ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಮಗು ಬಲಿ

Twitter
Facebook
LinkedIn
WhatsApp
ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಮಗು ಬಲಿ

ಬೆಂಗಳೂರು: ತುಮಕೂರು (Tumkuru) ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ಜೀವಗಳು ಬಲಿಯಾದ ಬೆನ್ನಲ್ಲೇ, ಬೆಂಗಳೂರಿನಲ್ಲೊಂದು ದುರಂತ ನಡೆದಿದೆ. ವೈದ್ಯರ (Doctor) ನಿರ್ಲಕ್ಷ್ಯಕ್ಕೆ 4 ವರ್ಷದ ಮಗು ಬಲಿಯಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ತುಮಕೂರಿನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಇಬ್ಬರು ಅವಳಿ ನವಜಾತ ಶಿಶುಗಳು ಮೃತಪಟ್ಟ ಪ್ರಕರಣ ಮಾಸುವ ಮುನ್ನವೇ, ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ (Indira Gandhi istitute of Childe Helath) ಮತ್ತೊಂದು ದುರಂತ ನಡೆದಿದೆ. ಟ್ರೈನಿ ವೈದ್ಯರ ಚಿಕಿತ್ಸೆಯಿಂದ 4 ವರ್ಷದ ಬುದ್ಧಿಮಾಂದ್ಯ ಬಾಲಕ (Boy) ಮೃತಪಟ್ಟಿದ್ದಾನೆ ಎಂದು ಮೃತ ಬಾಲಕನ ಪೋಷಕರು ಆರೋಪ ಮಾಡಿದರು.

ಜಾಲಹಳ್ಳಿಯ ಡೇವಿಡ್ ಎಂಬವರು ತನ್ನ 4 ವರ್ಷದ ಡಾರ್ವಿನ್ ಎಂಬ ಮಗುವನ್ನು ಭಾನುವಾರ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬೆನ್ನು ಮೂಳೆಯಲ್ಲಿ ನೀರು ತೆಗೆಯಲು, ಪೋಷಕರ ಅನುಮತಿ ಪಡೆಯದೇ ಟ್ರೈನಿ ವೈದ್ಯರು ಚಿಕಿತ್ಸೆ ಮಾಡಿದ್ದಾರೆ. ಚಿಕಿತ್ಸೆಗೂ ಮುನ್ನ ಆಕ್ಟಿವ್ ಆಗಿದ್ದ ಮಗು, ಚಿಕಿತ್ಸೆಯ ನಂತರ ಪ್ರಜ್ಞೆತಪ್ಪಿ ಮೃತಪಟ್ಟಿದ್ದಾನೆ. ತಜ್ಞ ವೈದ್ಯರು ಇಲ್ಲದೇ, ಮನಸ್ಸಿಗೆ ಬಂದಂಗೆ ಚಿಕಿತ್ಸೆ ಕೊಟ್ಟು ನನ್ನ ಮಗುವನ್ನು ಸಾಯಿಸಿದ್ದಾರೆ ಎಂದು ಮೃತ ಬಾಲಕನ ಪೋಷಕರು ತಿಳಿಸಿದರು.

ಆಸ್ಪತ್ರೆಗೆ ತಮ್ಮ ಮಗುವನ್ನು ಕರೆದುಕೊಂಡು ಬಂದಿದ್ದ ಇತರೆ ಪೋಷಕರು ಕೂಡ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ. ಇನ್ನೂ ಇಷ್ಟೆಲ್ಲ ಆದ ಬಳಿಕ, ಆಸ್ಪತ್ರೆಯ ಆಡಳಿತ ಮಂಡಳಿ, ಈ ಘಟನೆಯ ಬಗ್ಗೆ ಸ್ಪಷ್ಟಿಕರಣ ಕೊಡದೇ ಬೇಜವಾಬ್ದಾರಿತನ ಪ್ರದರ್ಶಿಸಿದೆ.

ವೈದ್ಯರ ಬೇಜವಾಬ್ದಾರಿಯನ್ನು ಖಂಡಿಸಿ, ಮೃತ ಬಾಲಕ ಪೋಷಕರು, ಹಾಗೂ ಆಸ್ಪತ್ರೆಯಲ್ಲಿದ್ದ ಜನ, ಮೃತ ಬಾಲಕನ ಶವ ಆಸ್ಪತ್ರೆಯ ಮುಂದಿಟ್ಟು ಪ್ರತಿಭಟನೆ ನಡೆಸಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ