ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

22 ವರ್ಷದ ಪದವಿ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವು!

Twitter
Facebook
LinkedIn
WhatsApp
chikkaballapur 1

ಚಿಕ್ಕಬಳ್ಳಾಪುರ: ಆಗಸ್ಟ್ 14 ರಂದು 22 ವರ್ಷದ ಪದವಿ ವಿದ್ಯಾರ್ಥಿನಿ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ ದೂರು ನೀಡಿದ್ದಾನೆ. ಆದರೆ ಸಂಬಂಧಿಕರು, ಇಲ್ಲ ಇದು ಕೊಲೆ. ನಮ್ಮ ಮನೆ ಮಗಳಿಗೆ ನ್ಯಾಯ ನೀಡಿ, ಆತ್ಮಕ್ಕೆ ಶಾಂತಿ ಕೊಡಿಸಿ ಎಂದು ಈಗ ಪೊಲೀಸರ ಮೊರೆ ಹೋಗಿದ್ದಾರೆ.

ಮಗಳನ್ನೇ ತಂದೆ ಕೊಲೆ ಮಾಡಿರುವ ಆರೋಪ ಕೇಳಿ ಬಂದಿರೋದು ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಮಂಚೇನಹಳ್ಳಿ ಬಳಿಯ ವರವಣಿ ಗ್ರಾಮದಲ್ಲಿ. ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವತಿ ಶೀಲಾ (22) ವರವಣಿ ಗ್ರಾಮದ ನಿವಾಸಿ. ಗ್ರಾಮದ ರವಿಶಂಕರ್ ಹಾಗೂ ಜಯಂತಮ್ಮ ದಂಪತಿಯ ಒಬ್ಬಳೇ ಮಗಳು. ಆದರೆ ಶೀಲಾ ಕಳೆದ ಆಗಸ್ಟ್ 14 ರಂದು ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತಳ ತಂದೆ ರವಿಶಂಕರ್, ತನ್ನ ಮಗಳು ಹುಷಾರಿಲ್ಲದ ಕಾರಣ ಕಾಲೇಜಿಗೆ ಹೋಗದೆ ಮನೆಯಲ್ಲಿಯೇ ಇದ್ದು ಅನಾರೋಗ್ಯದ ಹಿನ್ನೆಲೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ನೀಡಿದ್ದಾನೆ.

ಈ ಸಂಬಂಧ ಐಪಿಸಿ ಸೆಕ್ಷನ್ 174 ಸಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿರುವ ಮಂಚೇನಹಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ. ಆದರೆ ಈ ಮಧ್ಯೆ ಶೀಲಾ ಸಾವಿನ ಬಗ್ಗೆ ಸಂಬಂಧಿಕರಿಗೆ ಸಾಕಷ್ಟು ಅನುಮಾನಗಳು ಮೂಡಿವೆ. ಹೀಗಾಗಿ ಮೃತ ಶೀಲಾಳ ತಾಯಿ ಜಯಂತಮ್ಮನವರ ಸಹೋದರಿಯರು ಶೀಲಾ ಆತ್ಮಹತ್ಯೆ ಮಾಡಿಕೊಂಡಿಲ್ಲ, ಬದಲಾಗಿ ಆಕೆಯನ್ನು ತಂದೆಯೇ ಹಲ್ಲೆ ಮಾಡಿ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮೃತ ಶೀಲಾ ತಾಯಿ ಜಯಂತಮ್ಮಳ ಸಹೋದರಿಯರು ಹೇಳೋ ಹಾಗೆ ಶೀಲಾಳ ತಂದೆ ರವಿಶಂಕರ್ ತಾಯಿ ಹಾಗೂ ಮಗಳಿಗೆ ವಿನಾಕಾರಣ ಕಿರುಕುಳ ಕೊಟ್ಟು ದೂರ ಮಾಡುತ್ತಿದ್ದರು. ಇನ್ನೂ ರವಿಶಂಕರ್ ಬೇರೊಬ್ಬರ ಜೊತೆ ಅನೈತಿಕ ಸಂಬಂಧ ಸಹ ಹೊಂದಿದ್ದು ಇದಕ್ಕೆ ಮಗಳು ಸದಾ ವಿರೋಧ ಮಾಡುತ್ತಿದ್ದಳು. ಇದರಿಂದ ಮಗಳನ್ನು ಕಂಡರೆ ತಂದೆಗೆ ಆಗುತ್ತಿರಲಿಲ್ಲ.

ಇನ್ನೂ ಶೀಲಾ ಯಾರನ್ನೋ ಲವ್ ಮಾಡುತ್ತಿದ್ದಳು ಎನ್ನುವ ಅನುಮಾನದ ಮೇರೆಗೆ ಪದೇ ಪದೆ ಮಗಳಿಗೆ ಹೊಡೆಯೋದು ಬಡಿಯೋದು ಮಾಡಿ ಕಿರುಕುಳ ಸಹ ಕೊಡುತ್ತಿದ್ದ. ಇದೇ ವಿಚಾರದಲ್ಲಿ ಮಗಳು ಕದ್ದು ಮುಚ್ಚಿ ಫೋನ್ ಬಳಸುತ್ತಿದ್ದುದನ್ನು ಕಂಡು ಆಕೆಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ನಮಗೆ ನ್ಯಾಯ ಕೊಡಿಸಿ ಎಂದು ಮೃತಳ ಸಂಬಂಧಿಕರು ಈಗ ಚಿಕ್ಕಬಳ್ಳಾಪುರ ವಿಭಾಗದ ಡಿವೈಎಸ್‌ಪಿ ಮೊರೆ ಹೋಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಗೂ ಪತ್ರ ಬರೆದು ನ್ಯಾಯಕ್ಕಾಗಿ ಅಂಗಲಾಚಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದ್ದು, ಶೀಲಾಳ ಮರಣೋತ್ತರ ಪರೀಕ್ಷಾ ವರದಿ ಹಾಗೂ ಎಫ್‌ಎಸ್‌ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಹೀಗಾಗಿ ವರದಿಯ ನಂತರ ಇದು ತಂದೆ ಹೇಳುವ ಹಾಗೆ ಆತ್ಮಹತ್ಯೆಯೋ ಇಲ್ಲ ಕೊಲೆಯೋ ಎಂಬುದು ಬಯಲಾಗಬೇಕಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ