210 ರ ಗಡಿ ದಾಟಿದ ಇಂಡಿಯಾ ಒಕ್ಕೂಟ; ಕ್ಷಣ ಕ್ಷಣಕ್ಕೂ ತೀವ್ರ ಕುತೂಹಲ..!
ಲೋಕಸಭೆ ಚುನಾವಣೆ ಫಲಿತಾಂಶ 2024 : 287 ಸ್ಥಾನಗಳಲ್ಲಿ ಎನ್ಡಿಎ, 210 ರಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ
ಬೆಂಗಳೂರು ಗ್ರಾ.ಕ್ಷೇತ್ರದಲ್ಲಿ ಡಾ.ಮಂಜುನಾಥ್ಗೆ ಮುನ್ನಡೆಯಾಗಿದೆ. 81,572 ಮತ ಪಡೆದು ಮುನ್ನಡೆ ಸಾಧಿಸಿದ್ದಾರೆ. ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ಗೆ ಹಿನ್ನಡೆಯಾಗಿದೆ. 52,363 ಮತ ಪಡೆದಿದ್ದಾರೆ.
ಕೊಪ್ಪಳ ಕ್ಷೇತ್ರದಲ್ಲಿ 2ನೇ ಹಂತದಲ್ಲಿ ಕಾಂಗ್ರೆಸ್ಗೆ ಮುನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಎರಡನೇ ಹಂತದಲ್ಲಿ 2 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಕೆ.ಬಸವರಾಜ್ಗೆ ಹಿನ್ನಡೆಯಾಗಿದೆ.
ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ. ಯದುವೀರ ಒಡೆಯರ್ಗೆ 12072 ಮತಗಳ ಮುನ್ನಡೆ. ಯದುವೀರ 70855 ಮತ, ಎಂ.ಲಕ್ಷ್ಮಣ 58783 ಮತ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ 27,993 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 25010 ಮತಗಳನ್ನು ಗಳಿಸಿದ್ದಾರೆ. 2,983 ಮತಗಳಿಂದ ಬಿಜೆಪಿ ಮುನ್ನಡೆ.
ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ. ಬಿಜೆಪಿ ಅಭ್ಯರ್ಥಿ ಕಾಗೇರಿ 42,156 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ 34042 ಮತಗಳನ್ನು ಪಡೆದಿದ್ದಾರೆ.