ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

4 ಸ್ನಾತಕೋತ್ತರ ಪದವಿ, ಮತ್ತು ಪಿಎಚ್‌ಡಿ ಪಡೆದು ʼಪಿಎಚ್‌ಡಿ ಸಬ್ಜಿ ವಾಲಾʼ ಎಂದು ಬೋರ್ಡ್ ಹಾಕಿ ತರಕಾರಿ ಮಾರಾಟ ಮಾಡುವ ವ್ಯಕ್ತಿ..!

Twitter
Facebook
LinkedIn
WhatsApp
4 ಸ್ನಾತಕೋತ್ತರ ಪದವಿ, ಮತ್ತು ಪಿಎಚ್‌ಡಿ ಪಡೆದು ʼಪಿಎಚ್‌ಡಿ ಸಬ್ಜಿ ವಾಲಾʼ ಎಂದು ಬೋರ್ಡ್ ಹಾಕಿ ತರಕಾರಿ ಮಾರಾಟ ಮಾಡುವ ವ್ಯಕ್ತಿ..!

ಚಂಡೀಗಢ: ಯಾವ ಕೆಲಸವೂ ಕೀಳಲ್ಲ; ಪ್ರತಿಯೊಂದಕ್ಕೂ ಅದರದ್ದೇ ಆದ ಮಹತ್ವವಿದೆ ಎನ್ನುವ ಮಾತನ್ನು ಅಕ್ಷರಶಃ ಸಾಬೀತು ಪಡಿಸಿದ್ದಾರೆ ಈ ವ್ಯಕ್ತಿ. ನಾಲ್ಕು ಸ್ನಾತಕೋತ್ತರ ಪದವಿ ಮತ್ತು ಪಿಎಚ್‌ಡಿ ಹೊಂದಿರುವ ಪಂಜಾಬ್‌ನ ವ್ಯಕ್ತಿಯೊಬ್ಬರು ಜೀವನೋಪಾಯಕ್ಕಾಗಿ ತರಕಾರಿಗಳನ್ನು ಮಾರಾಟ ಮಾಡುತ್ತಿದ್ದಾರೆ. 39 ವರ್ಷದ ಡಾ. ಸಂದೀಪ್ ಸಿಂಗ್ (Dr. Sandeep Singh) ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಲ್ಲಿ (Punjabi University in Patiala) ಗುತ್ತಿಗೆ ಪ್ರಾಧ್ಯಾಪಕರಾಗಿದ್ದರು. ಆದರೆ ಕೆಲವು ಅನಿವಾರ್ಯ ಅವರು ಆ ಉದ್ಯೋಗ ತೊರೆಯ ಬೇಕಾಯಿತು. ಸದ್ಯ ಅವರು ಜೀವನೋಪಾಯಕ್ಕಾಗಿ ತರಕಾರಿ ಮಾರಾಟ ಮಾಡುತ್ತಿದ್ದಾರೆ. ಸದ್ಯ ಈ ವಿಚಾರ ವೈರಲ್‌ ಆಗಿದೆ (Viral News).

 

ಡಾ. ಸಂದೀಪ್ ಸಿಂಗ್ ಸುಮಾರು 11 ವರ್ಷಗಳ ಕಾಲ ಅತಿಥಿ ಪ್ರಾಧ್ಯಾಪಕರಾಗಿದ್ದರು. ಪಂಜಾಬ್ ವಿಶ್ವವಿದ್ಯಾಲಯದ ಕಾನೂನು ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದರು. ಕಾನೂನು ವಿಷಯದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಜತೆಗೆ ಪಂಜಾಬಿ, ಪತ್ರಿಕೋದ್ಯಮ, ರಾಜಕೀಯ ಹಾಗೂ ವಿಜ್ಞಾನ ಸೇರಿದಂತೆ ನಾಲ್ಕು ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ವಿಶೇಷ ಎಂದರೆ ಅವರು ಈಗಲೂ ತಮ್ಮ ಬಿಡುವಿನ ವೇಳೆಯನ್ನು ಅಧ್ಯಯನಕ್ಕೆ ಮೀಸಲಿಡುತ್ತಿದ್ದಾರೆ.

 

ಕೆಲವು ಸಮಯಗಳ ಹಿಂದೆ ಸಂಬಳ ಕಡಿತ ಮತ್ತು ಅನಿಯಮಿತ ವೇತನದಂತಹ ಸಂಕಷ್ಟಗಳು ಎದುರಾಗಿದ್ದರಿಂದ ಅವರು ತಮ್ಮ ಅಧ್ಯಾಪನ ಉದ್ಯೋಗವನ್ನು ತೊರೆದಿದ್ದರು. ಈ ಬಗ್ಗೆ ಮಾತನಾಡುವ ಡಾ. ಸಂದೀಪ್ ಸಿಂಗ್, ʼʼಸಮಯಕ್ಕೆ ಸರಿಯಾಗಿ ಸಂಬಳ ಸಿಗುತ್ತಿರಲಿಲ್ಲ. ಅಲ್ಲದೆ ಇದ್ದ ಸಂಬಳದಿಂದಲೂ ಕಡಿತ ಮಾಡಲಾಗುತ್ತಿತ್ತು. ಹೀಗಾಗಿ ಜೀವನ ನಡೆಸುವುದು ಕಷ್ಟವಾಯಿತು. ಅದೇ ಕಾರಣಕ್ಕಾಗಿ ಕುಟುಂಬದ ಪೋಷಣೆಗೆ ತರಕಾರಿ ಮಾರಾಟ ಮಾಡಲು ಆರಂಭಿಸಿದೆʼʼ ಎಂದು ವಿವರಿಸಿದ್ದಾರೆ.

 

ಗಾಡಿಯಲ್ಲಿ ತರಕಾರಿ ತುಂಬಿಕೊಂಡು ಡಾ. ಸಂದೀಪ್ ಸಿಂಗ್ ಮನೆ ಮನೆಗೆ ತೆರಳಿ ಮಾರಾಟ ಮಾಡುತ್ತಾರೆ. ಅವರು ತರಕಾರಿ ಗಾಡಿಯಲ್ಲಿ ʼಪಿಎಚ್‌ಡಿ ಸಬ್ಜಿ ವಾಲಾʼ ಎನ್ನುವ ಬೋರ್ಡ್‌ ಅಳವಡಿಸಿದ್ದು, ಸದ್ಯ ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ʼʼಪ್ರತಿದಿನ ತರಕಾರಿ ಮಾರಲು ಮನೆ ಮನೆಗೆ ತೆರಳುತ್ತೇನೆ. ಪ್ರೊಫೆಸರ್ ಆಗಿದ್ದಕ್ಕಿಂತ ತರಕಾರಿ ಮಾರಾಟ ಮಾಡಿ ಹೆಚ್ಚು ಹಣ ಗಳಿಸುತ್ತಿದ್ದೇನೆʼʼ ಎಂದು ಅವರು ಹೆಮ್ಮೆಯಿಂದ ಹೇಳುತ್ತಾರೆ. ತರಕಾರಿ ಮಾರಾಟ ಮಾಡಿ ಮನೆಗೆ ಹಿಂದಿರುಗುವ ಅವರು, ಸ್ಪರ್ಧಾತ್ಮಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಾರೆ.

ಕಷ್ಟಪಟ್ಟು ಓದಿ, ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಿ ಬೋಧಕರಾಗಿದ್ದ ಡಾ. ಸಂದೀಪ್ ಸಿಂಗ್ ಈಗ ಅನಿವಾರ್ಯ ಕಾರಣದಿಂದ ತರಕಾರಿ ಮಾರಾಟ ಮಾಡುತ್ತಿದ್ದರೂ ಆ ಬಗ್ಗೆ ಅವರಿಗೆ ಸ್ವಲ್ಪವೂ ಬೇಸರ ಇಲ್ಲ. ಅಲ್ಲದೆ ಇದು ಅವರ ಉತ್ಸಾಹವನ್ನು ಒಂದಿನಿತೂ ಕುಗ್ಗಿಸಿಲ್ಲ. ಹಣ ಗಳಿಸಿ ಮುಂದೊಂದು ದಿನ ಸ್ವಂತ ಟ್ಯೂಷನ್ ಸೆಂಟರ್ ತೆರೆಯುವ ಗುರಿ ಹೊಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist