ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೇಪಾಳದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ; 70 ಜನರು ಸಾವು - ಹಲವರಿಗೆ ಗಾಯ!

Twitter
Facebook
LinkedIn
WhatsApp
ನೇಪಾಲದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ; 70 ಜನರು ಸಾವು - ಹಲವರಿಗೆ ಗಾಯ!

 ನೇಪಾಳದ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ (Nepal Earthqauke) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 70 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ. ಭೂಕಂಪನದ ರಾಷ್ಟ್ರೀಯ ಕೇಂದ್ರ (NCS) ಪ್ರಕಾರ, ಭೂಕಂಪವು ಶುಕ್ರವಾರ ರಾತ್ರಿ 11:32 ಕ್ಕೆ 10 ಕಿಮೀ ಆಳದಲ್ಲಿ ಸಂಭವಿಸಿದೆ.

ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳ ಪ್ರಕಾರ, ಭೂಕಂಪದ ಕೇಂದ್ರಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಾಮಿಡಾಂಡಾ ಪ್ರದೇಶದಲ್ಲಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಸಂಭವಿಸಿದ ಸರಣಿ ಭೂಕಂಪಗಳ ಬೆನ್ನಲ್ಲೇ ಶುಕ್ರವಾರ ಭೂಕಂಪ ಸಂಭವಿಸಿದೆ.

ಕೆಲವು ದಿನಗಳ ಹಿಂದೆ, ಅಕ್ಟೋಬರ್ 22 ರಂದು ನೇಪಾಳದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪದ ಕೇಂದ್ರಬಿಂದು ಧಾಡಿಂಗ್‌ನಲ್ಲಿದ್ದು, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿಯೂ ಭೂಕಂಪದ ಕಂಪನದ ಅನುಭವವಾಗಿತ್ತು. ಅಕ್ಟೋಬರ್ 15 ರಂದು, ಹರಿಯಾಣದಲ್ಲಿ 3.1 ತೀವ್ರತೆಯ ಭೂಕಂಪನದ ನಡುಕ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಅನುಭವವಾಗಿತ್ತು.

ಅಕ್ಟೋಬರ್ 3 ರಂದು ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿದ್ದವು. ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ