ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

6 ಆಫ್ರಿಕನ್ ದೇಶಗಳಿಂದ ವಿಮಾನ ನಿಷೇಧಿಸಿದ ಬೆಹರಿನ್‌.

Twitter
Facebook
LinkedIn
WhatsApp
6 ಆಫ್ರಿಕನ್ ದೇಶಗಳಿಂದ ವಿಮಾನ ನಿಷೇಧಿಸಿದ ಬೆಹರಿನ್‌.

ಬೆಹರಿನ್‌ : ವಿಶ್ವದ ಹಲವು ರಾಷ್ಟ್ರಗಳಲ್ಲಿ ಹೊಸ ಕೋವಿಡ್‌ ರೂಪಾಂತರವು ವ್ಯಾಪಕವಾಗಿ ಹರಡುತ್ತಿದೆ. ಅದ್ರಲ್ಲೂ ದಕ್ಷಿಣ ಆಫ್ರಿಕಾದಲ್ಲಿ ಅಪಾಯಕಾರಿ ಕೋವಿಡ್‌ ರೂಪಾಂತರಿ ಸೋಂಕು (African variant covid) ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಬಹ್ರೇನ್ ಆರು ಆಫ್ರಿಕನ್ ದೇಶಗಳಿಂದ ವಿಮಾನಗಳನ್ನು ನಿಷೇಧಿಸಿದೆ ಬಹ್ರೇನ್ ದಕ್ಷಿಣ ಆಫ್ರಿಕಾ, ನಮೀಬಿಯಾ, ಲೆಸೊಥೋ, ಸ್ವಾತಿನಿ, ಜಿಂಬಾಬ್ವೆ ಮತ್ತು ಬೋಟ್ಸ್ವಾನಾದಿಂದ ವಿಮಾನಗಳನ್ನು ಸ್ಥಗಿತಗೊಳಿಸಿದೆ.

ಕೊರೊನಾ ಮೊದಲ ಹಾಗೂ ಎರಡನೇ ಅಲೆಯ ವೇಳೆಯಲ್ಲಿ ಯುಕೆ, ಯುರೋಪಿಯನ್ ಯೂನಿಯನ್ ಮತ್ತು ಫ್ರಾನ್ಸ್‌ನಂತಹ ದೇಶಗಳು ಸಹ ವಿಮಾನಯಾನ ಸಂಸ್ಥೆಗಳ ಮೇಲೆ ನಿರ್ಬಂಧ ಹೇರಿದ್ದವು. ದಕ್ಷಿಣ ಆಫ್ರಿಕಾದಲ್ಲಿ 30 ಕ್ಕೂ ಹೆಚ್ಚು ತಳಿಯ ರೂಪಾಂತರಿ ವೈರಸ್‌ ಸೋಂಕು ಕಂಡು ಬಂದಿದೆ. ಅದ್ರಲ್ಲೂ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಹೊಸ ಕೊರೊನಾ ವೈರಸ್ ರೂಪಾಂತರವನ್ನು B1.1.529 ಎಂದು ಹೆಸರಿಸಲಾಗಿದೆ. ಬ್ರಿಟಿಷ್ ಹೆಲ್ತ್ ಸೇಫ್ಟಿ ಏಜೆನ್ಸಿಯು ಲಸಿಕೆಗಳು, ಚಿಕಿತ್ಸೆಗಳು ಮತ್ತು ಹರಡುವ ಸಂಭಾವ್ಯತೆಯ ಕುರಿತು ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ರೂಪಾಂತರ ಕೊರೊನಾ ವೈರಸ್‌ ಸೋಂಕು ವ್ಯಾಪಕವಾಗಿ ಹರಡುವ ಭೀತಿ ಎದುರಾಗಿದೆ.

ಹೊಸ ರೂಪಾಂತರ ಕೊರೊನಾ ವೈರಸ್‌ ಸೋಂಕು ಪತ್ತೆಯಾಗಿರುವ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆ ದಕ್ಷಿಣ ಆಫ್ರಿಕಾದಲ್ಲಿ ತುರ್ತು ಸಭೆಯನ್ನು ಕರೆದಿದೆ. ದೇಶದಾದ್ಯಂತ ಕೈಗೊಳ್ಳಬೇಕಾಗಿರುವ ಅಗತ್ಯ ಹಾಗೂ ತುರ್ತು ಕ್ರಮಗಳ ಕುರಿತು ಚರ್ಚೆಯನ್ನು ನಡೆಸಲಿದೆ. ಅಲ್ಲದೇ ವಿಶ್ವದಾದ್ಯಂತ ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು