ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

26 ವರ್ಷದ ಯುವಕನ ಹೊಟ್ಟೆಯಿಂದ ವೋಡ್ಕಾ ಬಾಟಲ್ ಹೊರ ತೆಗೆದ ವೈದ್ಯರು, 1 ಬಂಧನ!

Twitter
Facebook
LinkedIn
WhatsApp

ಕಾಠ್ಮಂಡು: ವಿಪರೀತ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬನ ಹೊಟ್ಟೆಯಿಂದ ವೋಡ್ಕಾ ಬಾಟಲಿಯನ್ನು ವೈದ್ಯರು ಶಸ್ತ್ರಚಿಕಿತ್ಸೆ ಮುಖಾಂತರ ಹೊರ ತೆಗೆದ ಘಟನೆ ನೇಪಾಳದಲ್ಲಿ ನಡೆದಿದೆ. 

ಮದ್ಯಪಾನಿಯಾಗಿದ್ದ ರೌತಾಹರಿ ಜಿಲ್ಲೆಯ ನುರ್ಸಾದ್‌ ಮನ್ಸೂರಿ ಎಂಬಾತ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೀಗಾಗಿ ಈತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ನಡೆಸಿದಾಗ ವಿಚಿತ್ರ ವಸ್ತುವೊಂದು ಆತನ ಹೊಟ್ಟೆ ಸೇರಿರುವುದು ಗೊತ್ತಾಗಿದೆ.

ಹೀಗಾಗಿ ಆತನನ್ನು ಶಸ್ತ್ರಚಿಕಿತ್ಸೆಗೊಳಪಡಿಸಲಾಯಿತು. ಈ ವೇಳೆ ಆತನ ಹೊಟ್ಟೆಯಲ್ಲಿ ವೋಡ್ಕಾ ಬಾಟಲಿ ನೋಡಿ ವೈದ್ಯರೇ ಅಚ್ಚರಿಗೊಂಡಿದ್ದಾರೆ.

ನಂತರ ಬಾಟಲಿಯನ್ನು ವೈದ್ಯರು ಸುರಕ್ಷಿತವಾಗಿ ಹೊರ ತೆಗೆದಿದ್ದು, ಸದ್ಯ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗುದನಾಳದ ಮೂಲಕ ಬಾಟಲಿಯನ್ನು ಬಲವಂತವಾಗಿ ಹೊಟ್ಟೆಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ರೌತಾಹತ್ ಪೊಲೀಸರು ಶೇಖ್ ಸಮೀಮ್ ಎಂಬಾತನನ್ನು ಬಂಧಿಸಿದ್ದಾರೆ ಮತ್ತು ನೂರ್ಸಾದ್ ಅವರ ಕೆಲವು ಸ್ನೇಹಿತರನ್ನು ವಿಚಾರಣೆ ನಡೆಸಿದ್ದಾರೆ.

“ನಾವು ಸಮೀಮ್‌ನನ್ನು ಅನುಮಾನಿಸುತ್ತಿದ್ದಂತೆ, ನಾವು ಅವನನ್ನು ಕಸ್ಟಡಿಯಲ್ಲಿ ಇರಿಸಿದ್ದೇವೆ ಮತ್ತು ತನಿಖೆ ನಡೆಸುತ್ತಿದ್ದೇವೆ” ಎಂದು ಚಂದ್ರಾಪುರದ ಏರಿಯಾ ಪೊಲೀಸ್ ಕಚೇರಿ ತಿಳಿಸಿದೆ. “ನೂರ್ಸಾದ್‌ನ ಇತರ ಕೆಲವು ಸ್ನೇಹಿತರು ತಲೆಮರೆಸಿಕೊಂಡಿದ್ದಾರೆ ಮತ್ತು ನಾವು ಅವರನ್ನು ಹುಡುಕುತ್ತಿದ್ದೇವೆ” ಎಂದು ರೌತಹತ್‌ನ ಪೊಲೀಸ್ ವರಿಷ್ಠಾಧಿಕಾರಿ ಬೀರ್ ಬಹದ್ದೂರ್ ಬುಧಾ ಮಗರ್ ಹೇಳಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ