ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

23 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ : ನಂಜಪ್ಪ ಆಸ್ಪತ್ರೆ, ಕಾಲೇಜು ಸೀಲ್‌ ಡೌನ್‌

Twitter
Facebook
LinkedIn
WhatsApp
23 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ : ನಂಜಪ್ಪ ಆಸ್ಪತ್ರೆ, ಕಾಲೇಜು ಸೀಲ್‌ ಡೌನ್‌

ಶಿವಮೊಗ್ಗ : ಓಮಿಕ್ರಾನ್‌ ಭೀತಿಯ ನಡುವಲ್ಲೇ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಧಾರವಾಡದ ಬೆನ್ನಲ್ಲೇ ಇದೀಗ ಶಿವಮೊಗ್ಗದ ಗಾಡಿಕೊಪ್ಪದ ಬಳಿಯಲ್ಲಿರುವ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯ (Nanjappa Multi-Specialty Hospital) ನರ್ಸಿಂಗ್‌ ಕಾಲೇಜಿನ 23 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಂಜಪ್ಪ ನರ್ಸಿಂಗ್‌ ಕಾಲೇಜು ( Nanjappa Nursing College) ಹಾಗೂ ನಂಜಪ್ಪ ಆಸ್ಪತ್ರೆ (Nanjappa Hospital) ಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ರಾಜ್ಯದಲ್ಲಿ ವಸತಿ ಶಾಲೆ, ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್‌ ವಿದ್ಯಾರ್ಥಿಗಳಲ್ಲಿಯೇ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ನಂಜಪ್ಪ ಆಸ್ಪತ್ರೆಯಲ್ಲಿನ ನರ್ಸಿಂಗ್‌ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿತ್ತು. ಈ ಪೈಕಿ ಸುಮಾರು 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ವಿದ್ಯಾರ್ಥಿಗಳು ಇತ್ತೀಚಿಗಷ್ಟೇ ಕೇರಳದಿಂದ ವಾಪಾಸಾಗಿದ್ದರು.

ಈ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲು ಆರೋಗ್ಯ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಸಿಬ್ಬಂದಿಗಳನ್ನೂ ಕೂಡ ತಪಾಸಣೆಗೆ ಒಳಪಡಿಸುವ ಸಾಧ್ಯತೆಯಿದೆ. ಕೇರಳದಿಂದ ಬಂದಿರುವ ವಿದ್ಯಾರ್ಥಿಗಳಲ್ಲಿಯೇ ಹೆಚ್ಚಾಗಿ ಕೊರೊನಾ ಸೋಂಕು ಪತ್ತೆಯಾಗುತ್ತಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್‌ ಹಾಗೂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೇ ನಂಜಪ್ಪ ಆಸ್ಪತ್ರೆಯನ್ನು ಸೀಲ್‌ಡೌನ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕಾಲೇಜಿನಲ್ಲಿ 306 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಾಲೇಜಿನಲ್ಲಿ ಆರಂಭದಲ್ಲಿ ಇಬ್ಬರಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಿದಾಗ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು ನಂತರದಲ್ಲಿ ಒಟ್ಟಿ ಸೋಂಕಿತರ ಸಂಖ್ಯೆ 306ಕ್ಕೆ ಏರಿಕೆಯಾಗಿದೆ. ಕೊರೊನಾ ಸ್ಪೋಟ ಸಂಭವಿಸಿದ ಬೆನ್ನಲ್ಲೇ ಕಾಲೇಜು, ಹಾಸ್ಟೆಲ್‌ಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲದೇ ಓಪಿಡಿಯನ್ನು ಬಂದ್‌ ಮಾಡುವಂತೆ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳ ಜೊತೆಗೆ ಸಂಪರ್ಕ ಹೊಂದಿರುವವರ ಮಾಹಿತಿಯನ್ನು ಕಲೆ ಹಾಕುವ ಕಾರ್ಯವನ್ನೂ ಮಾಡಲಾಗುತ್ತಿದೆ. ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾಲೇಜಿಗೆ ಭೇಟಿಯನ್ನು ನೀಡಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಇಷ್ಟೇ ಅಲ್ಲದೇ ಹಾಸನದಲ್ಲಿನ ವಸತಿ ಶಾಲೆಯಲ್ಲಿಯೂ ಕೊರೊನಾ ಸೋಂಕು ವ್ಯಾಪಿಸಿದೆ. ರಾಜ್ಯದಲ್ಲಿ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭವಾದ ಬೆನ್ನಲ್ಲೇ ಇದೀಗ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯನ್ನು ಕಾಣುತ್ತಿದೆ. ಅದ್ರಲ್ಲೂ ವಸತಿ ಶಾಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಇನ್ನೊಂದೆಡೆಯಲ್ಲಿ ಮಕ್ಕಳು ಜ್ವರದಿಂದ ಬಳಲುತ್ತಿರುವ ಪ್ರಕರಣಗಳ ಸಂಖ್ಯೆಯೂ ಏರಿಕೆಯನ್ನು ಕಾಣುತ್ತಿದೆ. ಕಳೆದ ಕೆಲವು ತಿಂಗಳಿನಿಂದ ಸಂಪೂರ್ಣವಾಗಿ ಹತೋಟಿಗೆ ಬಂದಿದ್ದ ಕೊರೊನಾ ಸೋಂಕು ಇದೀಗ ಮೂರನೇ ಅಲೆಯ ಆತಂಕವನ್ನು ತಂದೊಡ್ಡಿದೆ. ಒಂದೊಮ್ಮೆ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯನ್ನು ಕಂಡ್ರೆ ಈ ಬಾರಿಯೂ ಶೈಕ್ಷಣಿಕ ಚಟುವಟಿಕೆ ಡೋಲಾಯಮಾನವಾಗುವ ಸಾಧ್ಯತೆಯಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು