ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5, 8, 9ನೇ ತರಗತಿಯ ಪರೀಕ್ಷೆ ವೇಳಾಪಟ್ಟಿ ಪ್ರಕಟ..!

Twitter
Facebook
LinkedIn
WhatsApp
5, 8, 9ನೇ ತರಗತಿಯ ಪರೀಕ್ಷೆ ವೇಳಾಪಟ್ಟಿ ಪ್ರಕಟ..!

ಬೆಂಗಳೂರು : 5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ (Moulyankana Exams) ನಡೆಸಲು ಕರ್ನಾಟಕ ಶಿಕ್ಷಣ ಇಲಾಖೆ (Karnataka education department, ) ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಇಲ್ಲದ ದಿನ ಬೆಳಿಗ್ಗೆ ಬೋರ್ಡ್​ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪ್ಲಾನ್​ ಮಾಡಿದೆ. ಇನ್ನು, ಉಳಿದ ದಿನ ಮಧ್ಯಾಹ್ನ ಅವಧಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಮಾರ್ಚ್ 25ನೇ ತಾರೀಕಿನಿಂದ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿದ್ದು, ಎಸ್​ಎಸ್​ಎಲ್​ಸಿ ಪರೀಕ್ಷೆಗಳಿರುವ ದಿನಾಂಕ 25-3-24ರ ಸೋಮವಾರ ಮತ್ತು 27-3-24ರ ಬುಧವಾರದಂದು ಮಧ್ಯಾಹ್ನದ ಅವಧಿಯಲ್ಲಿ ಹಾಗೂ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಇಲ್ಲದಿರುವ ದಿನಾಂಕ 26-3-24 ರ ಮಂಗಳವಾರ ಮತ್ತು 28-3-24 ರ ಗುರುವಾರದಂದು ಬೆಳಗಿನ ಅವಧಿಯಲ್ಲಿ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕವನ್ನು ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಪರೀಕ್ಷೆ ಮುಂದುವರಿಸುವ ಆದೇಶದಲ್ಲಿ ಏನಿದೆ?

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024, ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವೆಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿ, ಈ ಹಿಂದೆ ರಾಜ್ಯ ಉಚ್ಛ ನ್ಯಾಯಾಲಯದ ದ್ವಿಸದಸ್ಯ ಪೀಠವು ಮೌಲ್ಯಾಂಕನವನ್ನು ಮುಂದುವರೆಸುವಂತೆ ನೀಡಿದ್ದ ಮಧ್ಯಂತರ ತೀರ್ಪನ್ನು ರದ್ದುಪಡಿಸಿರುತ್ತದೆ ಮತ್ತು ಪ್ರಕರಣವನ್ನು ರಾಜ್ಯ ಉಚ್ಛ ನ್ಯಾಯಾಲಯ ವಿಭಾಗೀಯ ಪೀಠಕ್ಕೆ ರವಾನಿಸಿತ್ತು.

ಈ ಹಿನ್ನೆಲೆಯಲ್ಲಿ ದಿನಾಂಕ: 13-3-2024ರಿಂದ ನಡೆಯಬೇಕಾಗಿದ್ದ 5.8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿತ್ತು. ಮುಂದುವರೆದು, ರಾಜ್ಯ ಘನ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠವು ಸದರಿ ದಾವೆಯ ಪ್ರಕರಣವನ್ನು ವಿಚಾರಣೆ ನಡೆಸಿ ದಿನಾಂಕ: 22-3-2024ರಂದು ಅಂತಿಮ ತೀರ್ಪು ನೀಡಿದ್ದು, 5, 8 ಮತ್ತು 9ನೇ ತರಗತಿಗಳು 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ಕಾರ್ಯವನ್ನು ಉಳಿದ ವಿಷಯಗಳಿಗೆ ಮುಂದುವರೆಸಲು ಸೂಚಿಸಿ ಆದೇಶಿಸಿರುತ್ತದೆ. ಅದರಂತೆ ಸದರಿ ಮೌಲ್ಯಾಂಕನ ಕಾರ್ಯವನ್ನು ವಿದ್ಯಾರ್ಥಿಗಳ ಅಭ್ಯಾಸದ ಹಿತದೃಷ್ಟಿಯಿಂದ ದಿನಾಂಕ: 25-3-2024ರಿಂದ ಪ್ರಾರಂಭಿಸಲು ಕ್ರಮವಹಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ

5ನೇ ತರಗತಿ

  • ಮಾರ್ಚ್ 25- ಪರಿಸರ ಅಧ್ಯಯನ
  • ಮಾರ್ಚ್ 26- ಗಣಿತ

8ನೇ ತರಗತಿ

  • ಮಾರ್ಚ್ 25- ತೃತೀಯ ಭಾಷೆ
  • ಮಾರ್ಚ್ 26- ಗಣಿತ
  • ಮಾರ್ಚ್ 27- ವಿಜ್ಞಾನ
  • ಮಾರ್ಚ್ 28- ಸಮಾಜ ವಿಜ್ಞಾನ

9ನೇ ತರಗತಿ

  • ಮಾರ್ಚ್ 25- ತೃತೀಯ ಭಾಷೆ
  • ಮಾರ್ಚ್ 26- ಗಣಿತ
  • ಮಾರ್ಚ್ 27- ವಿಜ್ಞಾನ
  • ಮಾರ್ಚ್ 28- ಸಮಾಜ ವಿಜ್ಞಾನ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ