ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

3ನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ – ಆಸ್ಟ್ರೇಲಿಯಾಗೆ 9 ವಿಕೆಟ್‌ಗಳ ಭರ್ಜರಿ ಜಯ

Twitter
Facebook
LinkedIn
WhatsApp
full 2

ಇಂದೋರ್: ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ (Travis Head) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ (Australia), ಟೀಂ ಇಂಡಿಯಾ (Team India) ವಿರುದ್ಧ 3ನೇ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 4 ಪಂದ್ಯಗಳ ಬಾರ್ಡರ್ ಗಾವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಮೊದಲ ಜಯ ಸಾಧಿಸಿದೆ.

IND vs AUS 3rd Test Day 2 Highlights: India skittled out for 163, Australia  need 76 to win | Sports News,The Indian Express

2ನೇ ದಿನದಾಟದ ಅಂತ್ಯಕ್ಕೆ 60.3 ಓವರ್‌ಗಳಲ್ಲಿ 163 ರನ್‌ಗಳಿಸಿದ್ದ ಭಾರತ 2ನೇ ಇನ್ನಿಂಗ್ಸ್‌ನಲ್ಲೂ ಒಂದೇ ದಿನಕ್ಕೆ ಸರ್ವಪತನ ಕಂಡಿತ್ತು. ಈ ಮೂಲಕ ಹೆಚ್ಚುವರಿ 75 ರನ್ ಗಳಿಸಿ ಆಸ್ಟ್ರೇಲಿಯಾಗೆ ಕೇವಲ 76 ರನ್‌ಗಳ ಗುರಿ ನೀಡಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 18.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 78 ರನ್ ಗಳಿಸುವ ಮೂಲಕ ಸುಲಭ ಜಯ ಸಾಧಿಸಿತು.

ಆರಂಭಿಕರಾದ ಉಸ್ಮಾನ್ ಖವಾಜ ಆರಂಭದಲ್ಲಿ ಅಶ್ವಿನ್ ಸ್ಪಿನ್ ದಾಳಿಗೆ ತುತ್ತಾದರು. ಮತ್ತೊಬ್ಬ ಆರಂಭಿಕನಾಗಿದ್ದ ಟ್ರಾವಿಸ್ ಹೆಡ್ ಏಕದಿನ ಶೈಲಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆದರು. 53 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್‌ನೊಂದಿಗೆ 49 ರನ್ ಚಚ್ಚಿದರು. ಇದರೊಂದಿಗೆ ಸಾಥ್ ನೀಡಿದ ಮಾರ್ನಸ್ ಲಾಬುಶೇನ್ 58 ಎಸೆತಗಳಲ್ಲಿ 28 ರನ್ ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ಆಸ್ಟ್ರೇಲಿಯಾ 18.5 ಓವರ್‌ಗಳಲ್ಲಿ 78 ರನ್‌ಗಳಿಸಿ ಜಯ ಸಾಧಿಸಿತು.

India vs Australia 2023: Squads, Schedule, Venue, Where to Watch – All you  need to know

ಟೀಂ ಇಂಡಿಯಾ ಪರ ಅಶ್ವಿನ್ (Ravichandran Ashwin) 1 ವಿಕೆಟ್ ಪಡೆದರು. 

ಮೂರೇ ದಿನಕ್ಕೆ 31 ವಿಕೆಟ್ ಪತನ: ಇಂದೋರ್ ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಎರಡೂ ತಂಡಗಳಿಂದ ಮೂರೇ ದಿನಗಳಲ್ಲಿ 31 ವಿಕೆಟ್ ಪತನಗೊಂಡಿತು. ಮೊದಲ ದಿನ 14 ವಿಕೆಟ್, 2ನೇ ದಿನ 16 ವಿಕೆಟ್ ಹಾಗೂ 3ನೇ ದಿನ 1 ವಿಕೆಟ್ ಪತನಗೊಂಡಿತು.

ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಭಾರತ ಸರಣಿ ಗೆಲ್ಲುವ ತವಕದಲ್ಲಿತ್ತು. ಭಾರತದ ಸರಣಿ ಗೆಲುವಿನ ಕನಸಿಗೆ ಕಾಂಗರೂ ಪಡೆ ತಣ್ಣೀರು ಎರಚಿದೆ. ಇದರಿಂದ ಮಾರ್ಚ್‌ 9 ರಿಂದ 13ರ ವರೆಗೆ ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್‌ ಪಂದ್ಯ ನಿರ್ಣಾಯಕವಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.

 

ಸಂಕ್ಷಿಪ್ತ ಸ್ಕೋರ್:
ಭಾರತ ಮೊದಲ ಇನ್ನಿಂಗ್ಸ್ 109/10
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 197/10
ಭಾರತ ಎರಡನೇ ಇನ್ನಿಂಗ್ಸ್ 163/10
ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ 78/1

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ