ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

75 ವರ್ಷದಾಟಿರುವ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗುವ ಕೊನೆಯ ಅವಕಾಶ! ಈ ಅವಕಾಶವನ್ನು ಕಳೆದುಕೊಳ್ಳಲು ಸಿದ್ದರಿದ್ದಾರೆಯೆ?

Twitter
Facebook
LinkedIn
WhatsApp
75 ವರ್ಷದಾಟಿರುವ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗುವ ಕೊನೆಯ ಅವಕಾಶ! ಈ ಅವಕಾಶವನ್ನು ಕಳೆದುಕೊಳ್ಳಲು ಸಿದ್ದರಿದ್ದಾರೆಯೆ?

ಕರ್ನಾಟಕದಲ್ಲಿ ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಬಹು ಜೋರಾಗಿದೆ. ಈ ನಡುವೆ ತನ್ನ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ 76ರ ಪ್ರಾಯಕ್ಕೆ ಮುಟ್ಟಿದ್ದಾರೆ.
ಬಹುಶಃ ಸಿದ್ದರಾಮಯ್ಯನವರ ಪಾಲಿಗೆ ಇದು ಕೊನೆಯ ಮುಖ್ಯಮಂತ್ರಿ ಆಗುವ ಅವಕಾಶ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.

ಯಾಕೆಂದರೆ 2೦28 ಕ್ಕೆ ಕರ್ನಾಟಕದ ವಿಧಾನಸಭಾ ಚುನಾವಣೆ ನಡೆದಾಗ ಸಿದ್ದರಾಮಯ್ಯನವರಿಗೆ 81 ವರ್ಷ ವಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಾಗುವ ಅವಕಾಶ ತನ್ನ ವಯಸ್ಸಿನ ಕಾರಣದಿಂದ ಅವರಿಗೆ ಸಿಗದೇ ಇರಬಹುದು.
ಯಾಕೆಂದರೆ ದೇಶದ ಇತಿಹಾಸದಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ನಾವು ಮುಖ್ಯಮಂತ್ರಿಯನ್ನು ಇತ್ತೀಚಿನ ದಿನಗಳಲ್ಲಿ ಕಂಡಿರುವುದು ಬಹಳ ಅಪರೂಪ.

ಈ ಎಲ್ಲ ನೆಲೆಗಳಲ್ಲಿ ವಿಶ್ಲೇಷಿಸಿದಾಗ ಈ ಬಾರಿ ಬಿಜೆಪಿ ಹಲವು ವೈಫಲ್ಯಗಳನ್ನು ಕಾಣುತ್ತಿದ್ದು, ಸಿದ್ದರಾಮಯ್ಯನವರು ತಮ್ಮ ವರ್ಚಸ್ಸನ್ನು ಇನ್ನಷ್ಟು ಹಿಗ್ಗಿಸಿಕೊಂಡಿದ್ದಾರೆ. ರಾಜ್ಯಾದ್ಯಂತ ಸಿದ್ದರಾಮಯ್ಯ ಪರ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಈ ಸಂದರ್ಭ ಅವರಿಗೆ ಮುಖ್ಯಮಂತ್ರಿಯಾಗುವ ಬಹುದೊಡ್ಡ ಅವಕಾಶ ಲಭ್ಯವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.


ಆದರೆ ಇನ್ನೊಂದು ಕಡೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ
ಹಠದಲ್ಲಿದ್ದಾರೆ. ಆದರೆ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಬಿಟ್ಟು ಡಿಕೆ ಶಿವಕುಮಾರ್ ಅವರಿಗೆ ಪಟ್ಟ ಕಟ್ಟುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.

ಇನ್ನೊಂದು ಕಡೆಯಲ್ಲಿ ಈ ಅಂತಿಮ ಅವಕಾಶವನ್ನು ಸಿದ್ದರಾಮಯ್ಯ ಉಪಯೋಗಿಸದೆ ಸುಮ್ಮನಿರಲು ಸಾಧ್ಯವೇ? ಇದು ಮಿಲಿಯನ್ ಡಾಲರ್ ಪ್ರಶ್ನೆ. ಯಾಕೆಂದರೆ ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲೂ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸುವ ಹಾಗೂ ಕೇಂದ್ರದಲ್ಲಿ ಅಧಿಕಾರ ಹೊಂದುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಈ ನೆಲೆಯಲ್ಲಿ ಈ ಬಾರಿ ಅಧಿಕಾರ ಹಿಡಿದರೆ ಕರ್ನಾಟಕದಲ್ಲಿ ಮಾತ್ರ ಎಂಬ ಸ್ಥಿತಿಯಲ್ಲಿದೆ. ಇಂತಹ ಒಂದು ಗೋಲ್ಡನ್ ಆಪರ್ಚುನಿಟಿಯನ್ನು ಸಿದ್ದರಾಮಯ್ಯ ಕೈ ಚೆಲ್ಲಲು ಸಾಧ್ಯವೇ ಎಂಬುದು ಬಹುತೇಕ ರಾಜಕೀಯ ವಿಶ್ಲೇಷಕರ ಪ್ರಶ್ನೆ.

ಒಂದು ವೇಳೆ ಸಿದ್ದರಾಮಯ್ಯ ಕೈ ಚೆಲ್ಲಿದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಯಾಗುವ ಅವಕಾಶಗಳು ಲಭ್ಯವಾಗದೇ ಇರಬಹುದು. ಯಾಕೆಂದರೆ ವಯಸ್ಸಿನ ಕಾರಣದಿಂದ ತನಗಿಂತ ಕಿರಿಯರಿಗೆ ಬಿಟ್ಟು ಕೊಡಬೇಕಾದ ಅನಿವಾರ್ಯ ಪ್ರಸಂಗ ಎದುರಾಗಬಹುದು. ಈ ಎಲ್ಲ ಅಂಶಗಳ ಆಧಾರದ ಮೇಲೆ ಈ ಬಾರಿ ಅವಕಾಶ ಕೊನೆಯ ಅವಕಾಶ ವಾಗಿ ಸಿದ್ದರಾಮಯ್ಯನವರ ಮುಂದಿದೆ. ಅದರೊಂದಿಗೆ ಅವರು ಇದು ನನ್ನ ಕೊನೆಯ ಚುನಾವಣೆ ಎಂದಿದ್ದಾರೆ. ಈ ಕೊನೆಯ ಅವಕಾಶವನ್ನು ಅವರು ಕೈ ಚೆಲ್ಲುತ್ತಾರೋ? ಅಥವಾ ಯಾವ ಪರಿಸ್ಥಿತಿ ಬಂದರೂ ಕೈಹಿಡಿಯುತ್ತಾರೋ ಎಂಬುದನ್ನು ಕಾದು ನೋಡಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

Prathima ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು! Twitter Facebook LinkedIn WhatsApp ಉಡುಪಿ: ದಿಲೀಪ್ ಕಾರ್ಕಳದ ಪ್ರತಿಷ್ಠಿತ ಉದ್ಯಮಿ. ಕಾರ್ಕಳ ಪೇಟೆಯಲ್ಲಿರುವ ಬಾಲಾಜಿ ಎಂಬ ಲಾಡ್ಜ್ ಕಮ್

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ