ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದು ; ಹೈಕೋರ್ಟ್ ಆದೇಶ

Twitter
Facebook
LinkedIn
WhatsApp
exam dp 1678453671

ಬೆಂಗಳೂರು: 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು ಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾ.13ರಿಂದ 5, 8ನೇ ತರಗತಿ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಎಕ್ಸಂಗೆ ತಡೆ ನೀಡುವ ಮೂಲಕ ಹೈಕೋರ್ಟ್‌ ಶಿಕ್ಷಣ ಇಲಾಖೆಗೆ ಬಿಗ್ ಶಾಕ್ ನೀಡಿದೆ.

ಈ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ನಿರ್ಧರಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪಬ್ಲಿಕ್ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 12 ಡಿಸೆಂಬರ್​ 2022 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ರುಪ್ಸಾ ತಕರಾರು ಅರ್ಜಿ ಸಲ್ಲಿಸಿತ್ತು.

ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಮಧ್ಯಂತ ತಡೆ ನೀಡಲು ನಿರಾಕರಿಸಿತ್ತು. ಬಳಿಕ ರುಪ್ಸಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್​​ ಎಸ್​. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಸಕ್ತ ಶೈಕ್ಷಣಿಕ ಸಾಲಿನ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸೂಚಿಸಿದೆ. ಈ ಹಿನ್ನೆಲೆ ಏಕಸದಸ್ಯ ಪೀಠ ಇಂದು (ಮಾ. 10) ತೀರ್ಪು ನೀಡಿದೆ.

ಇನ್ನು ಸಿಬಿಎಸ್​ಸಿ ಕೇಂದ್ರದ ಪಠ್ಯಕ್ರಮದ ಶಾಲೆಗಳಲ್ಲಿಯೂ ಇಲ್ಲದ ವಾರ್ಷಿಕ ಪರೀಕ್ಷೆ ರಾಜ್ಯದಲ್ಲಿ ಜಾರಿಗೆ ಮುಂದಾಗಿರೋದಕ್ಕೆ ಈ ಹಿಂದೆ ವಿರೋಧ ವ್ಯಕ್ತವಾಗಿತ್ತು. ಶಿಕ್ಷಣ ಇಲಾಖೆಯು ವಾರ್ಷಿಕ ಪರೀಕ್ಷೆಗಳ ಹೆಸರಲ್ಲಿ ದುಡ್ಡು ಮಾಡುವ ಹುನ್ನಾರ ನಡೆಸುತ್ತಿದೆ ಎಂಬ ಆರೋಪಗಳು ಸಹ ಕೇಳಿಬಂದಿದ್ದವು. ಪರೀಕ್ಷೆಗಳ ಮೂಲಕ ಕೋಟ್ಯಾಂತರ ರೂಪಾಯಿ ಲೂಟಿಯ ಹಾದಿ ಅಂತಾ ಪೋಷಕರ ಸಂಘಟನೆಗಳಿಂದ ವಾರ್ಷಿಕ ಪರೀಕ್ಷೆಗೆ ವಿರೋಧಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ