
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಪಾಟ್ನಾ:ಅತ್ಯಾಚಾರ ಎಸಗಿದ್ದ ಆರೋಪಿಯಿಂದ 50,000 ರೂ ಪಡೆದು, ಆತನ ಕಪಾಳಕ್ಕೆ ಬೂಟಿನಿಂದ ಐದು ಬಾರಿ ಹೊಡೆದು ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಗ್ರಾಮ ಪಂಚಾಯತಿಗೆ ಅತ್ಯಾಚಾರ ಸಂತ್ರಸ್ತೆಗೆ ಹೇಳಿರುವ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕೋತಿಭರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯ ಕುಟುಂಬವು ಪಂಚಾಯತ್‌ನ ನಿರ್ಧಾರವನ್ನು ನಿರಾಕರಿಸಿದ್ದು, ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಂಚಾಯತ್‌ನ ನಿರ್ಧಾರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ, ಸಿಆರ್‌ಪಿಸಿ ಸೆಕ್ಷನ್ 164 ರ ಅಡಿಯಲ್ಲಿ ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಪಡೆದುಕೊಂಡು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಪೊಲೀಸರಿಗೆ ಮಹಾರಾಜ್‌ಗಂಜ್‌ನ ಎಸ್‌ಪಿ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಜೂನ್ 23ರಂದು ಕೋತಿಭರ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದ ನಿವಾಸಿಯಾದ ಬಾಲಕಿಯ ಮೇಲೆ ಅದೇ ಗ್ರಾಮದ ಯುವಕರು ಅತ್ಯಾಚಾರ ಎಸಗಿದ್ದರು. ಈ ಬಗ್ಗೆ ಬಾಲಕಿಯ ತಾಯಿ ಪಂಚಾಯತಿಗೆ ದೂರು ನೀಡಿದ್ದರು. ಆರೋಪಿಗಳಿಂದ 50,000 ರೂ.ಗಳನ್ನು ತೆಗೆದುಕೊಂಡು, ಅವರ ಕಪಾಳಕ್ಕೆ ಬೂಟಿನಿಂದ ಐದು ಬಾರಿ ಹೊಡೆದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಪಂಚಾಯತ್ ಸದಸ್ಯರು ಸೂಚನೆ ನೀಡಿದ್ದರು.
ಆದರೆ, ಬಾಲಕಿಯ ಕುಟುಂಬ ಈ ನಿರ್ಧಾರವನ್ನು ನಿರಾಕರಿಸಿ, ಜೂನ್ 24 ರಂದು ಕೋತಿಭಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತು. ಕುಟುಂಬದ ದೂರಿನ ಮೇರೆಗೆ, ಆರೋಪಿಗಳ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಪೋಕ್ಸೊ ಕಾಯ್ದೆಯ ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ ಕುಟುಂಬವು ಪಂಚಾಯತ್ ನಿರ್ಧಾರವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿತು, ಇದರ ಬೆನ್ನಲ್ಲೇ ಮಹಾರಾಜ್ ಗಂಜ್ ಎಸ್ಪಿ ಪ್ರದೀಪ್ ಗುಪ್ತಾ ಮಂಗಳವಾರ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್