ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

300 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದ ಮಗು

Twitter
Facebook
LinkedIn
WhatsApp
1 9

300 ಅಡಿ ಆಳದ ತೆರೆದ ಕೊಳವೆ ಬಾವಿಗೆ 2 ವರ್ಷದ ಮಗು ಬಿದ್ದಿರುವ ಘಟನೆ ಮಧ್ಯಪ್ರದೇಶದ ಸೆಹೋರ್​ ಜಿಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೊರೆದಿದ್ದ 300 ಅಡಿ ಆಳದ ಕೊಳವೆ ಬಾವಿಗೆ ಮಗು ಬಿದ್ದಿದೆ. ಸದ್ಯ 20 ಅಡಿ ಆಳದಲ್ಲಿ ಮಗು ಸಿಲುಕಿದೆ, ರಕ್ಷಣಾ ಕಾರ್ಯ ಮುಂದುವರೆದಿದೆ.

 

ಆಕೆಯನ್ನು ಸುರಕ್ಷಿತವಾಗಿ ಹೊರತರಲು ಜೆಸಿಬಿ ಹಾಗೂ ಪೊಕ್ಲಾನ್ ಯಂತ್ರದ ಸಹಾಯದಿಂದ ಅಗೆಯಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೂಚನೆ ನೀಡಿದ್ದಾರೆ. ಮನೆಯ ಸಮೀಪವಿರುವ ಹೊಲದಲ್ಲಿ ಆಟವಾಡುತ್ತಿದ್ದಾಗ ಬೋರ್‌ವೆಲ್‌ನ ತೆರೆದ ಗುಂಡಿಗೆ ಬಿದ್ದಿದ್ದಾಳೆ.

ಸ್ಥಳದಲ್ಲಿಯೇ ಆಡಳಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಜೆಸಿಬಿ ಹಾಗೂ ಪೊಕ್ಲೆನ್ ಯಂತ್ರದ ಸಹಾಯದಿಂದ ಬಾಲಕಿಯನ್ನು ಸುರಕ್ಷಿತವಾಗಿ ಹೊರತರಲು ಸಮಾನಾಂತರ ಹೊಂಡಗಳನ್ನು ತೋಡಿ, ಬಾಲಕಿಯ ಚಲನವಲನಗಳ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾಗಳ ಸಹಾಯವನ್ನು ತೆಗೆದುಕೊಂಡು ಆಮ್ಲಜನಕವನ್ನು ಸಹ ಸರಬರಾಜು ಮಾಡಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ