ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದ 67 ಅರ್ಹ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Twitter
Facebook
LinkedIn
WhatsApp
ರಾಜ್ಯದ 67 ಅರ್ಹ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2022-23ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು (ಅ.30) ಪ್ರಕಟಿಸಿದೆ. ಈ ಬಾರಿ 67 ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ನವೆಂಬರ್ 1 ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಹಿರಿಯ ನಟರಾದ ದತ್ತಣ್ಣ, ಅವಿನಾಶ್​, ಮುಖ್ಯಮಂತ್ರಿ ಚಂದ್ರು  ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಇನ್ನು 2022-23ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಜನರ ಪಟ್ಟಿ ಈ ಕೆಳಗಿನಂತಿದೆ ನೋಡಿ.

2022 ನೇಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಚಿತ್ರನಟರಾದ ದತ್ತಾತ್ರೇಯ (ದತ್ತಣ್ಣ), ಅವಿನಾಶ್‌, ಸಿಹಿಕಹಿ ಚಂದ್ರು, ಸೋಲಿಗರಲ್ಲಿ ಸಹಕಾರ ಸಂಸ್ಥೆಗಳ ಕುರಿತು ಅರಿವು ಮೂಡಿಸಿದ ಸೋಲಿಗರ ಮಾದಮ್ಮ, ರಾಮನಗರದ ಸಾಲುಮರದ ನಿಂಗಣ್ಣ, ಉಡುಪಿ ಜಿಲ್ಲೆಯ ದೈವ ನರ್ತಕ ಗುಡ್ಡ ಪಾಣಾರ, ಯಕ್ಷಗಾನ ಕಲಾವಿದರಾದ ಎಂ. ಪ್ರಭಾಕರ ಜೋಷಿ, ಸುಬ್ರಹ್ಮಣ್ಯ ಧಾರೇಶ್ವರ, ಪತ್ರಕರ್ತರಾದ ಎಚ್‌.ಆರ್‌. ಶ್ರೀಶ, ಜಿ.ಎಂ. ಶಿರಹಟ್ಟಿ ಪುರಸ್ಕೃತರಲ್ಲಿ ಸೇರಿದ್ದಾರೆ.

ಸಂಕೀರ್ಣ ಕ್ಷೇತ್ರ: ಸುಬ್ಬರಾಮ ಶೆಟ್ಡಿ – ಬೆಂಗಳೂರು, ವಿದ್ವಾನ್ ಗೋಪಾಲ ಕೃಷ್ಣ ಶರ್ಮಾ – ಬೆಂಗಳೂರು, ಶ್ರೀಮತಿ ಸೋಲಿಗರ ಮಾದಮ್ಮ – ಚಾಮರಾಜನಗರ.

ಷಿ‌ ಕ್ಷೇತ್ರ: ಗಣೇಶ್ ತಿಮ್ಮಯ್ಯ – ಕೊಡಗು, ಚಂದ್ರಶೇಖರ್ ನಾರಯಣಪುರ – ಚಿಕ್ಕಮಗಳೂರು.

ವಿಜ್ಞಾನ ತಂತ್ರಜ್ಞಾನ: ಕೆ.ಶಿವನ್ – ಬೆಂಗಳೂರು, ಡಾ.ಡಿ.ಆರ್.ಬಳೂರಗಿ – ರಾಯಚೂರು.

ಪತ್ರಿಕೋದ್ಯಮ: ಎಚ್ ಆರ್ ಶ್ರೀಶಾ – ಬೆಂಗಳೂರು, ಜಿ.ಎಂ.ಶಿರಹಟ್ಟಿ ‌- ಗದಗ.

ಸೈನಿಕ ಕ್ಷೇತ್ರ: ಸು‌ಬೇದಾರ್ ಬಿ.ಕೆ ಕುಮಾರಸ್ವಾಮಿ – ಬೆಂಗಳೂರು.

ಯಕ್ಷಗಾನ ಕ್ಷೇತ್ರ: ಸುಬ್ರಹ್ಮಣ್ಯ ಧಾರೇಶ್ವರ – ಉತ್ತರ ಕನ್ನಡ.

ಸಂಗೀತ ಕ್ಷೇತ್ರದ ಶ್ರೀ ಅನಂತಾಚಾರ್ಯ ಬಾಳಾಚಾರ್ಯ‌, ಜಾನಪದ ಕ್ಷೇತ್ರದ ಶ್ರೀಮತಿ ಸಾವಿತ್ರಿ ಪೂಜಾರ್, ಬಯಲಾಟ ಕ್ಷೇತ್ರದ ಶ್ರೀ ಅಡವಯ್ಯ ಚ.ಹಿರೇಮಠ. ಕ್ರೀಡಾ ಕ್ಷೇತ್ರದ ಶ್ರೀ ದತ್ತಾತ್ರೇಯ ಗೋವಿಂದ ಕುಲಕರ್ಣಿ ಆಯ್ಕೆಯಾಗಿದ್ದು, ಈ ವರ್ಷ ಧಾರವಾಡ ಜಿಲ್ಲೆಯ ಒಟ್ಟು ನಾಲ್ಕು ಜನರಿಗೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹತ್ತು ಸಂಘ ಸಂಸ್ಥೆಗಳಿಗೆ ವಿಶೇಷ ಪ್ರಶಸ್ತಿ ಪ್ರಕಟಿಸಲಾಗಿದೆ. ಪುರಸ್ಕೃತರಿಗೆ ತಲಾ 5 ಲಕ್ಷ ನಗದು, 25 ಗ್ರಾಂ. ಚಿನ್ನ ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು ಎಂದು ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಪುನೀತ್ ರಾಜ್‌ಕುಮಾರ್​ಗೆ ಕರ್ನಾಟಕ ರತ್ನ: ಸ್ಯಾಂಡಲ್​ವುಡ್‌ನ ಪವರ್  ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕನ್ನಡ ರಾಜ್ಯೋತ್ಸವ ದಿನದಂದು ಪ್ರದಾನ ಮಾಡುವುದಾಗಿ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಜೂನಿಯರ್ ಎನ್‍ಟಿಆರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಅಲ್ಲದೇ ಸೂಪರ್ ಸ್ಟಾರ್ ರಜನಿಕಾಂತ್ ಸಹ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಹೂವಿನ ಹಡಗಲಿಯ ಮಲ್ಲಮ್ಮನವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ: ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯ ಮಲ್ಲಮ್ಮ ಅವರಿಗೆ ಪೌರ ಕಾರ್ಮಿಕರ ಕ್ಷೇತ್ರದಲ್ಲಿ ಸೇವೆ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist