ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥ
Twitter
Facebook
LinkedIn
WhatsApp
ಕಲಬುರಗಿ: ಕಲುಷಿತ ಆಹಾರ (Food Poisoning) ಸೇವಿಸಿ 21 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಆಳಂದ ಪಟ್ಟಣದಲ್ಲಿ (Aland) ನಡೆದಿದೆ.
ಅಸ್ವಸ್ಥರು ವಿಜಯಪುರ (Vijayapura) ಜಿಲ್ಲೆಯ ಚಡಚಣದ (Chadchan) ಡೋಣಿ ನಿವಾಸಿಗಳು ಎಂದು ತಿಳಿದುಬಂದಿದೆ. ಡೋಣಿ ನಿವಾಸಿಗಳು ನಿನ್ನೆ (ಜೂನ್.01) ರಂದು ಲಾಡ್ಲೇ ಮಶಾಕ್ ದರ್ಗಾಕ್ಕೆ ಹರಕೆ ತೀರಿಸಲು ಬಂದಿದ್ದರು.
ಊಟ ಸೇವಿಸಿದ್ದ ಬಳಿಕ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರಿಗೆ ಆಳಂದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.