ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

5-8ನೇ ಕ್ಲಾಸ್‌ ಬೋರ್ಡ್‌ ಪರೀಕ್ಷೇಲಿ ಫೇಲಾದ್ರೆ ಪೂರಕ ಪರೀಕ್ಷೆ?

Twitter
Facebook
LinkedIn
WhatsApp
examdp 1678422373

ಬೆಂಗಳೂರು (ಏ.14) : ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಬೋರ್ಡ್‌ ಪರೀಕ್ಷೆ ನಡೆಸಿ ಯಶಸ್ವಿಯಾಗಿರುವ ಶಾಲಾ ಶಿಕ್ಷಣ ಇಲಾಖೆ ಮುಂಬರುವ 2023-24ನೇ ಸಾಲಿನಿಂದ ಈ ಎರಡೂ ತರಗತಿಯ ಮುಖ್ಯ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಿ, ಎಸ್ಸೆಸ್ಸೆಲ್ಸಿ ಮಾದರಿಯಲ್ಲಿ ಪೂರಕ ಪರೀಕ್ಷೆ ಪರಿಚಯಿಸಲು ಗಂಭೀರ ಚಿಂತನೆ ನಡೆಸಿದೆ.

ಪೂರಕ ಪರೀಕ್ಷೆ ಪರಿಚಯಿಸಿದರೂ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಉದ್ದೇಶ ಇಲಾಖೆಯಲ್ಲಿ ಸದ್ಯಕ್ಕಿಲ್ಲ. ಬದಲಿಗೆ ಮುಖ್ಯ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ಪಡೆದವರನ್ನು ಕಲಿಕೆಯಲ್ಲಿ ಹಿಂದುಳಿದವರೆಂದು ಪರಿಗಣಿಸಿ ಅವರಿಗೆ ಕೆಲವು ತಿಂಗಳು ವಿಶೇಷ ತರಗತಿಗಳನ್ನು ನಡೆಸಿ ಕಲಿಕೆಯಲ್ಲಿ ಸುಧಾರಣೆ ಮಾಡಲಾಗುವುದು. ಬಳಿಕ ಪೂರಕ ಪರೀಕ್ಷೆ ನಡೆಸಿ ಫಲಿತಾಂಶ ನೀಡಿ ಮುಂದಿನ ತರಗತಿಗೆ ಕಳುಹಿಸಲಾಗುತ್ತದೆ. ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣ ಎಂಬ ಪ್ರಶ್ನೆ ಸದ್ಯಕ್ಕೆ ಇರುವುದಿಲ್ಲ. ಅದನ್ನು ಮುಂದೆ ಯೋಚಿಸಲಾಗುವುದು. ಹಂತ ಹಂತವಾಗಿ ಶಾಲಾ ಶಿಕ್ಷಣದಲ್ಲಿ ಗುಣಮಟ್ಟಹೆಚ್ಚಿಸಲು ಕ್ರಮ ಕೈಗೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.

ಸ್ತುತ 9ನೇ ತರಗತಿವರೆಗೂ ಮಕ್ಕಳನ್ನು ಅನುತ್ತೀರ್ಣಗೊಳಿಸಬಾರದೆಂಬ ನಿಯಮವಿದೆ. ಇದರಿಂದ ಶಾಲಾ ಶಿಕ್ಷಣದಲ್ಲಿ ಗುಣಮಟ್ಟ, ಗಂಭೀರತೆ ಕುಸಿದಿದೆ. ಇದನ್ನು ಸುಧಾರಿಸಲು 5 ಮತ್ತು 8ನೇ ತರಗತಿಗೆ ಬೋರ್ಡ್‌ ಪರೀಕ್ಷೆ ಅಗತ್ಯವಿತ್ತು. ಈ ತರಗತಿಗಳಲ್ಲಿ ಅನುತ್ತೀರ್ಣ ಪದ್ಧತಿಯನ್ನು ಆರಂಭಿಸುವ ಇರಾದೆ ಇದ್ದರೂ ಕಾಯ್ದೆಯಲ್ಲಿ ಅವಕಾಶವಿಲ್ಲದ ಕಾರಣ ಪೂರಕ ಪರೀಕ್ಷೆ ಪರಿಚಯಿಸಲು ಉದ್ದೇಶಿಸಲಾಗಿದೆ. ಪೂರಕ ಪರೀಕ್ಷೆಯನ್ನು ಈ ಬಾರಿಯ ಪರೀಕ್ಷೆಯಲ್ಲೇ ಆರಂಭಿಸುವ ಉದ್ದೇಶವಿತ್ತಾದರೂ ಬೋರ್ಡ್‌ ಪರೀಕ್ಷೆ ಪ್ರಶ್ನಿಸಿ ಕೆಲವು ಖಾಸಗಿ ಶಾಲೆಗಳು ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಜಾರಿ ಸಾಧ್ಯವಾಗಲಿಲ್ಲ ಎನ್ನುತ್ತವೆ ಇಲಾಖೆಯ ಮೂಲಗಳು.

ಖಾಸಗಿ ಪಠ್ಯಕ್ಕೆ ಬೋರ್ಡ್‌ ಪರೀಕ್ಷೆಯಿಂದ ಬ್ರೇಕ್‌:

ರಾಜ್ಯ ಪಠ್ಯಕ್ರಮದಡಿ ಮಾನ್ಯತೆ ಪಡೆದಿರುವ ರಾಜ್ಯದ ಅನೇಕ ಖಾಸಗಿ ಶಾಲೆಗಳು ಸರ್ಕಾರದ ಪಠ್ಯಪುಸ್ತಕಗಳನ್ನು ಬೋಧನೆ ಮಾಡದೆ ಖಾಸಗಿ ಪ್ರಕಾಶನದ ಪುಸ್ತಕಗಳನ್ನು ಬೋಧನೆ ಮಾಡುತ್ತಿವೆ. ಅಲ್ಲದೆ, ಈ ಪಠ್ಯಪುಸ್ತಕಗಳ ಹೆಸರಲ್ಲಿ ಮಕ್ಕಳಿಂದಲೂ ದೊಡ್ಡ ಮೊತ್ತದ ಶುಲ್ಕ ವಸೂಲಿಯ ಆರೋಪಗಳಿದ್ದವು. ಕೆಲವು ಖಾಸಗಿ ಶಾಲೆಗಳು ರಾಜ್ಯ ಪಠ್ಯಕ್ರಮಕ್ಕೆ ಅನುಮತಿ ಪಡೆದು ಕೇಂದ್ರೀಯ ಪಠ್ಯಕ್ರಮ ಬೋಧನೆ ಮಾಡುವ ಮೂಲಕ ನಮ್ಮದು ಸಿಬಿಎಸ್‌ಇ, ಐಸಿಎಸ್‌ಇ ಶಾಲೆ ಎಂದು ಹೇಳಿ ಪೋಷಕರಿಗೆ ವಂಚಿಸುತ್ತಿದ್ದವು. ಆದರೆ ಸರ್ಕಾರ ಜಾರಿಗೆ ತಂದ 5 ಮತ್ತು 8ನೇ ತರಗತಿ ಮಂಡಳಿ ಪರೀಕ್ಷೆಯಿಂದ ಇದಕ್ಕೆ ಕಡಿವಾಣ ಬಿದ್ದಿದೆ.

ಈ ಕಾರಣಕ್ಕಾಗಿಯೇ ಕೆಲ ಖಾಸಗಿ ಶಾಲಾ ಸಂಘಟನೆಗಳು ಬೋರ್ಡ್‌ ಪರೀಕ್ಷೆ ಪ್ರಶ್ನಿಸಿ ಸುಪ್ರೀಂಕೋರ್ಚ್‌ವರೆಗೂ ಕಾನೂನು ಹೋರಾಟ ನಡೆಸಿದವು. ಆದರೆ, ಕೊನೆಗೆ ಇಲಾಖೆಯ ಪರವಾಗಿಯೇ ತೀರ್ಪು ಬಂದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist