ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Tirupati ಲಡ್ಡುಗಳ ತೂಕ ಇಳಿಸಿಲ್ಲ: ಟಿಟಿಡಿ ಸ್ಪಷ್ಟನೆ

Twitter
Facebook
LinkedIn
WhatsApp
Tirupati ಲಡ್ಡುಗಳ ತೂಕ ಇಳಿಸಿಲ್ಲ: ಟಿಟಿಡಿ ಸ್ಪಷ್ಟನೆ

ತಿರುಪತಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ (Social Media) ತಿರುಮಲ ತಿರುಪತಿ ದೇವಸ್ಥಾನದ (Tirumala Tirupati Devasthanam) ಲಡ್ಡುಗಳ (Laddu) ತೂಕವನ್ನು (Weight) 180 ಗ್ರಾಂನಿಂದ 70 ಗ್ರಾಂಗೆ ಕಡಿಮೆ ಮಾಡಲಾಗಿದೆ ಎನ್ನುವ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಟಿಟಿಡಿ (TTD) ಲಡ್ಡುಗಳ ಗಾತ್ರ, ತೂಕ ಅಥವಾ ಗುಣಮಟ್ಟದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದೆ. ‘ಲಡ್ಡುವನ್ನು ‘ಪೋಟು’ ಸಿಬ್ಬಂದಿ ತಮ್ಮ ಕೈಯಿಂದಲೇ ತಯಾರಿಸುತ್ತಿದ್ದು ಇದರ ಗಾತ್ರದಲ್ಲಿ ಅಥವಾ ಗುಣಮಟ್ಟದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಪ್ರತಿ ಲಡ್ಡು ನಿಗದಿ ಪಡಿಸಿದಂತೆ 160 ರಿಂದ 180 ಗ್ರಾಂ ತೂಗುತ್ತದೆ. ಹೀಗಾಗಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಲಾಗುತ್ತಿರುವ ಗಾಳಿ ಸುದ್ದಿಯನ್ನು ನಂಬಬೇಡಿ’ ಎಂದು ಟಿಟಿಡಿ ಭಕ್ತಾದಿಗಳಲ್ಲಿ ಮನವಿ ಮಾಡಿದೆ.

‘ಲಡ್ಡುಗಳನ್ನು ಟ್ರೇನಲ್ಲಿಟ್ಟು ಮಾರಾಟ ಮಾಡುವ ಮುನ್ನ ತೂಕ ಪರೀಕ್ಷಿಸಲಾಗುತ್ತದೆ. ತೂಕ ಯಂತ್ರದ ತಾಂತ್ರಿಕ ದೋಷದಿಂದಾಗಿ ಒಂದು ಕೌಂಟರ್‌ನಲ್ಲಿ ಲಡ್ಡು ತೂಕ 70 ಗ್ರಾಂಗಿಂತ ಕಡಿಮೆ ಇರುವುದಾಗಿ ತೋರಿಸಿದೆ. ಭಕ್ತರು ಇದನ್ನು ದೇವಾಲಯದ ಸಿಬ್ಬಂದಿ ಗಮನಕ್ಕೆ ತರದೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಈ ಮೂಲಕ ದೇವಾಲಯದ (Temple) ಪ್ರತಿಷ್ಠೆಗೆ ಧಕ್ಕೆ ತರಲು ಯತ್ನಿಸಿದ್ದು ವಿಷಾದನೀಯ’ ಎಂದು ಟಿಟಿಡಿ ಹೇಳಿದೆ.

ಲಡ್ಡು ಪ್ರಸಾದ ತಯಾರಿಕೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳುತ್ತೇವೆ ಎಂದೂ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಗುರುವಾರ ಸ್ಪಷ್ಟವಾಗಿ ಸ್ಪಷ್ಟಪಡಿಸಿವೆ. ಲಡ್ಡುಗಳ ಗುಣಮಟ್ಟ ಮತ್ತು ಪ್ರಮಾಣದ ಬಗ್ಗೆ ಭಕ್ತರಿಗೆ ಯಾವುದೇ ಅನುಮಾನ ಬೇಡ ಎಂದೂ ದೇವಸ್ಥಾನದ ಟ್ರಸ್ಟ್ ಕೋರಿದೆ.

ಇತ್ತೀಚೆಗೆ ಭಕ್ತರೊಬ್ಬರು ಲಡ್ಡುವಿನ ತೂಕ ಇರುವುದಕ್ಕಿಂತ ಕಡಿಮೆ ಇದೆ ಎಂದು ದೂರಿದ ನಂತರ TTDಯ ಜಾಹೀರಾತುಗಳು ಸ್ಪಷ್ಟೀಕರಣವನ್ನು ನೀಡಿವೆ. 160-180 ಗ್ರಾಂ ತೂಕ ಇರಬೇಕಾದ ಲಡ್ಡುಗಳು 90-110 ಗ್ರಾಂ ತೂಗುತ್ತಿದ್ದ ವಿಡಿಯೋ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿತ್ತು.

ಗುತ್ತಿಗೆ ಕಾರ್ಮಿಕರಿಗೆ ಈ ಬಗ್ಗೆ ತಿಳುವಳಿಕೆ ಇಲ್ಲದಿರುವುದರಿಂದ ಗೊಂದಲ ಉಂಟಾಗಿದೆ ಎಂದು ದೇವಸ್ಥಾನದ ಟ್ರಸ್ಟ್ ಸಮರ್ಥಿಸಿಕೊಂಡಿದೆ. ವದಂತಿಗಳನ್ನು ನಂಬಬೇಡಿ ಎಂದು ಭಕ್ತರಿಗೆ ಮನವಿ ಮಾಡಿದ ಟಿಟಿಡಿ ಅಧಿಕಾರಿಗಳು, “ಭಕ್ತರು ಸಾಮಾಜಿಕ ಮಾಧ್ಯಮದಲ್ಲಿ ಸಮಸ್ಯೆಯನ್ನು ವರದಿ ಮಾಡಲು ಆಯ್ಕೆ ಮಾಡಿಕೊಂಡಿರುವುದು ಅಹಿತಕರ ಮತ್ತು ಲಕ್ಷಾಂತರ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದೆ” ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist