ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

27 ಸಾವಿರ ವಿವೋ ಫೋನ್‌ಗಳ ರಫ್ತು ತಡೆ ಹಿಡಿದ ಭಾರತ

Twitter
Facebook
LinkedIn
WhatsApp
27 ಸಾವಿರ ವಿವೋ ಫೋನ್‌ಗಳ ರಫ್ತು ತಡೆ ಹಿಡಿದ ಭಾರತ

ನವದೆಹಲಿ: ವಿದೇಶಕ್ಕೆ ರಫ್ತು ಆಗಬೇಕಿದ್ದ ಚೀನಾದ ವಿವೋ(Vivo) ಕಂಪನಿಯ 27 ಸಾವಿರ ಫೋನ್‌ಗಳನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ(Delhi Airport) ಕಂದಾಯ ಗುಪ್ತಚರ ವಿಭಾಗ(Revenue Intelligence Unit) ತಡೆ ಹಿಡಿದಿದೆ.

ಡಿವೈಸ್‌ ಮಾದರಿಗಳು ಮತ್ತು ಅವುಗಳ ಮೌಲ್ಯವನ್ನು ತಪ್ಪಾಗಿ ಘೋಷಿಸಿದ ಆರೋಪದ ಹಿನ್ನೆಲೆಯಲ್ಲಿ ಡಿ.2 ರಿಂದ ಸುಮಾರು ಒಟ್ಟು 15 ದಶಲಕ್ಷ ಡಾಲರ್‌(123.73 ಕೋಟಿ ರೂ.)ಮೌಲ್ಯದ ಸರಕನ್ನು ತಡೆಹಿಡಿಯಲಾಗಿದೆ ಎಂದು ವರದಿಯಾಗಿದೆ.

ತಡೆ ಹಿಡಿದ ಪ್ರಕರಣದ ಬಗ್ಗೆ ಹಣಕಾಸು ಸಚಿವಾಲಯ ಮತ್ತು ವಿವೋ ಕಂಪನಿ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. 

ವಿವೋ ಕಮ್ಯುನಿಕೇಷನ್ಸ್ ಟೆಕ್ನಾಲಜಿ ಕಂಪನಿ ಭಾರತ ಘಟಕದಿಂದ ಈ ಫೋನ್‌ಗಳನ್ನು ತಯಾರಿಸಲಾಗಿದೆ. ವಿವೋ ಮೊದಲ ಬಾರಿಗೆ ಭಾರತ-ನಿರ್ಮಿತ ಸ್ಮಾರ್ಟ್‌ಫೋನ್‌ಗಳನ್ನು ನವೆಂಬರ್ ಆರಂಭದಲ್ಲಿ ಸೌದಿ ಅರೇಬಿಯಾ ಮತ್ತು ಥೈಲ್ಯಾಂಡ್‌ ಮಾರುಕಟ್ಟೆಗಳಿಗೆ ರಫ್ತು ಮಾಡಿತ್ತು.

ವಿವೋ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

ಗಲ್ವಾನ್‌ ಕಣಿವೆಯಲ್ಲಿ ಘರ್ಷಣೆ ನಡೆದ ಬಳಿಕ ಚೀನಾ ಕಂಪನಿಗಳ ಮೇಲೆ ಕೇಂದ್ರ ಹದ್ದಿನ ಕಣ್ಣಿಟ್ಟಿದೆ. ಸರ್ಕಾರ ಚೀನಿ ಆಪ್‌ಗಳನ್ನು ನಿಷೇಧಗೊಂಡ ಬಳಿಕ ಚೀನಿ ಕಂಪನಿಗಳ ಮೇಲೆ ಆದಾಯ ತೆರಿಗೆ, ಇಡಿ ದಾಳಿ ಮಾಡಿ ಅಕ್ರಮ ಪತ್ತೆ ಹಚ್ಚಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ