗೆ ಪ್ರಧಾನಿ ಅಭ್ಯರ್ಥಿ ಪಟ್ಟ ಕಟ್ಟಲು ತುದಿಗಾಲಲ್ಲಿ ನಿಂತಿದ್ದಾರೆ. 

ಸದ್ಯ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ದೆಹಲಿಯಲ್ಲಿ ಸಂಚರಿಸುತ್ತಿದೆ. ಪಂಜಾಬ್ ಮೂಲಕ ಹಾದು ಹೋಗಲಿರುವ ಯಾತ್ರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸಮಾಪ್ತಿಗೊಳ್ಳಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ