90 ಲಕ್ಷ ರೂ. ಮೌಲ್ಯದ ಅಂಬರ್ ಗ್ರೀಸ್ ವಶ; ಮೂವರ ಬಂಧನ!
ಮಂಗಳೂರು: ಪಣಂಬೂರು ಬೀಚ್ ಬಳಿ ಸೋಮವಾರ ದಾಳಿ ನಡೆಸಿ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಹೊಂದಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮೂವರ ವಶದಿಂದ 90 ಲಕ್ಷ ರೂ. ಮೌಲ್ಯದ 900 ಗ್ರಾಂ ಅಂಬರ್ ಗ್ರೀಸ್ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಉಡುಪಿ ಜಿಲ್ಲೆ ಸಾಲಿಗ್ರಾಮದ ಜಯಕರ (39 ) ಶಿವಮೊಗ್ಗ ಸಾಗರದ ಆದಿತ್ಯ (25) ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾಂವ್ ನ ಲೋಹಿತ್ ಕುಮಾರ್ ಗುರಪ್ಪನವರ್ (39) ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಅಪರಾಧ ವಿಭಾಗದ ಅಧಿಕಾರಿಗಳು ಮತ್ತು ಸಿಬಂದಿಗಳು ದಾಳಿಯನ್ನು ನಡೆಸಿದ್ದಾರೆ.
ಅಂಬರ್ ಗ್ರೀಸ್ ಅಪರೂಪದ ವನ್ಯಜೀವಿ ಉತ್ಪನ್ನವಾಗಿದ್ದು ಅದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರಿ ಮೌಲ್ಯ ಹೊಂದಿದೆ.
ಋತುವಿನ ಸಮಸ್ಯೆ, 3 ದಿನ ಚಿಕಿತ್ಸೆ ಬಳಿಕ ಮಹಿಳೆ ಸಾವು – ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ
ಬೆಂಗಳೂರು: ಋತುವಿನ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಯಲ್ಲಿ 3 ದಿನಗಳಿಂದ ಚಿಕಿತ್ಸೆ ಪಡೆದರೂ ಅದು ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಬಿಹಾರ ಮೂಲದ ನೋವಾಕುಮಾರಿ (25) ಮೃತ ಮಹಿಳೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಆರ್ಮೋರ್ ಪ್ಲಾಸ್ಟಾ ಮೆಡಿ ಡಿವೈಸ್ ಕಂಪನಿಯಲ್ಲಿ ಆಕೆ ಕೆಲಸ ಮಾಡುತ್ತಿದ್ದರು. ಋತುವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅತ್ತಿಬೆಲೆ ಸಮೀಪದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಸೋಮವಾರ ಅವರನ್ನು ಆಪರೇಶನ್ ಥಿಯೇಟರ್‌ಗೆ ಕರೆದುಕೊಂಡು ಹೋಗಿ 2 ಗಂಟೆಗಳ ಬಳಿಕ ಮೃತಪಟ್ಟಿದ್ದಾರೆ.
3 ದಿನ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ. ಇದೀಗ ಮೃತ ಮಹಿಳೆಯ ಸಂಬಂಧಿಕರು ಆಸ್ಪತ್ರೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಆಗಮಿಸಿದ್ದಾರೆ.