8 ಕನ್ನಡಿಗರು ಸೇರಿ 106 ಪುರಸ್ಕೃತರಿಗೆ ಇಂದು ಪದ್ಮಪ್ರಶಸ್ತಿ ಪ್ರದಾನ
ನವದೆಹಲಿ: 2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಸಾಹಿತಿ ಎಸ್.ಎಲ್.ಭೈರಪ್ಪ ಸೇರಿದಂತೆ ಹಲವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
2023ನೇ ಸಾಲಿನಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುರ್ಮು (President Draupadi Murmu) ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (S.M.Krishna) ಅವರು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದು, ಸಾಹಿತಿ ಭೈರಪ್ಪ (Bhairappa) ಹಾಗೂ ಸುಧಾಮೂರ್ತಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಉಳಿದಂತೆ ಕರ್ನಾಟಕದಿಂದ ವಿಜ್ಞಾನಿ ಖಾದರ್ವಲ್ಲಿ ದುಡೇಕುಲ, ಉಮ್ಮತ್ತಾಟ್ (Ummattat dance)ನೃತ್ಯ ಕಲಾವಿದೆ ರಾಣಿ ಮಾಚಯ್ಯ, ತಮಟೆ ವಾದಕ ಮುನಿವೆಂಕಟಪ್ಪ, ರಶೀದ್ ಅಹಮದ್ ಖಾದ್ರಿ, ಎಸ್.ಸುಬ್ಬರಾಮನ್ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರಲ್ಲದೇ ಖ್ಯಾತ ಗಾಯಕಿ ವಾಣಿ ಜಯರಾಂ ಹಾಗೂ ಆಸ್ಕರ್ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅವರು ಸಹ ಪ್ರಶಸ್ತಿ ಸ್ವೀಕರಿಸಲಿದ್ದಾರೆ.