ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

750 ರೂ. ಸಾಲಕ್ಕೆ ಆತ್ಮಹತ್ಯೆ ಮಾಡಿಕೊಂಡ 9ನೇ ತರಗತಿ ವಿದ್ಯಾರ್ಥಿ ; ಡೆತ್ ನೋಟ್ನಲ್ಲಿ ಸಿಕ್ಕ ಕಾರಣವೇನು!

Twitter
Facebook
LinkedIn
WhatsApp
750 ರೂ. ಸಾಲಕ್ಕೆ ಆತ್ಮಹತ್ಯೆ ಮಾಡಿಕೊಂಡ 9ನೇ ತರಗತಿ ವಿದ್ಯಾರ್ಥಿ ; ಡೆತ್ ನೋಟ್ನಲ್ಲಿ ಸಿಕ್ಕ ಕಾರಣವೇನು!

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಖಾಸಗಿ ಶಾಲೆಯ ಹಾಸ್ಟೆಲ್‌ನಲ್ಲಿ (Hostel) ಆ.22 ರಂದು ಆತ್ಮಹತ್ಯೆಗೆ (Suicide) ಶರಣಾಗಿದ್ದ 9ನೇ ತರಗತಿ ವಿದ್ಯಾರ್ಥಿಯ (Student) ಸಾವಿನ ಸತ್ಯ ಹೊರಬಿದ್ದಿದೆ.

9ನೇ ತಗರತಿ ವ್ಯಾಸಂಗ ಮಾಡುತ್ತಿದ್ದ ಶ್ರೀನಿವಾಸ್ (15) ಸಾವಿಗೆ 750 ರೂಪಾಯಿ ಸಾಲವೇ ಕಾರಣವಾಗಿದೆ. ತನ್ನ ಸಾವಿಗೆ ಕಾರಣವನ್ನು ಬರೆದಿಟ್ಟಿರುವ ವಿದ್ಯಾರ್ಥಿ 750 ರೂಪಾಯಿಗೆ ಆಂಟಿ 3000 ರೂ.  ಕೇಳಿದ್ದಾರೆ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

ಆ ಆಂಟಿ ವಾರ್ಡನ್‌ ಅಥವಾ ಹಾಸ್ಟೆಲ್‍ನ ಬೇರೆ ಸಿಬ್ಬಂದಿಯೋ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಇದೀಗ ಡೆತ್ ನೋಟ್ ಹೊರಬಂದಿದ್ದು ಆತನ ಸಾವಿಗೆ ಕಾರಣಕರ್ತರಾದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಮೃತ ಬಾಲಕನ ತಂದೆ ಆಗ್ರಹಿಸಿದ್ದಾರೆ.

ಮೃತ ಬಾಲಕ ಶ್ರೀನಿವಾಸ್ ತಂದೆ ನಿವೃತ್ತ ಯೋಧರಾಗಿದ್ದು, ಸೇನೆಯಿಂದ (Army) ವಾಪಸ್ ಬಂದ ಬಳಿಕ ಕೊಪ್ಪದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಸರ್ಕಾರಿ ಸೇವೆ ಸಲ್ಲಿಸುತ್ತಿದ್ದರು. ಕೊಪ್ಪದಿಂದ ಅಜ್ಜಂಪುರ ತಾಲೂಕಿಗೆ ವರ್ಗಾವಣೆಯಾದ ಬಳಿಕ ಮಗನನ್ನು ಖಾಸಗಿ ಶಾಲೆಯ ಹಾಸ್ಟೆಲಿಗೆ ಸೇರಿಸಿ ಬಂದಿದ್ದರು.

ಡೆತ್ ನೋಟ್ ಹೊರ ಬರುತ್ತಿದ್ದಂತೆ ಬಾಲಕನ ಪೋಷಕರು ಹಾಗೂ ಸಂಬಂಧಿಕರು ಕೂಡ ಅವನಿಗೆ ಹಣ ಕೊಟ್ಟವರು ಯಾರು? ಕೊಟ್ಟದ್ದು ಯಾಕೆ ? 750 ರೂ. ನೀಡಿ 3000 ರೂ. ಕೇಳಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಹಾಸ್ಟೆಲಿನಲ್ಲಿ ಅವನಿಗೆ ಹಣ ಕೊಟ್ಟವರು ಹಾಸ್ಟೆಲ್ ವಾರ್ಡನ್ ಅಥವಾ ಇತರೆ ಮಹಿಳಾ ಸಿಬ್ಬಂದಿ ಎನ್ನುವುದು ತನಿಖೆಯಿಂದ ಹೊರಬರಬೇಕಿದೆ. ಮಗನ ಸಾವಿಗೆ ನ್ಯಾಯ ಸಿಗದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪೋಷಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಡೂರು ತಾಲೂಕಿನ ಹಿರೇಬಳ್ಳೇಕೆರೆ ಗ್ರಾಮದ ಜನ ಕೂಡ ಬಾಲಕನ ಸಾವಿಗೆ ಸೂಕ್ತ ನ್ಯಾಯ ಸಿಗದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಚಾಲಕನಿಗೆ ತಲೆ ಸುತ್ತು ಬಂದು ಡಿವೈಡರ್‌ಗೆ ಡಿಕ್ಕಿಯಾಗಿ BMTC ವೋಲ್ವೋ ಬಸ್ ಪಲ್ಟಿ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್ (BMTC Volvo Bus) ಪಲ್ಟಿ ಹೊಡೆದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Airport) ಹೆಚ್‍ಎಸ್‍ಆರ್ ಲೇಔಟ್ (HSR Layout) ಕಡೆ ಬಿಎಂಟಿಸಿ ವೋಲ್ವೋ ಬಸ್ (ನಂಬರ್ KA 57 f 0237) ಬರುತ್ತಿತ್ತು. ಆದರೆಪ್ಯಾಲೇಸ್ ಗುಟ್ಟಹಳ್ಳಿ ಫ್ಲೈಓವರ್ ಹತ್ತುವಾಗ ಬಸ್ ಪಲ್ಟಿಯಾಗಿದೆ.

ಚಾಲಕನಿಗೆ ತಲೆ ಸುತ್ತು ಬಂದ ಕಾರಣ ಬಸ್ ನಿಯಂತ್ರಣ ಕಳೆದು ಕೊಂಡಿದೆ. ಬಸ್ ಸೈಡ್ ಗೆ ಹಾಕುವಷ್ಟರಲ್ಲಿ ಡಿವೈಡರ್ ಗೆ ಹೊಡೆದು ಪಲ್ಟಿಯಾಗಿದೆ. ಅವಘಡದ ವೇಳೆ ಚಾಲಕ ನಿರ್ವಾಹಕ ಸೇರಿ 13 ಮಂದಿ ಬಸ್ಸಿನಲ್ಲಿದ್ದರು. ಘಟನೆಯಿಂದ ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನ ತಲೆಗೆ ಪೆಟ್ಟು ಬಿದ್ದಿದೆ.

ಸದಾಶಿವನಗರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆಯಿಂದಾಗಿ ಪ್ಯಾಲೇಸ್ ರೋಡ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ತಡರಾತ್ರಿವರೆಗೆ ಆಗಿದ್ದ ಟ್ರಾಫಿಕ್ ಕ್ಲೀಯರ್ ಮಾಡಲು ಪೊಲೀಸರು ಹರಸಾಹಸ ಪಟ್ಟರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist