ಸೋಮವಾರ, ಮೇ 20, 2024
ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೇಣು ಬಿಗಿದ ಸ್ಥಿತಿಯಲ್ಲಿ ಕೇಂದ್ರ ಸಚಿವರ ಸೋದರಳಿಯನ ಶವ ಪತ್ತೆ..!

Twitter
Facebook
LinkedIn
WhatsApp
ನೇಣು ಬಿಗಿದ ಸ್ಥಿತಿಯಲ್ಲಿ ಕೇಂದ್ರ ಸಚಿವರ ಸೋದರಳಿಯನ ಶವ ಪತ್ತೆ..!

ನವದೆಹಲಿ: ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಸೋದರಳಿಯ ನಂದ ಕಿಶೋರ್ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮಾಹಿತಿ ಪ್ರಕಾರ, ಲಕ್ನೋದ ದುಬಗ್ಗದ ಬಿಗಾರಿಯಾ ಪ್ರದೇಶದಲ್ಲಿ ಆಸ್ತಿ ಡೀಲರ್ ಆಗಿ ಕೆಲಸ ಮಾಡುತ್ತಿದ್ದ ನಂದ್ ಕಿಶೋರ್ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಪ್ರಾಥಮಿಕ ತನಿಖೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೇ ವೇಳೆ ನಂದ್ ಕಿಶೋರ್ ಪುತ್ರ ವಿಶಾಲ್ ಈ ಬಗ್ಗೆ ಮಾಹಿತಿ ನೀಡಿದ್ದು, ‘ನಮ್ಮ ತಂದೆ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದರು’ ಎಂದು ಹೇಳಿದ್ದಾರೆ.

ಸ್ಥಳೀಯ ಪೊಲೀಸರು ಪ್ರಕಾರ, ಕೇಂದ್ರ ಸಚಿವರ ಸೋದರಳಿಯ ನಂದ ಕಿಶೋರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ತಿಳಿದುಬಂದಿಲ್ಲ. ಆತ್ಮಹತ್ಯೆಗೆ ಕಾರಣವನ್ನು ಸಹ ಸಂಬಂಧಿಕರು ಹೇಳಲು ಸಾಧ್ಯವಾಗಿಲ್ಲ.ಈಗ ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೌಶಲ್ ಕಿಶೋರ್ ಪ್ರಸ್ತುತ ಸಂಸತ್ತಿನಲ್ಲಿ ಮೋಹನ್‌ಲಾಲ್‌ಗಂಜ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಪ್ರಸ್ತುತ ಅವರು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ