ಚಿಕ್ಕಬಳ್ಳಾಪುರ: ನಿವೇಶನ ಖಾತೆ ಮಾಡಿಕೊಡಲು 40 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಲಂಚ ಪಡೆಯುವಾಗ ಗೌರಿಬಿದನೂರು ನಗರಸಭೆ ಅಧ್ಯಕ್ಷೆಯ ಪತಿ ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗೌರಿಬಿದನೂರು ನಗರಸಭೆ ಅಧ್ಯಕ್ಷೆ ರೂಪಾ ಅವರ ಪತಿ ಅನಂತರಾಜು, ನಗರಸಭಾ ಸದಸ್ಯ ಗೋಪಿನಾಥ್, ನಗರಸಭೆ ಸದಸ್ಯೆಯ ಪತಿ ಮಂಜುನಾಥ್ ಹಾಗೂ ಮಾಜಿ ನಗರಸಭಾ ಸದಸ್ಯ ಮೈಲಾರಿ ಸೇರಿದಂತೆ ನಾಲ್ವರು ಲೋಕಾಯುಕ್ತ ಪೊಲೀಸರ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ.
ರಿಯಲ್ ಎಸ್ಟೇಟ್ (Real Estate) ಬಿಲ್ಡರ್ ಬಡಾವಣೆ ಮಾಲೀಕ ಮಂಜುನಾಥರೆಡ್ಡಿ ಅವರ ಬಳಿ 133 ನಿವೇಶನಗಳಿಗೆ ಖಾತೆ ಮಾಡಿಕೊಡುವ ಸಲುವಾಗಿ 40 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.
ಈ ಆರೋಪದ ಮೇರೆಗೆ ಬೆಂಗಳೂರು ಉತ್ತರ ತಾಲೂಕು ರಾಜನಕುಂಟೆ ಬಳಿಯ ಸಿಲ್ವರ್ ಒಕ್ ರೆಸಾರ್ಟ್ ನಲ್ಲಿ ಮಂಜುನಾಥ್ ರೆಡ್ಡಿಯಿಂದ 20 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ಮಾಡಿ ನಾಲ್ವರನ್ನ ವಶಕ್ಕೆ ಪಡೆದಿರುವ ಲೋಕಾಯುಕ್ತರು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist