ಮೆಫೆಡ್ರೋನ್ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಮಾದಕವಸ್ತು ನಿಯಂತ್ರಣದ ದಿಸೆಯಲ್ಲಿ ಪೊಲೀಸರು ಹಾಗೂ ಮಾದಕವಸ್ತು ನಿಯಂತ್ರಣ ಬ್ಯೂರೋ (NCB) ಅಧಿಕಾರಿಗಳು ದೇಶದಲ್ಲೇ ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದು, ದೆಹಲಿ ಹಾಗೂ ಪುಣೆಯಲ್ಲಿ ಸುಮಾರು 2,500 ಕೋಟಿ ರೂ. ಮೌಲ್ಯದ ಮೆಫೆಡ್ರೋನ್ (Mephedrone) (ಮಿಯಾಂವ್ ಮಿಯಾಂವ್) ಮಾದಕವಸ್ತುವನ್ನು ಜಪ್ತಿ (Drugs Seized) ಮಾಡಿದ್ದಾರೆ. ಸೋಮವಾರ (ಫೆಬ್ರವರಿ 21) ಸಂಜೆಯೇ ಅಧಿಕಾರಿಗಳು ಹಾಗೂ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಎರಡು ದಿನಗಳಲ್ಲಿ ಬೃಹತ್ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕುರುಕುಂಭ ಎಂಐಡಿಸಿಯಲ್ಲಿ ಮಂಗಳವಾರ (ಫೆಬ್ರವರಿ 20) ಪೊಲೀಸರು ಸುಮಾರು 1,400 ಕೋಟಿ ರೂ. ಮೌಲ್ಯದ 700 ಕೆ.ಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಂಗಳವಾರ ಸಂಜೆಯೇ ದೆಹಲಿಯಲ್ಲಿ ಪುಣೆಯ ಕ್ರೈಂ ಬ್ರಾಂಚ್ ಅಧಿಕಾರಿಗಳು 400 ಕೆ.ಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಇನ್ನೂ ಹಲವೆಡೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಸುಮಾರು 59 ಲಕ್ಷ ಶಾಲಾ ಮಕ್ಕಳಿಗೆ ಈಗಾಗಲೇ ವಾರದಲ್ಲಿ 5 ದಿನ ನೀಡುತ್ತಿರುವ ಹಾಲು ಮತ್ತು ವಾರದಲ್ಲಿ ಎರಡು ದಿನ ಮೊಟ್ಟೆ ಸೇರಿದಂತೆ ಇನ್ನು ಮುಂದೆ ವಾರಲ್ಲಿ 3 ದಿನ ರಾಗಿಮಾಲ್ಟ್ ಕೂಡ ನೀಡಲಾಗುವುದು ಎಂದು ಸಚಿವ ಹೇಳಿದರು. ರಾಗಿಮಾಲ್ಟ್ ಸ್ವಾದಿಷ್ಟವಾಗಿರುವ ಜೊತೆಗೆ ಮಕ್ಕಳನ್ನು ದೈಹಿಕವಾಗಿ ಸದೃಢವಾಗಿಸಲಿದೆ ಎಂದು ಅವರು ಹೇಳಿದರು.
ಮಂಗಳವಾರ ಸಂಜೆ ಪೊಲೀಸರು ಪುಣೆಯ ವಿಶ್ರಾಂತ್‌ವಾಡಿಯಲ್ಲಿರುವ ಎರಡು ಉಗ್ರಾಣಗಳ ಮೇಲೆ ದಾಳಿ ನಡೆಸಿ, ಸುಮಾರು 55 ಕೆಜಿ ಮೆಫೆಡ್ರೋನ್‌ಅನ್ನು ವಶಪಡಿಸಿಕೊಂಡಿದ್ದರು. ಇದೇ ವೇಳೆ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಬೃಹತ್ ಡ್ರಗ್ಸ್ ಜಾಲ ಇರುವುದು ಪತ್ತೆಯಾಗಿದೆ. ಕೂಡಲೇ ಅಲರ್ಟ್ ಆದ ಪೊಲೀಸರು ದೆಹಲಿ ಹಾಗೂ ಪುಣೆಯ ಹಲವೆಡೆ ತೀವ್ರವಾಗಿ ಶೋಧ ನಡೆಸುವ ಮೂಲಕ ಒಟ್ಟು 2,500 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇದು ದೇಶದಲ್ಲೇ ಅಧಿಕಾರಿಗಳು ವಶಪಡಿಸಿಕೊಂಡ ಬೃಹತ್ ಮೊತ್ತದ ಡ್ರಗ್ಸ್ ಪ್ರಕರಣಗಳಲ್ಲಿ ಒಂದಾಗಿದೆ ಎಂದು ತಿಳಿದುಬಂದಿದೆ.