ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

9 ಐಎಎಸ್ ಅಧಿಕಾರಗಳ ವರ್ಗಾವಣೆ ; ರಾಜ್ಯ ಸರ್ಕಾರ ಆದೇಶ!

Twitter
Facebook
LinkedIn
WhatsApp
WhatsApp Image 2023 07 10 at 9.59.23 PM

ಬೆಂಗಳೂರು: ಆಯುಷ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಮಂಜುನಾಥ್ ಜೆ ಸೇರಿದಂತೆ 9 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರಾಗಿದ್ದ ಶ್ರೀಮತಿ ಸತ್ಯಭಾಮಾ ಸಿ ಅವರನ್ನು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೂಬಾಲನ್ ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಜಯಪುರ ಜಿಲ್ಲೆಯ ಉಪ ಆಯುಕ್ತರಾಗಿ ನಿಯೋಜಿಸಲಾಗಿದೆ. ಅಲ್ಲದೇ ಇದೇ ಜಿಲ್ಲಾ ಪಂಚಾಯತ್ ನ ವಿಜಯಮಹಾಂತೇಶ ಬಿ. ದಾನಮ್ಮನವರ್ ಅವರನ್ನು ಸಹ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.

ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ದರ್ಶನ್ ಎಚ್.ವಿ. ಅವರನ್ನು ಐಟಿ ಮತ್ತು ಬಿಟಿ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. 

ಹುದ್ದೆಯ ನಿರೀಕ್ಷೆಯಲ್ಲಿದ್ದ ಡಾ. ಅನುರಾಧಾ ಕೆ.ಎನ್. ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆಗಿ ವರ್ಗಾವಣೆ ಮಾಡಲಾಗಿದೆ. ಇನ್ನೂ ಅಲ್ಲಿನ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ವರ್ನಿತ್ ನೇಗಿ ಅವರನ್ನು ಕೊಡಗು ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾ ಬಸವಂತಪ್ಪ ಅವರನ್ನು ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

ವರ್ಗಾವಣೆಯಾದ ಆಧಿಕಾರಿ – ವರ್ಗಾವಣೆಯಾದ ಇಲಾಖೆ

1. ಶ್ರೀ ಮಂಜುನಾಥ್ ಜೆ., IAS – Commissioners, Survey Settlement and Land Records, Bangaluru

2.ಶ್ರೀಮತಿ ಸತ್ಯಭಾಮ ಸಿ., IAS – Deputy Commissioner, Hassan District.

3.ಶ್ರೀಮತಿ ಶಿಲ್ಪ ನಾಗ್ ಸಿ.ಟಿ.,IAS – Deputy Commissioner, Chamarajanagara District.

4.ಶ್ರೀ ಭೂಬಾಲನ್ T., IAS – Deputy Commissioner, Vijayapura District.

5.ಶ್ರೀ ದರ್ಶನ್ H.V., IAS – Director IT&BT Bangaluru.

6.ಡಾ.ಅನುರಾಧ K.N., IAS – CEO, Zilla Panchayath Bangalore Rural District.

7.ಶ್ರೀಮತಿ ಪದ್ಮ ಬಸವಂತಪ್ಪ.,IAS- CEO, Zilla Panchayath Kolar District.

8.ಶ್ರೀ ವರ್ಣಿತ್ ನೇಗಿ .,IAS – CEO, Zilla Panchayath Kodagu District.

9.ಶ್ರೀ ನೋಂಜೈ ಮೊಹಮದ್ ಆಲಿ ಅಕ್ರಮ್ ಶಾ ., IAS -Assistant Commissioner Hospete Sub-Division, Vijayanagar.

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ, ಡಿಸಿಎಂ

Anna Bhagya 3

ಬೆಂಗಳೂರು: ಅನ್ನಭಾಗ್ಯ ಯೋಜನೆಯ (Anna Bhagya Scheme) ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಚಾಲನೆ ನೀಡಿದರು. ಇದೇ ವೇಳೆ ಯೋಜನೆಯ ಲೋಗೋ ಕೂಡ ಬಿಡುಗಡೆ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ 10 ಕೆಜಿ ಅಕ್ಕಿಯ ಪೈಕಿ ಐದು ಕೆಜಿ ಅಕ್ಕಿಯ 170 ರೂ. ಹಣವನ್ನು ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಾಕುವ ಮೂಲಕ ಚಾಲನೆ ನೀಡಿದರು. ಬಳಿಕ ಹಂತ ಹಂತವಾಗಿ ಇಡೀ ರಾಜ್ಯದ ಫಲಾನುಭವಿಗಳಿಗೆ ಹಣ ಜಮೆಯಾಗಲಿದೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ​ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದು ಮನಮೋಹನ್​ ಸಿಂಗ್ ನೇತೃತ್ವದ ಯುಪಿಎ ಸರ್ಕಾರ. ಮೊದಲ ಸಂಪುಟದಲ್ಲೇ ಐದು ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿದ್ದೆವು. ನಮ್ಮ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಯೋಜನೆ. ರಾಜ್ಯದ 1.28 ಕೋಟಿ ಕುಟುಂಬಕ್ಕೆ ಅನ್ನಭಾಗ್ಯ ಯೋಜನೆ ತಲುಪುತ್ತದೆ. ರಾಜ್ಯದ 4.42 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ. ಅಂತ್ಯೋದಯ, BPL ಕಾರ್ಡ್​ದಾರರು ಸೇರಿ 4.42 ಕೋಟಿ ಜನರಿಗೆ ಅನುಕೂಲವಾಗಲಿದೆ. ನಾವು ಹೆಚ್ಚುವರಿಯಾಗಿ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಅಂತಾ ಹೇಳಿಲ್ಲ. ಒಟ್ಟು 10 ಕೆಜಿ ಅಕ್ಕಿ ಕೊಡುತ್ತೇವೆ ಅಂತಾ ಹೇಳಿದ್ದೆವು ಎಂದರು.

ಅನ್ನ ಭಾಗ್ಯ ಹೊಸ ಕಾರ್ಯಕ್ರಮ ಏನೂ ಅಲ್ಲ. ನಾವು 2013ರಲ್ಲಿ ಅಧಿಕಾರಕ್ಕೆ ಬಂದಾಗ ಪ್ರಾರಂಭಿಸಿದ್ದೆವು. ಜನರಿಗೆ ಏನು ಭರವಸೆ ಕೊಟ್ಟಿದ್ದೆವು ಅದನ್ನು ಈಡೇರಿಸಬೇಕು. ಜನರಿಗೆ ದ್ರೋಹ ಮಾಡಬಾರದು ಅಂತ ಪ್ರಮಾಣ ವಚನ ವಹಿಸಿಕೊಂಡ ಮೊದಲ ದಿನವೇ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೆವು ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಐದು ಗ್ಯಾರಂಟಿಗಳಲ್ಲಿ ಮೂರನೇ ಗ್ಯಾರಂಟಿಯಾಗಿರುವ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ನಾವು ನುಡಿದಂತೆ ನಡೆದಿದ್ದೇವೆ, ಮುಂದೆಯೂ ನಡೆಯುತ್ತೇವೆ. ನಮ್ಮ ಐದು ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಸರ್ಕಾರ ಹೃದಯ ಶ್ರೀಮಂತಿಕೆ ತೋರಿಸಿ ಅಕ್ಕಿ ಕೊಡಬಹುದಿತ್ತು ಎಂದು ಕುಟುಕಿದ ಅವರು, ನಮಗೂ ಅಕ್ಕಿ ಹೊಂದಿಸುವ ಶಕ್ತಿ ಇದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist