ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!

Twitter
Facebook
LinkedIn
WhatsApp
4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!

T20 World Cup 2024: ಟಿ20 ವಿಶ್ವಕಪ್​ನ 39ನೇ ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಲಾಕಿ ಫರ್ಗುಸನ್ (Lockie Ferguson) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಅಂತಿಂಥ ವಿಶ್ವ ದಾಖಲೆಯಲ್ಲ ಎಂಬುದು ವಿಶೇಷ. ಹಾಗಿದ್ರೆ ಕಿವೀಸ್ ವೇಗಿ ನಿರ್ಮಿಸಿದ ಹೊಸ ವರ್ಲ್ಡ್ ರೆಕಾರ್ಡ್​ನ ವಿಶೇಷತೆ ಏನೆಂದು ತಿಳಿಯೋಣ…

ಟ್ರಿನಿಡಾಡ್​ನ ಬ್ರಿಯಾನ್​ ಲಾರಾ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಈ​ ಪಂದ್ಯದಲ್ಲಿ ನ್ಯೂಝಿಲೆಂಡ್ ಹಾಗೂ ಪಪುವಾ ನ್ಯೂ ಗಿನಿಯಾ ತಂಡಗಳೂ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಪುವಾ ನ್ಯೂ ಗಿನಿಯಾ ತಂಡವು 19.4 ಓವರ್​ಗಳಲ್ಲಿ 78 ರನ್​ಗಳಿಸಿ ಆಲೌಟ್ ಆಗಿದೆ.

ಹೀಗೆ ಪಪುವಾ ನ್ಯೂ ಗಿನಿಯಾ ತಂಡವು ಅಲ್ಪ ಮೊತ್ತಕ್ಕೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದು ನ್ಯೂಝಿಲೆಂಡ್ ವೇಗಿ ಲಾಕಿ ಫರ್ಗುಸನ್. ಏಕೆಂದರೆ ಈ ಪಂದ್ಯದಲ್ಲಿ ಫರ್ಗುಸನ್ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಇದರಲ್ಲೇನು ವಿಶೇಷ ಎಂದರೆ….

ಲಾಕಿ ಫರ್ಗುಸನ್ ಒಂದೇ ಒಂದು ರನ್ ನೀಡದೇ 3 ವಿಕೆಟ್ ಕಬಳಿಸಿರುವುದು. ಅಂದರೆ 4 ಓವರ್​ಗಳನ್ನು ಎಸೆದಿದ್ದ ಫರ್ಗುಸನ್ ಯಾವುದೇ ರನ್ ನೀಡದೇ 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ 4 ಓವರ್​ಗಳಲ್ಲಿ ಒಂದೇ ಒಂದು ರನ್ ನೀಡದ ಮೊದಲ ಬೌಲರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲಿ 4 ಓವರ್​ಗಳಲ್ಲಿ 0 ರನ್​ಗೆ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನೂ ಸಹ ಲಾಕಿ ಫರ್ಗುಸನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಾದ್ ಬಿನ್ ಝಫರ್ ಹೆಸರಿನಲ್ಲಿತ್ತು.

2021 ರಲ್ಲಿ ಪನಾಮ ವಿರುದ್ಧದ ಪಂದ್ಯದಲ್ಲಿ ಕೆನಡಾ ಬೌಲರ್ ಸಾದ್ ಬಿನ್ ಝಫರ್ 4 ಓವರ್​ಗಳಲ್ಲಿ ಯಾವುದೇ ರನ್ ನೀಡದೇ 2 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ನ್ಯೂಝಿಲೆಂಡ್ ತಂಡ ಬಲಗೈ ವೇಗಿ ಮುರಿದಿದ್ದಾರೆ.

ಪಪುವಾ ನ್ಯೂ ಗಿನಿಯಾ ವಿರುದ್ಧದ ಪಂದ್ಯದಲ್ಲಿ 4 ಮೇಡನ್ ಓವರ್​ಗಳನ್ನು ಎಸೆದಿರುವ ಲಾಕಿ ಫರ್ಗಸನ್ 0 ರನ್​ಗೆ 3 ವಿಕೆಟ್ ಕಬಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಶೂನ್ಯ ರನ್​ಗೆ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ