ಮಂಗಳವಾರ, ಡಿಸೆಂಬರ್ 24, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಗ್ರಸ್ಥಾನಕ್ಕಾಗಿ ಭಾರತ-ದಕ್ಷಿಣ ಆಫ್ರಿಕಾ ಫೈಟ್, 'ಭಾರತ ಗೆಲ್ಲಲಿ' ಎಂದು ಪಾಕಿಸ್ತಾನ ಪ್ರಾರ್ಥನೆ!!

Twitter
Facebook
LinkedIn
WhatsApp
ಅಗ್ರಸ್ಥಾನಕ್ಕಾಗಿ ಭಾರತ-ದಕ್ಷಿಣ ಆಫ್ರಿಕಾ ಫೈಟ್, ‘ಭಾರತ ಗೆಲ್ಲಲಿ’ ಎಂದು ಪಾಕಿಸ್ತಾನ ಪ್ರಾರ್ಥನೆ!!

ಪರ್ತ್(ಅ.30): ಟಿ20 ವಿಶ್ವಕಪ್‌ನ ಮೊದಲ ವಾರ ಮುಕ್ತಾಯಗೊಂಡಿದ್ದು, ಟೀಂ ಇಂಡಿಯಾ ಸತತ 2 ಗೆಲುವುಗಳೊಂದಿಗೆ ಆರಂಭಿಕ ಮುನ್ನಡೆ ಸಾಧಿಸಿದೆ. ದಕ್ಷಿಣ ಆಫ್ರಿಕಾ ಹಾಗೂ ಜಿಂಬಾಬ್ವೆ ಕೂಡ ರೇಸ್‌ನಲ್ಲಿದ್ದು ಭಾನುವಾರ ಗುಂಪು-2ರಲ್ಲಿರುವ ಎಲ್ಲಾ ತಂಡಗಳು ಕಣಕ್ಕಿಳಿಯಲಿದ್ದು ಅಂಕಪಟ್ಟಿಯಲ್ಲಿ ಕೆಲ ಬದಲಾವಣೆ ನಿರೀಕ್ಷೆ ಮಾಡಲಾಗಿದೆ. ದಿನದ ಮೂರು ಪಂದ್ಯಗಳ ಪೈಕಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಎಲ್ಲರ ಕುತೂಹಲ ಕೆರಳಿಸಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕಾಗಿ ಪೈಪೋಟಿ ನಡೆಯಲಿದೆ.

ಇತ್ತೀಚಿನ ಲಯ ಹಾಗೂ ಬಲಾಬಲವನ್ನು ನೋಡಿದಾಗ ಸಹಜವಾಗಿಯೇ ಭಾರತ ಗೆಲ್ಲುವ ನೆಚ್ಚಿನ ತಂಡ ಎನಿಸಿದೆ. ವಿರಾಟ್‌ ಕೊಹ್ಲಿ ವಿಶ್ವಕಪ್‌ ವೇದಿಕೆಯನ್ನು ಅತ್ಯುತ್ತಮವಾಗಿ ಬಳಸಿಕೊಳ್ಳುತ್ತಿದ್ದು, ಅವರ ಮೇಲೆಯೇ ತಂಡ ಹೆಚ್ಚು ಅವಲಂಬಿತಗೊಂಡಿದೆ. ರೋಹಿತ್‌ ಹಾಗೂ ಸೂರ್ಯಕುಮಾರ್‌ ಸಹ ನೆದರ್‌ಲೆಂಡ್ಸ್ ವಿರುದ್ಧ ಅರ್ಧಶತಕ ಸಿಡಿಸಿದ್ದರು. ಈ ಇಬ್ಬರು ಸ್ಥಿರತೆ ಕಾಯ್ದುಕೊಳ್ಳಬೇಕಿದೆ. ಕೆ.ಎಲ್‌.ರಾಹುಲ್‌ ಕಳಪೆ ಫಾರ್ಮ್‌ನಲ್ಲಿದ್ದು ದೊಡ್ಡ ಇನ್ನಿಂಗ್ಸ್‌ ಆಡಬೇಕಾದ ಒತ್ತಡದಲ್ಲಿದ್ದಾರೆ.

ವಿಶ್ವಕಪ್‌ನಲ್ಲಿ ಆಡುತ್ತಿರುವ ದ.ಆಫ್ರಿಕಾ ತಂಡದಲ್ಲಿ ಗೆಲ್ಲಬೇಕೆನ್ನುವ ಹಸಿವಿದೆ. ತಂಡದ ಯೋಜನೆಯಲ್ಲಿ ಸ್ಪಷ್ಟತೆ ಇದೆ. ಜಿಂಬಾಬ್ವೆ ವಿರುದ್ಧದ ಪಂದ್ಯ ಮಳೆಗೆ ಬಲಿಯಾದರೂ ತಂಡದ ಬ್ಯಾಟಿಂಗ್‌ ನೋಡಿದವರ ಎದೆಯಲ್ಲಿ ನಡುಕ ಹುಟ್ಟಿರದೆ ಇರಲು ಸಾಧ್ಯವಿಲ್ಲ. ಈ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ಬಿಟ್ಟರೆ 200ಕ್ಕೂ ಹೆಚ್ಚು ರನ್‌ ಗಳಿಸಿರುವ ತಂಡ ಅಂದರೆ ಅದು ದ.ಆಫ್ರಿಕಾ ಮಾತ್ರ.

ಅಗ್ರಸ್ಥಾನಕ್ಕಾಗಿ ಭಾರತ-ದಕ್ಷಿಣ ಆಫ್ರಿಕಾ ಫೈಟ್, ‘ಭಾರತ ಗೆಲ್ಲಲಿ’ ಎಂದು ಪಾಕಿಸ್ತಾನ ಪ್ರಾರ್ಥನೆ!!
‘ಭಾರತ ಗೆಲ್ಲಲಿ’ ಎಂದು ಪಾಕಿಸ್ತಾನ ಪ್ರಾರ್ಥನೆ!!

 ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಸೋಲಿನಿಂದಾಗಿ ಕೆಂಗೆಟ್ಟಿರುವ ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡುತ್ತಿದೆ. ಅಚ್ಚರಿಯಾದರೂ ಇದು ಸತ್ಯ… ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ (T20 WorldCup) ಪಾಕಿಸ್ತಾನ ತಂಡದ ಪಯಣ ಬಹುತೇಕ ಅಂತ್ಯವಾಗಿದ್ದು, ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಸೋತಿದ್ದ ಬಾಬರ್ ಅಜಂ ಪಡೆ, ಎರಡನೇ ಪಂದ್ಯದಲ್ಲಿ ದುರ್ಬಲ ಜಿಂಬಾಬ್ವೆ ವಿರುದ್ಧವೂ  ಹೀನಾಯ ಸೋಲು ಅನುಭವಿಸಿತ್ತು. ಆ ಮೂಲಕ ಪಾಕಿಸ್ತಾನ ತಂಡ ಟೂರ್ನಿಯಿಂದ ಬಹುತೇಕ ಔಟ್ ಆಗಿದ್ದು, ಬಾಬರ್ ಅಜಂ ಪಡೆಯ ಟೂರ್ನಿಯ ಭವಿಷ್ಯ ಇದೀಗ ಇತರೆ ತಂಡಗಳ ಫಲಿತಾಂಶದ ಮೇಲೆ ನಿಂತಿದೆ.

ಪಾಕಿಸ್ತಾನ ತಂಡ ಸೆಮಿಸ್‌ಗೆ ತೆರಳಲು ತನ್ನ ಪಾಲಿನ ಉಳಿದ ಎಲ್ಲ 3 ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೇ ಭಾರತ ಸೇರಿದಂತೆ ಕೆಲ ತಂಡಗಳ ಸೋಲು ಗೆಲುವಿನ ಮೇಲೂ ಅವಲಂಬನೆಯಾಗಬೇಕಿದೆ.

ಸೂಪರ್-12 ಗುಂಪು-2ರಲ್ಲಿರುವ 6 ತಂಡಗಳ ಪೈಕಿ ಸತತ ಗೆಲುವು ಸಾಧಿಸಿರುವ ಭಾರತ ಅಗ್ರಸ್ಥಾನದಲ್ಲಿದ್ದರೆ, 2 ಪಂದ್ಯಗಳಲ್ಲೂ ಸೋಲು ಕಂಡಿರುವ ಪಾಕಿಸ್ತಾನ 5ನೇ ಸ್ಥಾನದಲ್ಲಿದೆ. ನೆದರ್ಲ್ಯಾಂಡ್ 6ನೇ ಸ್ಥಾನದಲ್ಲಿದೆ. ಪಾಕಿಸ್ತಾನ ಈಗಾಗಲೇ 2 ಪಂದ್ಯಗಳಲ್ಲಿ ಸೋತಿದ್ದು, ಉಳಿದ 3 ಪಂದ್ಯಗಳಲ್ಲಿ ಗೆಲುವು ನಿರ್ಣಾಯಕವಾಗಿ ಬೇಕಿದೆ. ಜೊತೆಗೆ ರನ್‌ರೇಟ್‌ನತ್ತಲೂ ಗಮನಿಸಬೇಕಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist