ಮಂಗಳವಾರ, ಮೇ 21, 2024
2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

40 ವರ್ಷ ರಾಜ್ಯವಾಳಿದ ಕಾಂಗ್ರೆಸ್ ಯಾಕೆ ಮೇಕೆದಾಟು ಯೋಜನೆ ಜಾರಿಗೊಳಿಸಲಿಲ್ಲ?- ಸಿ.ಟಿ.ರವಿ

Twitter
Facebook
LinkedIn
WhatsApp
40 ವರ್ಷ ರಾಜ್ಯವಾಳಿದ ಕಾಂಗ್ರೆಸ್ ಯಾಕೆ ಮೇಕೆದಾಟು ಯೋಜನೆ ಜಾರಿಗೊಳಿಸಲಿಲ್ಲ?- ಸಿ.ಟಿ.ರವಿ

ಬೆಂಗಳೂರು: 40 ವರ್ಷಗಳ ಕಾಲ ರಾಜ್ಯವಾಳಿದ ನಿಮ್ಮ ಕಾಂಗ್ರೆಸ್ ಪಕ್ಷ ಯಾಕೆ ಮೇಕೆದಾಟು ಯೋಜನೆ ಜಾರಿಗೊಳಿಸಲಿಲ್ಲ? ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಸಿದ್ದರಾಮಯ್ಯನವರೇ ನೀವು ಮಾತನಾಡುವಾಗ 1968ರಲ್ಲೇ ಕಾಂಗ್ರೆಸ್ ಸರ್ಕಾರ ಮೇಕೆದಾಟು ಯೋಜನೆ ಜಾರಿಗೆ ಪ್ರಯತ್ನ ಮಾಡಿತ್ತು. ಹಾಗಾದರೆ ಆಗ ಕೇಂದ್ರ ಮತ್ತು ರಾಜ್ಯದಲ್ಲಿ ಯಾವ ಸರ್ಕಾರ ಆಡಳಿತ ನಡೆಸುತ್ತಿತ್ತು? ಆ ನಂತರವು 40 ವರ್ಷಗಳ ಕಾಲ ರಾಜ್ಯವಾಳಿದ ನಿಮ್ಮ ಕಾಂಗ್ರೆಸ್ ಪಕ್ಷ ಯಾಕೆ ಮೇಕೆದಾಟು ಯೋಜನೆ ಜಾರಿಗೊಳಿಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇನ್ನು “ಮೇಕೆದಾಟು ಯೋಜನೆ ಜಾರಿ ವಿಚಾರದಲ್ಲಿ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಬದ್ಧ ಎಂದು ನಾನು ಹೇಳಿದ್ದೇನೆ. ನಿಮ್ಮದೇ ಪಕ್ಷದ ಸರ್ಕಾರ ಕೇಂದ್ರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಯಾಕೆ ಅನುಷ್ಠಾನ ಮಾಡಲಿಲ್ಲ? ಇದಕ್ಕೆ ನೀವು ಉತ್ತರ ಕೊಡಬೇಕಲ್ಲವೇ?” ಎಂದು ಹೇಳಿದ್ದಾರೆ.
“ಜನರಿಗೆ ತಪ್ಪು ಮಾಹಿತಿ ನೀಡಿ ಅವರ ದಿಕ್ಕು ತಪ್ಪಿಸುವುದೇ ನಿಮ್ಮ ಕಾಯಕವಾಗಿದೆ. ಈಗಾಗಲೇ ಕೇಂದ್ರದಲ್ಲಿನ ನಮ್ಮ ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆಗೆ ತಾತ್ವಿಕ ಅನುಮೋದನೆ ಕೊಟ್ಟಿರುವುದನ್ನು ಯಾಕೆ ಜನರ ಎದುರು ಹೇಳದೇ ಮರೆಮಾಚಿದಿರಿ? ಇದೇ ಅಲ್ಲವೇ ನಿಮ್ಮ ಸುಳ್ಳಿನ ರಾಜಕೀಯದ ಮೇಲಾಟ?” ಎಂದಿದ್ದಾರೆ.
ಸುಳ್ಳು ನಮ್ಮಲ್ಲಿಲ್ಲವಯ್ಯ, ಸುಳ್ಳೇ ನಮ್ಮನೆ ದೇವರು ಎನ್ನುವ ರಾಜಕೀಯ ಕುಟಿಲ ನೀತಿ ನಿಮ್ಮದು, ನಿಮ್ಮ ಪಕ್ಷದ್ದು ಎಂಬುದು ಸತ್ಯವಿದಿತ ಎಂದು ಲೇವಡಿ ಮಾಡಿದ್ದಾರೆ. ನೀವು ಅಧಿಕಾರಕ್ಕೆ ಬರುವ ದೃಷ್ಟಿ ಯಿಂದ ಜನರಿಗೆ ಸುಳ್ಳುಗಳ ಸರಮಾಲೆ ಪೋಣಿಸುತ್ತಾ ಅವರನ್ನು ದಿಕ್ಕು ತಪ್ಪಿಸಲು ಪಾದಯಾತ್ರೆ ಮಾಡಲು ಹೊರಟಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು