
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಉತ್ತರಪ್ರದೇಶ : ಯೋಗಿ ಆಡಳಿತದಿಂದ ಬೇಸತ್ತ ಉತ್ತರ ಪ್ರದೇಶದ ಪ್ರತಿಪಕ್ಷಗಳು ಬಿಜೆಪಿಯನ್ನು ಮಣಿಸಲು ಬಹುದೊಡ್ಡ ತಂತ್ರವನ್ನು ಮಾಡುತ್ತಿದೆ ಎಂದು ಪ್ರಾಥಮಿಕ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಸುಹೇಲ್ ದೇವ್ ಭಾರತೀಯ ಸಮಾಜ ಪಾರ್ಟಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್ ಭರ್ ಮಾಹಿತಿಯನ್ನು ನೀಡಿದ್ದಾರೆ. ಮಾಹಿತಿ ಪ್ರಕಾರ ಯುಪಿಯಲ್ಲಿ 10ಪಕ್ಷಗಳು ಒಟ್ಟು ಸೇರಿ ಚುನಾವಣೆಯನ್ನು ಎದುರಿಸಲಿದೆ ಎಂದು ಹೇಳಲಾಗುತ್ತಿದೆ. ಈ ಮಹಾಮೈತ್ರಿ ಗೆದ್ದರೆ 5 ವರ್ಷಗಳ ಅವಧಿಯಲ್ಲಿ ಐವರು ಮುಖ್ಯಮಂತ್ರಿ ಮತ್ತು 20 ಉಪ ಮುಖ್ಯಮಂತ್ರಿಗಳ ಸೂತ್ರವನ್ನು ಸಿದ್ಧಪಡಿಸಲಾಗಿದೆ.
ಈ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐದು ಸಮುದಾಯಗಳಿಂದ ಅಂದರೆ ಕುಶ್ವಾಹ, ರಾಜ್ಭರ್, ಚೌಹಾಣ್, ಮುಸ್ಲಿಂ ಮತ್ತು ಪಟೇಲ್ ಸಮುದಾಯಗಳಿಂದ ಐವರು ಮುಖ್ಯಮಂತ್ರಿ ಆಗಲಿದ್ದಾರೆ. ಇದಾದ ಬಳಿಕ ಪ್ರತಿ ವರ್ಷ ನಾಲ್ಕು ಉಪ ಮುಖ್ಯಮಂತ್ರಿಗಳ ಸೂತ್ರ ಕೂಡ ಇದೆ ಎಂದು ಹೇಳಲಾಗಿದೆ. ಈ ಮೈತ್ರಿ ಕೂಟ ಎಷ್ಟರ ಮಟ್ಟಿನಲ್ಲಿ ಯಶಸ್ವಿಯಾಗಲಿದೆ ಎನ್ನುವುದು ಕಾದು ನೋಡಬೇಕಿದೆ.
ಮೈತ್ರಿ ಕೂಟದಲ್ಲಿ ಅಸದುದ್ದೀನ್ ಒವೈಸಿ ಅವರ ಎಐಐಎಂ, ಓಂ ಪ್ರಕಾಶ್ ರಾಜ್‌ಭರ್ ಅವರ ಸುಭಾಸ್ಪಿ ಕೃಷ್ಣ ಪಟೇಲ್ ನೇತೃತ್ವದ ಅಪ್ನಾ ದಳ ಮತ್ತು ಮಾಜಿ ಸಚಿವ ಬಾಬು ಸಿಂಗ್ ಕುಶ್ವಾಹ ನೇತೃತ್ವದ ಜನ ಅಧಿಕಾರ ಮಂಚ್ ಸೇರಿಕೊಂಡಿದೆ ಎನ್ನಲಾಗಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್