ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5 ರನ್​ಗಳ ರೋಚಕ ಜಯ, ಡಕ್‌ವರ್ತ್ ನಿಯಮದನ್ವಯ ಗೆಲುವು, ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ!

Twitter
Facebook
LinkedIn
WhatsApp
5 ರನ್​ಗಳ ರೋಚಕ ಜಯ, ಡಕ್‌ವರ್ತ್ ನಿಯಮದನ್ವಯ ಗೆಲುವು, ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ!

ICC Womens T20 World Cup 2023: ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ತಂಡವು ಐರ್ಲೆಂಡ್ ವಿರುದ್ಧ ಜಯ ಸಾಧಿಸಿದೆ. ಮಳೆಗೆ ಅಹುತಿಯಾದ ಈ ಪಂದ್ಯದ ಫಲಿತಾಂಶವನ್ನು ಡಕ್​ವರ್ಥ್ ಲೂಯಿಸ್ ನಿಯಮ ಪ್ರಕಾರ ನಿರ್ಧರಿಸಲಾಗಿದ್ದು, ಅದರಂತೆ ಟೀಮ್ ಇಂಡಿಯಾ 5 ರನ್​ಗಳ ರೋಚಕ ಜಯ ಸಾಧಿಸಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸಿದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ  ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 62 ರನ್​ಗಳ ಜೊತೆಯಾಟವಾಡಿದ ಶಫಾಲಿ 24 ರನ್​ಗಳಿಸಿ ಔಟಾದರು. ಇದಾಗ್ಯೂ ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಸ್ಮೃತಿ ಮಂಧಾನ ಐರ್ಲೆಂಡ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು.

ಪರಿಣಾಮ ಮಂಧಾನ ಬ್ಯಾಟ್​ನಿಂದ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳು ಮೂಡಿಬಂದಿದ್ದವು. ಅಲ್ಲದೆ 56 ಎಸೆತಗಳಲ್ಲಿ 87 ರನ್​ ಬಾರಿಸಿ 19ನೇ ಓವರ್​ನಲ್ಲಿ ಸ್ಮೃತಿ ಮಂಧಾನ ಔಟಾದರು. ಅಷ್ಟರಲ್ಲಾಗಲೇ ಟೀಮ್ ಇಂಡಿಯಾ ಮೊತ್ತವು 150 ರ ಗಡಿ ತಲುಪಿತ್ತು. ಅಂತಿಮವಾಗಿ ಭಾರತ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 155 ರನ್​ ಕಲೆಹಾಕಿತು.

156 ರನ್​ಗಳ ಕಠಿಣ ಗುರಿ ಪಡೆದ ಐರ್ಲೆಂಡ್ ತಂಡವು 8.2 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 54 ರನ್​ ಬಾರಿಸಿದ್ದರು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ನಿರಂತರ ಮಳೆಯಾಗಿದ್ದರಿಂದ ಪಂದ್ಯ ನಡೆಸುವುದು ಅಸಾಧ್ಯ ಎಂದು ಮ್ಯಾಚ್ ರೆಫರಿ ನಿರ್ಧರಿಸಿದರು. ಅಲ್ಲದೆ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲು ಡಕ್​ ವರ್ಥ್ ಲೂಯಿಸ್ ನಿಯಮದ ಮೊರೆ ಹೋಗಲಾಯಿತು. ಈ ವೇಳೆ ಐರ್ಲೆಂಡ್ ಮೊತ್ತವು ಟೀಮ್ ಇಂಡಿಯಾಗಿಂತ 5 ರನ್​ ಹಿಂದಿತ್ತು. ಡಕ್ ವರ್ತ್ ನಿಯಮದ ಪ್ರಕಾರ ಐರ್ಲೆಂಡ್ ತಂಡ 9ನೇ ಓವರ್‌ನಲ್ಲಿ 59 ರನ್ ಗಳಿಸಬೇಕಿತ್ತು. ಇತ್ತ ಮಳೆಯಿಂದಾಗಿ ಮತ್ತೆ ಪಂದ್ಯ ಆರಂಭಿಸಲು ಸಾಧ್ಯವಾಗಿಲ್ಲ. ಹೀಗಾಗಿ ಡಕ್‌ವರ್ತ್ ನಿಯಮದ ಪ್ರಕಾರ ಭಾರತಕ್ಕೆ ಗೆಲವು ಘೋಷಿಸಲಾಯಿತು. ಅದರಂತೆ ಭಾರತ ತಂಡವು 5 ರನ್​ಗಳ ಜಯ ಸಾಧಿಸಿ ಸೆಮಿಫೈನಲ್​ಗೆ ಪ್ರವೇಶಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ