ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

6,000 ಉದ್ಯೋಗಿಗಳನ್ನು ವಜಾ ಮಾಡಲು ನಿರ್ಧರಿಸಿದ ‘ಫಿಲಿಪ್ಸ್

Twitter
Facebook
LinkedIn
WhatsApp
Untitled design 8 2

ನವದೆಹಲಿ: 6,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಡಚ್ ಆರೋಗ್ಯ ತಂತ್ರಜ್ಞಾನ ಸಂಸ್ಥೆ ‘ಫಿಲಿಪ್ಸ್’ ಇಂದು ಘೋಷಿಸಿದೆ.‘ಸ್ಲೀಪ್‌ಆಪ್ನಿಯಾ’ ಎನ್ನಲಾಗುವ ನಿದ್ರೆಗೆ ಸಂಬಂಧಿಸಿದ ತೊಂದರೆಗೆ ಪರಿಹಾರವಾಗಿ ಫಿಲಿಪ್ಸ್‌ ಇತ್ತೀಚೆಗೆ ವೆಂಟಿಲೇಟರ್‌ಗಳನ್ನು ಮಾರುಕಟ್ಟೆಗೆ ಬಿಟ್ಟಿತ್ತು.

 ಅದರಲ್ಲಿ ಬಳಸಲಾಗುವ ಫೋಮ್‌ (ನೊರೆಯಂಥ ವಸ್ತು) ವಿಷಕಾರಿ ಎಂಬ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಂಪನಿಯು ಲಕ್ಷಾಂತರ ವೆಂಟಿಲೇಟರ್‌ಗಳನ್ನು ಹಿಂದಕ್ಕೆ ಪಡೆದಿದೆ. ಇದರ ನಷ್ಟವನ್ನು ತುಂಬಿಕೊಳ್ಳಲು ಸಂಸ್ಥೆಯ ಉದ್ಯೋಗಿಗಳನ್ನು ತೆಗೆಯುವ ನಿರ್ಧಾರಕ್ಕೆ ಬಂದಿದೆ.ಅರ್ಧದಷ್ಟು ಉದ್ಯೋಗ ಕಡಿತವನ್ನು ಈ ವರ್ಷ ಮಾಡಲಾಗುವುದು.

ಉಳಿದ ಅರ್ಧ ಉದ್ಯೋಗಿಗಳನ್ನು 2025ರ ವೇಳೆಗೆ ಕೆಲಸದಿಂದ ತೆಗೆಯಲಾಗುವುದು ಎಂದು ಕಂಪನಿ ಹೇಳಿದೆ. ತನ್ನ ಲಾಭದಾಯಕತೆಯನ್ನು ಮರಳಿ ಸಾಧಿಸಿಕೊಳ್ಳುವ ಪ್ರಯತ್ನದ ಭಾಗವಾಗಿ ಕಂಪನಿ ಈ ನಿರ್ಧಾರಕ್ಕೆ ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ