ಗೃಹಲಕ್ಷ್ಮಿಗಾಗಿ 4600 ಕೋಟಿ ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು, ಸೆ.15: ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ(Gruha Lakshmi Scheme) ರಕ್ಷಾ ಬಂಧನದ ದಿನ ಮೈಸೂರಿನಲ್ಲಿ ರಾಹುಲ್ ಗಾಂಧಿಯವರ(Rahul Gandhi) ನೇತೃತ್ವದಲ್ಲಿ ಅದ್ಧೂರಿ ಚಾಲನೆ ಸಿಕ್ಕಿತ್ತು. ಆ ಬಳಿಕ ಅನೇಕ ಮಹಿಳೆಯರ ಖಾತೆಗೆ 2 ಸಾವಿರ ರೂ ಜಮೆಯಾಗಿತ್ತು. ಆದರೆ ಕೆಲ ಮನೆ ಒಡತಿಯರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು ಚಿಂತಿಸುತ್ತಿದ್ದರು. ಸದ್ಯ ಈಗ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಈ ಮೂಲಕ ನಿಮ್ಮ ಖಾತೆಯ ಮಾಹಿತಿ ಎಲ್ಲವೂ ಸರಿಯಾಗಿದ್ದು ನಿಮ್ಮ ಅರ್ಜಿ ಕೂಡ ಸ್ವೀಕಾರವಾಗಿದ್ರೆ ಯಾರಿಗೆ ಈ ತಿಂಗಳ ಹಣ ಬಂದಿಲ್ಲವೂ ಅವರಿಗೆ ಎರಡು ತಿಂಗಳ ಹಣ ಒಟ್ಟಿಗೆ ಬರಲಿದೆ.
ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರವು ಮಹಿಳಾ&ಮಕ್ಕಳ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ 4,600 ಕೋಟಿ ರೂ. ಬಿಡುಗಡೆ ಮಾಡಿದೆ. 2023-24ನೇ ಸಾಲಿನಲ್ಲಿ 17,500 ಕೋಟಿ ರೂ. ನಿಗದಿಪಡಿಸಲಾಗಿತ್ತು. ಇದೀಗ ಮೊದಲ ಕಂತಿನ ಹಣ ಬಿಡುಗಡೆ ಮಾಡಿಲಾಗಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳ ಅವಧಿಗೆ 4,600 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಆಗಸ್ಟ್ 30ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಮ್ಮುಖದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಸಚಿವ ಸಂಪುಟದ ಸಚಿವರು, ಶಾಸಕರು ಕೂಡ ಭಾಗಿಯಾಗಿದ್ದರು. ಡಿಜಿಟಲ್ ಬಟನ್ ಒತ್ತಿ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಿದ್ದರು. ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿತರ ಖಾತೆಗೆ ₹2000 ರೂ. ಯನ್ನು ಅಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ.
ವಿಧಾನಸೌಧದಲ್ಲಿ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮ, ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಸೆ.15: ವಿಧಾನಸೌಧದಲ್ಲಿ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಕೊಟ್ಟಿದ್ದಾರೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಿಎಂ ಚಾಲನೆ ಕೊಟ್ಟರು. ಜಾಗತಿಕ ವಾಚಕರ ಸರ್ವ ಜನರ ಏಕ ಧ್ವನಿ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಯುತ್ತಿದ್ದು ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಶಿವರಾಜ್ ತಂಗಡಗಿ, ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ.
ಕಾರ್ಯಕ್ರಮ ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಿದರು. ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡುತ್ತಿದ್ದೇವೆ. ವಿಶ್ವದ ಅನೇಕ ದೇಶಗಳಲ್ಲಿ ಪ್ರಜಾಪ್ರಭುತ್ವ ದಿನ ಆಚರಣೆ ಮಾಡುತ್ತಿದ್ದಾರೆ. ಸಿಂಧೂ ನಾಗರಿಕತೆ ಕಾಲದಿಂದಲೂ ಪ್ರಜಾಪ್ರಭುತ್ವದ ವ್ಯವಸ್ಥೆ ಇತ್ತು. ಬುದ್ಧ, ಬಸವಣ್ಣ ಅವಧಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿ ಇತ್ತು. ಹಿಂದೆ ಗಣತಂತ್ರ ಅಂತಾ ಕರೆಯಲಾಗುತ್ತಿತ್ತು. ಜಗತ್ತಿನ ಅನೇಕ ರಾಷ್ಟ್ರಗಳು ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡಿದೆ. ಸಂವಿಧಾನ ರಚನೆ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆ ಅಧಿಕೃತವಾಗಿ ಜಾರಿಯಾಗಿದೆ. ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು. ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ಅವಕಾಶ ವಂಚಿತರ ಪರವಾಗಿ ನಾವು ಕೆಲಸ ಮಾಡುತ್ತಿದ್ದೇವೆ. 5 ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ನಾವೆಲ್ಲರೂ ಉಳಿದ ಹಾಗೆ. ಮಕ್ಕಳಿಗೂ ಸಹ ಸಂವಿಧಾನದ ಅರಿವು ಇರಬೇಕು. ಶಾಲಾ-ಕಾಲೇಜುಗಳಲ್ಲೂ ಸಂವಿಧಾನದ ಬಗ್ಗೆ ತಿಳಿಸಿಕೊಡಬೇಕು. ಸಂವಿಧಾನ ವಿರೋಧ ಮಾಡುವವರ ಬಗ್ಗೆ ಜಾಗೃತರಾಗಿ ಇರಬೇಕು ಎಂದರು.