ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ – ಶಿಕ್ಷಣ ಇಲಾಖೆ ಆದೇಶ

Twitter
Facebook
LinkedIn
WhatsApp
5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ – ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಮಕ್ಕಳ ಶೈಕ್ಷಣಿಕ ಗುಣಮಟ್ಟ ಅಳೆಯಲು ಇನ್ಮುಂದೆ 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ (Annual Examination) ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ (Education Department) ಅಧಿಕೃತ ಆದೇಶ ಹೊರಡಿಸಿದೆ.

ಮೌಲ್ಯಾಂಕನ ಪರೀಕ್ಷೆ ಹೆಸರಿನಲ್ಲಿ ಈ ಪರೀಕ್ಷೆ ನಡೆಯಲಿದೆ. ಮಕ್ಕಳ ಕಲಿಕಾ ಕೊರತೆ ನೀಗಿಸಲು ಕಲಿಕೆಯಲ್ಲಿ ಚೇತರಿಕೆ ಮೂಡಿಸಲು ಇಲಾಖೆ ಈ ನಿರ್ಧಾರ ಮಾಡಿದೆ. ಕ್ಲಸ್ಟರ್ ಹಂತದಲ್ಲಿ ಪರೀಕ್ಷಾ ವ್ಯವಸ್ಥೆಗಳು ನಡೆಯಲಿದೆ.

ಕರ್ನಾಟಕ ಶಾಲಾ ಪರೀಕ್ಷಾ (School Exams) ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ವಹಿಸಲಿದೆ. ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳ ಕಲಿಕಾ ಸಾಧನೆ ಯಾವ ರೀತಿ ಇದೆ ಎಂಬುದನ್ನು ಅಳೆಯಲು ಈ ವಾರ್ಷಿಕ ಪರೀಕ್ಷೆ ಮಾಡಲಾಗ್ತಿದೆ. 

ಯಾವುದೇ ವಿದ್ಯಾರ್ಥಿಗಳನ್ನ ಈ ಪರೀಕ್ಷೆಯಲ್ಲಿ ಫೇಲ್ ಮಾಡೋದಿಲ್ಲ. ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯೋ ವಿದ್ಯಾರ್ಥಿಗಳಿಗೆ (Students) ವಿಶೇಷ ತರಬೇತಿ ನೀಡುವ ವ್ಯವಸ್ಥೆ ಇಲಾಖೆ ಮಾಡಿಕೊಳ್ಳಲಿದೆ. ಮಕ್ಕಳ ಕಲಿಕೆ ಗುಣಮಟ್ಟ ಏನು? ಕೊರತೆಗಳೇನು? ಯಾವ ವಿಷಯಗಳಲ್ಲಿ ಹಿನ್ನಡೆಯಾಗಿದೆ ಎಂಬುದನ್ನು ತಿಳಿಯಲು ಈ ಪರೀಕ್ಷೆಯಿಂದ ಸಹಕಾರಿಯಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಪರೀಕ್ಷಾ ವ್ಯವಸ್ಥೆ ಹೇಗೆ?
ರೂಪಣಾತ್ಮಕ ಪರೀಕ್ಷೆ ಮತ್ತು ಸಂಕಲನಾತ್ಮಕ ಪರೀಕ್ಷೆ ವಿಧಾನದಲ್ಲಿ ಪರೀಕ್ಷೆ ನಡೆಯಲಿದೆ. ಕ್ಲಸ್ಟರ್ ಹಂತದಲ್ಲಿ ಈ ಪರೀಕ್ಷೆಗಳನ್ನ ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಗೆ ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ಪಡೆಯುವಂತಿಲ್ಲ. 

8ನೇ ತರಗತಿಗೆ ಒಂದು ಪರೀಕ್ಷಾ ಕೇಂದ್ರಕ್ಕೆ 50 ಮಕ್ಕಳು ಇರುವಂತೆ, 5ನೇ ತರಗತಿಗೆ 25 ಮಕ್ಕಳು ಒಂದು ಕೇಂದ್ರಕ್ಕೆ ಇರುವಂತೆ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಬೇಕು. ಮಕ್ಕಳ ಸಂಖ್ಯೆ ಕಡಿಮೆಯಿದ್ದರೆ 2 ಕಿಮೀ ವ್ಯಾಪ್ತಿಯ ಶಾಲೆಗಳನ್ನ ಒಳಪಡಿಸಿಕೊಳ್ಳುವುದು. ಪರೀಕ್ಷಾ ಕೇಂದ್ರ ಸ್ಥಾಪನೆಗೆ ಡಯಟ್ ಪ್ರಾಂಶುಪಾಲರು, ಬಿಇಓಗಳು ಚರ್ಚಿಸಿ ನಿರ್ಧಾರ ಮಾಡಬೇಕು. ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಕರನ್ನ ಅದಲು ಬದಲು ಮಾಡಬೇಕು. ಶಾಲಾ ಹಂತದಲ್ಲಿ ಪರೀಕ್ಷೆ ಪ್ರವೇಶ ಪತ್ರಗಳನ್ನ ಮುಖ್ಯಶಿಕ್ಷಕರು ವಿತರಿಸಬೇಕು.

50 ಅಂಕಗಳ ಪರೀಕ್ಷೆ. 2 ಗಂಟೆ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು. 50 ಅಂಕದಲ್ಲಿ 40 ಅಂಕ ಲಿಖಿತ ಪರೀಕ್ಷೆ, 10 ಅಂಕ ಮೌಖಿಕ ಪರೀಕ್ಷೆ ನಡೆಸುವುದು. ಪ್ರಶ್ನೆ ಪತ್ರಿಕೆ ಮುದ್ರಣವನ್ನ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುದ್ರಿಸುತ್ತದೆ. ಜಿಲ್ಲಾ ಡಯಟ್ ಗಳಿಗೆ ಇದು ಹಂಚಿಕೆಯಾಗಲಿದೆ. ಇದರ ಉಸ್ತುವಾರಿ ಬಿಇಓ ಆಗಿರುತ್ತಾರೆ. ಸಂಕಲನಾತ್ಮಕ ಮತ್ತು ರೂಪಣಾತ್ಮಕ ಸೇರಿ 100 ಅಂಕಗಳಿಗೆ ಪರೀಕ್ಷೆ ಇರಲಿದೆ. 35 ಅಂಕ ಪಡೆದ ವಿದ್ಯಾರ್ಥಿ ಪ್ರಗತಿ ಸಾಧಿಸಿರುವ ವಿದ್ಯಾರ್ಥಿ ಅಂತ ಘೋಷಣೆ ಮಾಡಲಾಗುತ್ತದೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿ ಫೇಲ್ ಮಾಡದೇ ಪ್ರಗತಿ ಸಾಧಿಸಬೇಕಾದ ವಿದ್ಯಾರ್ಥಿ ಅಂತ ಪರಿಗಣಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ