ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊತ್ತಿ ಉರಿದ 30 ಖಾಸಗಿ ಬಸ್​ಗಳು; ಬೆಂಗಳೂರಲ್ಲಿ ಇನ್ನೊಂದು ಅಗ್ನಿ ಅವಘಡ!

Twitter
Facebook
LinkedIn
WhatsApp
ಹೊತ್ತಿ ಉರಿದ 30 ಖಾಸಗಿ ಬಸ್​ಗಳು; ಬೆಂಗಳೂರಲ್ಲಿ ಇನ್ನೊಂದು ಅಗ್ನಿ ಅವಘಡ!

ಬೆಂಗಳೂರು, (ಅಕ್ಟೋಬರ್ 30): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಮತ್ತೊಂದು ಅಗ್ನಿ(Fire) ಅವಘಡ ಸಂಭವಿಸಿದೆ. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ದುರಂತ ಮಾಸುವ ಮುನ್ನವೇ ಬೆಂಗಳೂರಿನ ವೀರಭದ್ರ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಹಲವು ಖಾಸಗಿ ಬಸ್​ಗಳು ಹೊತ್ತಿ ಉರಿದಿದ್ದು, ಸ್ಥಳಕ್ಕೆ ಎರಡು ಅಗ್ನಿ ಶಾಮದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರನಗರದ ಪಾರ್ಕಿಂಗ್ ಲಾಟ್​ನಲ್ಲಿ ನಿಲ್ಲಿಸಿದ್ದ 30 ಬಸ್​ಗಳು ಬೆಂಕಿಗೆ ಆಹುತಿಯಾಗಿವೆ. ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ದು, ವೀರಭದ್ರನಗರದ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ಇನ್ನು ಘಟನ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಹಾಗೇ ಡಿಸಿಪಿ ರಾಹುಲ್ ಕುಮಾರ್ ಶಹಾಪುರವಾಡ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಶ್ರೀನಿವಾಸ್ ಎಂಬುವವರಿಗೆ ಕೋಚ್ ವರ್ಕ್ಸ್ ಸೇರಿದ್ದು, 15 ವರ್ಷದಿಂದ ಕೋಚ್ ವರ್ಕ್ ಕೆಲಸಗಳು ನಡೆಯುತ್ತಿವೆ. ಇಂದು 11.30ರ ಸುಮಾರಿಗೆ ಬಸ್ ವೊಂದರ ಎಮರ್ಜನ್ಸಿ ಎಕ್ಸಿಟ್ ಬಳಿ ಕೆಲಸ ನಡೆಯುತಿತ್ತು. ಈ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿಗಳಿಗೆ ಕೂಡಲೆ ಮಾಹಿತಿ ನೀಡಲಾಗಿತ್ತು. ಆದ್ರೆ ಸಿಬ್ಬಂದಿಗಳ ಬರುವಷ್ಟರಲ್ಲಿ ಎರಡು ವಾಹನಗಳಿಗೆ ಬೆಂಕಿ ತಗುಲಿತ್ತು. ಮೊದಲಿಗೆ ಒಂದೇ ವಾಹನ ಬಂದ ಹಿನ್ನಲೆಯಲ್ಲಿ ಬೆಂಕಿ ಕಂಟ್ರೊಲ್​​ಗೆ ಸಿಕ್ಕಿಲ್ಲ. ಇನ್ನು ಎಸಿ ಬಸ್ ಗಳಲ್ಲಿ ಸೀಟ್, ಸ್ಕೀನ್ ಗಳು ಇರುವುದರಿಂದ ಬೆಂಕಿ ಹೆಚ್ಚಾಗಿದೆ.

ಇದೀಗ ಬಂದ ಮಾಹಿತಿ ಪ್ರಕಾರ ಅಗ್ನಿ ಅವಘಡದಲ್ಲಿ ಈ ವರೆಗೆ 30 ಬಸ್​ಗಳು ಸುಟ್ಟು ಸಂಪೂರ್ಣ ಭಸ್ಮವಾಗಿದ್ದು, 5 ಬಸ್ ಗಳನ್ನು ಹೊರಗೆ ತೆಗೆಯಲಾಗಿದೆ. ಇನ್ನು ಗ್ಯಾರೇಜ್ ನಲ್ಲಿ 42 ಜನ ಕೆಲಸ ಮಾಡುತಿದ್ದರು. ಅದೃಷ್ಟವಶಾತ್ ಯಾರಿಗೂ ಏನು ಆಗಿಲ್ಲ.

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ, ಒಬ್ಬೊಬ್ಬರೇ ಓಡಾಡದಂತೆ K.R.ಪುರಂ ಅರಣ್ಯಾಧಿಕಾರಿಗಳಿಂದ ಅನೌನ್ಸ್​

ಬೆಂಗಳೂರು, ಅ.30: ಸಿಲಿಕಾನ್​​ ಸಿಟಿ ಬೆಂಗಳೂರಿನಲ್ಲಿ (Bengaluru) ಚಿರತೆ (Leopard) ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ನಿನ್ನೆ ಚಿರತೆ ಪ್ರತ್ಯಕ್ಷವಾಗಿದ್ದು ಬೊಮ್ಮನಹಳ್ಳಿ HSR ಲೇಔಟ್ BTM ಲೇಔಟ್ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಜನರು ಒಬ್ಬೊಬ್ಬರೇ ಓಡಾಡದಂತೆ ಅರಣ್ಯ ಇಲಾಖೆ ಸೂಚನೆ‌ ನೀಡಿದೆ. ರಾತ್ರಿ ವೇಳೆ ಒಬ್ಬೊಬ್ಬರೇ ಓಡಾಡಬೇಡಿ ಅನಿವಾರ್ಯವಿದ್ದಲ್ಲಿ ಕಾರಿನಲ್ಲಿ ಓಡಾಡಿ ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ. K.R.ಪುರಂ ಅರಣ್ಯಾಧಿಕಾರಿಗಳು ಚಿರತೆಗಾಗಿ ಸಿಂಗಸಂದ್ರ ಲೇಔಟ್​​ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ದಾಮೊದರ್ ರೆಡ್ಡಿ ಎಂಬುವವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು, ಬೀದಿ ನಾಯಿಗಳು ಚಿರತೆಯನ್ನು ನೋಡಿ ಅದನ್ನು ಓಡಿಸಿಕೊಂಡು ಹೋಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಚಿರತೆ ನೋಡಿದ ನಿವಾಸಿಗಳು ಆತಂಕದಲ್ಲೇ ಮನೆಯಲ್ಲಿ ಅಡಗಿ ಕೂರುವಂತಾಗಿದೆ. ಇದೀಗ ನಿದ್ದೆಗೆಡಿಸಿದ ಚಿರತೆ ಸೆರೆಗಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

ಗಾಬರಿಪಡುವ ಅಗತ್ಯವಿಲ್ಲ, ನಾವು ಶನಿವಾರ ರಾತ್ರಿ ತಂಡವನ್ನು ಕಳುಹಿಸಿದ್ದೇವೆ ಮತ್ತು ಇಂದು ಕೆಲವು ಸಿಬ್ಬಂದಿಯನ್ನು ಕಳುಹಿಸಿ ಚಿರತೆ ಹುಡುಕಿಸಲಾಗುತ್ತಿದೆ. ಚಿರತೆಯ ಸುಳಿವು ಸಿಕ್ಕಿಲ್ಲ. ನಾವು ಚಿರತೆ ತಲಾಶ್ ಮುಂದುವರೆಸುತ್ತಿದ್ದೇವೆ ಮತ್ತು ಅಲ್ಲಿನ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದ್ದೇವೆ ಎಂದು ಬೆಂಗಳೂರು ನಗರ ಅರಣ್ಯ ಉಪ ಸಂರಕ್ಷಣಾಧಿಕಾರಿ ಎನ್ ರವೀಂದ್ರ ಕುಮಾರ್ ತಿಳಿಸಿದರು.

ಪರಪ್ಪನ ಅಗ್ರಹಾರ ಪೊಲೀಸರು ಕೂಡ ಚಿರತೆ ಕಾಣಿಸಿಕೊಂಡಿರುವುದನ್ನು ಖಚಿತಪಡಿಸಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿರತೆ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ಕಳೆದ ವರ್ಷವೂ ಹೊರವಲಯದಲ್ಲಿ ಚಿರತೆ ಓಡಾಡಿದ ಅನೇಕ ದೃಶ್ಯಗಳು ಕಂಡುಬಂದಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ