ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಂದೂ ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂದು ಉಲ್ಲೇಖವಿದೆ: ಹೇಳಿಕೆ ತಪ್ಪು ಎಂದಾದರೆ ರಾಜೀನಾಮೆ ಕೊಡುತ್ತೇನೆ ಎಂದ ಸತೀಶ್ ಜಾರಕಿಹೊಳಿ

Twitter
Facebook
LinkedIn
WhatsApp
ಹಿಂದೂ ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂದು ಉಲ್ಲೇಖವಿದೆ: ಹೇಳಿಕೆ ತಪ್ಪು ಎಂದಾದರೆ ರಾಜೀನಾಮೆ ಕೊಡುತ್ತೇನೆ ಎಂದ ಸತೀಶ್ ಜಾರಕಿಹೊಳಿ

ಬೆಳಗಾವಿ: ಹಿಂದೂ ಪದಕ್ಕೆ ಇರುವ ಅರ್ಥದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ (Satish Jarkiholi) ಮತ್ತೊಮ್ಮೆ ಸ್ಪಷ್ಟನೆ ನೀಡಲು ಯತ್ನಿಸಿದರು. ತಮ್ಮ ಹೇಳಿಕೆಯು ವ್ಯಾಪಕ ವಿವಾದಕ್ಕೆ ಗ್ರಾಸವಾದ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ವಿವರ ನೀಡಿದ ಅವರು, ನನ್ನ ಹೇಳಿಕೆಯು ತಪ್ಪು ಎಂದಾದರೆ ಕ್ಷಮೆ ಯಾಚಿಸುವುದಷ್ಟೇ ಅಲ್ಲ, ರಾಜೀನಾಮೆಯನ್ನೂ ಕೊಡುತ್ತೇನೆ ಎಂದರು. ‘ನಾನು ಅರೆಬರೆ ಓದಿದವನಲ್ಲ, 30 ವರ್ಷಗಳಿಂದ ಓದುತ್ತಲೇ ಇದ್ದೇನೆ. ಆಳವಾದ ಅಧ್ಯಯನದ ಅನುಭವದಿಂದಲೇ ನಾನು ಈ ಹೇಳಿಕೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ತಿರುಗೇಟು ನೀಡಿದರು.

‘ಹಿಂದೂ ಎಂಬುದು ಪರ್ಷಿಯನ್ ಭಾಷೆಯಿಂದ ಬಂದ ಶಬ್ದ. ಹಿಂದೂ ಪದದ ಬಗ್ಗೆ ಶಬ್ದಕೋಶದಲ್ಲಿ, ವಿಕಿಪಿಡಿಯಾದಲ್ಲಿ ಇರುವ ವಿವರಣೆಯನ್ನು ನಾನು ಹೇಳಿದ್ದೇನೆ. ಹಿಂದೂ ಪದದ ಬಗ್ಗೆ ಚರ್ಚೆಯಾಗಬೇಕು ಎಂದು ನಾನು ಹೇಳಿದ್ದೇನೆ. ಆದರೆ ನಾನು ಏನು ಹೇಳಿದ್ದೇನೆಯೋ ಅದರ ಬಗ್ಗೆ ಅಥವಾ ಹಿಂದೂ ಪದದ ನಿಜವಾದ ಅರ್ಥದ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಬೇರೆ ಯಾವ್ಯಾವುದೋ ವಿಷಯಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾನು ತಪ್ಪು ಹೇಳಿದ್ದೇನೆಂದು ಸಾಬೀತುಪಡಿಸಿದರೆ ಕ್ಷಮೆಯಾಚಿಸುವುದಷ್ಟೇ ಅಲ್ಲ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದರು.

ಹಿಂದೂ ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂಬ ಅರ್ಥವಿದೆ. ಶಬ್ದಕೋಶ ಮತ್ತು ವಿಕಿಪೀಡಿಯಾದಲ್ಲಿ ಇರುವುದನ್ನೇ ನಾನು ಹೇಳಿದ್ದೇನೆ. ನನ್ನ ಹೇಳಿಕೆಯನ್ನು ಸಾರಾಸಗಟಾಗಿ ವಿರೋಧಿಸುವ ಬದಲು, ಸಮರ್ಪಕವಾಗಿ ಪರಿಶೀಲಿಸಲಿ. ಯಾವುದೇ ಧರ್ಮ, ಜಾತಿ, ಸಮಾಜದ ವಿರುದ್ಧ ನಾನು ಹೇಳಿಕೆ ನೀಡಿಲ್ಲ. ಈಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ, ಅವರಿಗೆ ಸೂಕ್ತ ಎನಿಸುವ ಸಂಸ್ಥೆಗಳಿಗೆ ತನಿಖೆ ಮಾಡಿಸಲಿ. ನನ್ನ ಜತೆ ಚರ್ಚೆಗೆ ಬಂದರೆ ನಾನೇ ಅವರಿಗೆ ಮನವರಿಕೆ ಮಾಡಿಕೊಡುವೆ. ಚರ್ಚೆಗೆ ಬಂದವರಿಗೆ ದಾಖಲೆ ಸಮೇತ ವಿವರಣೆ ನೀಡಲು ಸಿದ್ಧನಿರುವೆ ಎಂದು ಹೇಳಿದರು.

ಹಿಂದೂ ಶಬ್ದಕ್ಕೆ ಅಶ್ಲೀಲ ಎನ್ನುವ ಅರ್ಥವಿದೆ ಎಂದು ನಾನು ಹೇಳಿದ ಬಳಿಕ ನನ್ನ ಹೇಳಿಕೆಯನ್ನು ಎಲ್ಲೆಲ್ಲಿಗೋ ತೆಗೆದುಕೊಂಡು ಹೋಗಿದ್ದಾರೆ. ಮನಸ್ಸಿಗೆ ಬಂದಂತೆ ವ್ಯಾಖ್ಯಾನಿಸುತ್ತಿದ್ದಾರೆ. ಹಿಂದೂ ಶಬ್ದವು ಪರ್ಷಿಯನ್ ಭಾಷೆಯಿಂದ ಬಂದಿದ್ದು ಎಂದು ನಾನು ಹೇಳಿದ್ದೇನೆ. ಅವರು ಕೆಟ್ಟ ಶಬ್ದ ಬಳಸಿದ್ದಾರೆ ಅಂತ ನಾವು ಹೇಳಬೇಕಿತ್ತು. ಆದರೆ ಇವರು ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿದ್ದನ್ನೇ ದೊಡ್ಡದು ಮಾಡಿಕೊಂಡು ಕುಳಿತಿದ್ದಾರೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಲ್ಲ ಎಂದು ಸ್ಪಷ್ಟಪಡಿಸಿದರು.

ಹಿಂದೂ ಶಬ್ದದ ಬಗ್ಗೆ ಪ್ರಸ್ತಾಪಿಸಿ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆಯು ವಿವಾದಕ್ಕೀಡಾದ ನಂತರ ಕಾಂಗ್ರೆಸ್​ನ ಹಿರಿಯ ನಾಯಕರು ಚರ್ಚೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಜಾಧವ್ ನಗರದಲ್ಲಿರುವ ಕಚೇರಿಯಲ್ಲಿ ಸತೀಶ್ ಜಾರಕಿಹೊಳಿ ಮಾಧ್ಯಮಗೋಷ್ಠಿ ಕರೆದಿದ್ದರು. ಕಳೆದ ಭಾನುವಾರ (ನ 6) ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ ‘ಮನೆಮನೆಗೆ ಬುದ್ಧ, ಬಸವ, ಅಂಬೇಡ್ಕರ್ ಕಾರ್ಯಕ್ರಮ’ದಲ್ಲಿ ಹಿಂದೂ ಶಬ್ದದ ಅರ್ಥದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ